Wednesday, October 5, 2022

ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್ ದುರಂತ ಪ್ರಕರಣ:ತನಿಖೆಗೆ ರಾಜ್ಯ ಸರ್ಕಾರ ಆದೇಶ;

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ನಡೆದ ಎಂ ಆರ್ ಪಿ ಎಲ್  ಟಗ್ ಬೋಟ್ ದುರಂತ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ತಜ್ಞರ ತಂಡ ರಚನೆ ಮಾಡಿ ತನಿಖೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಗೆ ಆದೇಶಿಸಲಾಗಿದೆ.

ಇದೇ ಸಂದರ್ಭ ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಎಂಆರ್​ಪಿಎಲ್ ನಿಂದ ತಲಾ 10ಲಕ್ಷ ರೂ. ಪರಿಹಾರ ನೀಡಲು‌ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.

‘ತೌಕ್ತೆ’ ಚಂಡಮಾರುತದಿಂದ ನಡೆದ ದೋಣಿ ದುರಂತದ ಬಗ್ಗೆ ಎನ್ಎಂಪಿಟಿಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಂಆರ್​ಪಿಎಲ್ ನಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲು ಸರ್ಕಾರದಿಂದ ಆದೇಶಿಸಿರುವುದಾಗಿ ಹೇಳಿದರು.

ಈ ದುರಂತದಲ್ಲಿ ಮೂವರು ಈಜಿ ದಡ ಸೇರಿದ್ದರೆ, ಇಬ್ಬರು ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದು, ಅವರ ಹುಡುಕಾಟದ ಕಾರ್ಯಾಚರಣೆ ಮುಂದುವರಿದಿದೆ.

ಚಂಡಮಾರುತದ ಮುನ್ಸೂಚನೆ ಇದ್ದರೂ ಇವರು ಯಾಕೆ ದಡ ಸೇರಿಲ್ಲ ಎಂಬುದರ ಬಗ್ಗೆ ಈಗಾಗಲೇ ನಾನು ಚರ್ಚೆ ನಡೆಸಿದ್ದು, ಈ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿದ್ದೇನೆ. ಇದರಲ್ಲಿ ಯಾರದೇ ತಪ್ಪಿದ್ದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಅಲ್ಲದೆ ಟಗ್​ನಲ್ಲಿ 20 ಸಾವಿರ ಲೀ. ಡೀಸೆಲ್‌ ಇದ್ದು, ಅದು ಸಮುದ್ರ ಸೇರಿ ಕಲುಷಿತವಾಗದ ಹಿನ್ನೆಲೆ ತಕ್ಷಣ ಮತ್ತೊಂದು ಬೋಟ್ ಮೂಲಕ ಸಕ್ ಮಾಡಿ ತೆಗೆಯುವಂತೆ ಎಂಆರ್​ಪಿಎಲ್ ಸಂಸ್ಥೆಗೆ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Hot Topics

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...