Home ಮಂಗಳೂರು ಬಹುನಿರೀಕ್ಷಿತ "ಇಂಗ್ಲಿಷ್"ಗೂ ಕೊರೊನಾ ಕಂಟಕ: ಬಿಡುಗಡೆ ದಿನಾಂಕ ಮುಂದೂಡಿಕೆ

ಬಹುನಿರೀಕ್ಷಿತ “ಇಂಗ್ಲಿಷ್”ಗೂ ಕೊರೊನಾ ಕಂಟಕ: ಬಿಡುಗಡೆ ದಿನಾಂಕ ಮುಂದೂಡಿಕೆ

ಬಹುನಿರೀಕ್ಷಿತಇಂಗ್ಲಿಷ್ಗೂ ಕೊರೊನಾ ಕಂಟಕ: ಬಿಡುಗಡೆ ದಿನಾಂಕ ಮುಂದೂಡಿಕೆ

ಮಂಗಳೂರು: ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ, ದುಬೈಯ ಖ್ಯಾತ ಉದ್ಯಮಿ, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾ ಬಿಡುಗಡೆ ದಿನಾಂಕವನ್ನು ಇದೀಗ ಮುಂದೂಡಲಾಗಿದೆ.

ಮಂಗಳವಾರ (ಮಾರ್ಚ್ 17) ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ,

‘ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಮಾಲ್ ಹಾಗೂ ಚಿತ್ರಮಂದಿರಗಳನ್ನು ತಾತ್ಕಾಲಿಕ ಬಂದ್ ಮಾಡುವಂತೆ ಆದೇಶ ನೀಡಿದೆ’.

ಈ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ಬಿಡುಗಡೆಯಾಗ ಬೇಕಾಗಿದ್ದ “ಇಂಗ್ಲಿಷ್” ತುಳು ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

ಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಇಚ್ಚೆಯಂತೆ ಚಿತ್ರಮಂದಿರದ ವಿಚಾರದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡು ಚಿತ್ರ ಬಿಡುಗಡೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದರು.

“ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾದ ವರ್ಲ್ಡ್ ಪ್ರಿಮಿಯರ್ ಶೋ ಇತ್ತೀಚಿಗೆ ದುಬೈಯಲ್ಲಿ ನಡೆದಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿತ್ರ ನೋಡಿದ ಪ್ರತಿಯೊಬ್ಬರು ಚಿತ್ರವನ್ನು ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ.

ಚಿತ್ರ ಉತ್ತಮವಾಗಿ ಮೂಡಿ ಬಂದಿದ್ದು, ಚಿತ್ರ ಬಿಡುಗಡೆಯ ಬಳಿಕ ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಿಸಿ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸೂರಜ್ ಶೆಟ್ಟಿ ಮನವಿ ಮಾಡಿಕೊಂಡರು.

ನಟ ನವೀನ್ ಡಿ.ಪಡೀಲ್ ಮಾತನಾಡಿ, ಕೊರೊನ ಬಗ್ಗೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶ ಬಂದಿದ್ದು, ಇದಕ್ಕೆ ನಾವೆಲ್ಲಾ ಸಹಕಾರ ನೀಡಬೇಕಾದದ್ದು ಅನಿವಾರ್ಯ.

ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರದ ಆದೇಶಕ್ಕೆ ಗೌರವ ನೀಡಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಶೀಘ್ರದಲ್ಲೆ ತಿಳಿಸುತ್ತೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಹರೀಶ್ ಶೇರಿಗಾರ್ ಅವರ ಸಹೋದರ ಶ್ರೀನಿವಾಸ್ ಶೇರಿಗಾರ್, ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಜೊತೆ ಕೈಜೋಡಿಸಿಕೊಂಡು ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಧ್ಯಮದವರು ಮಾಡುತ್ತಿರುವುದು ಶ್ಲಾಘನೀಯ ಎಂದರು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...