Connect with us

LATEST NEWS

ರಣರಂಗವಾದ ಅಮೆರಿಕ ಸಂಸತ್ : ಟ್ರಂಪ್ ಬೆಂಬಲಿಗರಿಂದ ದಾಂಧಲೆ- ಮಹಿಳೆ ಸಾವು ಕರ್ಪ್ಯೂ ಜಾರಿ..!

Published

on

ರಣರಂಗವಾದ ಅಮೆರಿಕ ಸಂಸತ್ : ಟ್ರಂಪ್ ಬೆಂಬಲಿಗರಿಂದ ದಾಂಧಲೆ- ಮಹಿಳೆ ಸಾವು ಕರ್ಪ್ಯೂ ಜಾರಿ..!

ವಾಷಿಂಗ್ಟನ್ ಡಿಸಿ : ಸಂಸತ್ ಅಧಿವೇಶನ ನಡೆಯುತ್ತಿದ್ದ ಸಮಯದಲ್ಲೇ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಸಂಸತ್ ಭವನಕ್ಕೆ ದಾಳಿ ನಡೆಸಿದ್ದು, ಸಂಘರ್ಷ ಏರ್ಪಟ್ಟಿದೆ.

ಸಂಸತ್ ನಲ್ಲಿ ಎಲೆಕ್ಟೋರಲ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟೋಲ್ ಕಟ್ಟಡಕ್ಕೆ ನುಗ್ಗಿದ ನೂರಾರು ಪ್ರತಿಭಟನಾಕಾರರು ಧಾಂದಲೆ ನಡೆಸಿದರು.

ತಡೆಯಲು ಮುಂದಾದ ಪೊಲೀಸರ ಜೊತೆ ಸಂಘರ್ಷವಾಗಿದ್ದು, ಘಟನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.

ಹಲವರು ಗಾಯಗೊಂಡಿದ್ದಾರೆ.ಚುನಾವಣೆಯಲ್ಲಿ ಸೋಲನುಭವಿಸಿರುವ ಟ್ರಂಪ್ ತಮ್ಮ ಸೋಲಿಗೆ ಚುನಾವಣಾ ಅಕ್ರಮಗಳು ಕಾರಣವಾಗಿದೆ ಎಂದು ಆರೋಪಿಸಿದ್ದರು.

ಇದು ಈ ಸಂಘರ್ಷಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ. ಟ್ರಂಪ್ ಪ್ರಚೋದನಾತ್ಮಕ ಟ್ವೀಟ್ ನಂತರ ಟ್ವಿಟ್ಟರ್ ಸಂಸ್ಥೆ ಡೊನಾಲ್ಡ್ ಟ್ರಂಪ್ ಟ್ವಿಟ್ ಅನ್ನು ಲಾಕ್ ಮಾಡಿದೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ನಗರದಲ್ಲಿ ಕರ್ಫ್ಯೂ ಹೇರಲಾಗಿದೆ. ಭದ್ರತಾ ಮುನ್ನೆಚ್ಚರಿಕೆ ವಹಿಸಲಾಗಿದೆ. ಘಟನೆಯನ್ನು ಖಂಡಿಸಿರುವ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬಿಡೆನ್, ಇದು ಅಮೆರಿಕ ಇತಿಹಾಸದ ಅತ್ಯಂತ ‘ಕರಾಳ ಕ್ಷಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಪ್ರಧಾನಿ ಮೋದಿ ಕಳವಳ:

ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಕೆಡಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.

‘ಗಲಭೆ ಮತ್ತು ಹಿಂಸಾಚಾರದ ಸುದ್ದಿ ತಿಳಿದು ತೀವ್ರ ನೋವಾಗಿದೆ. ಅಧಿಕಾರದ ವ್ಯವಸ್ಥಿತ ಹಾಗೂ ಶಾಂತಿಯುತ ಹಸ್ತಾಂತರ ನಡೆಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಹಾಳುಗೆಡವಲು ಸಾಧ್ಯವಿಲ್ಲ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending