Connect with us

    FILM

    ಜೂ.14 ರಂದು ತೆರೆಗೆ ಬರಲಿದೆ ‘ತುಡರ್’ ತುಳು ಸಿನಿಮಾ

    Published

    on

    ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂ. 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

    ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ.
    ಈಗಾಗಲೇ ತುಡರ್ ಸಿನಿಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾಥ್೯ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ‌.

    ಮುಂದೆ ಓದಿ..; ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

    ಸಿನಿಮಾಕ್ಕೆ ವಿಲ್ಸನ್ ರೆಬೆಲ್ಲೊ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಸಹ ನಿರ್ಮಾಪಕರಾಗಿ ಹರೀಶ್ ಶೆಟ್ಟಿ, ವಿದ್ಯಾ ಸಂಪತ್ ನಿರ್ದೇಶಕ ತೇಜೇಶ್ ಪೂಜಾರಿ ಎಲ್ಟನ್ ಮಸ್ಕರೇನಸ್, ಕಥೆ , ಚಿತ್ರ ಕಥೆ , ಸಂಭಾಷಣೆ ಸಾಹಿತ್ಯ ಮೋಹನ್ ರಾಜ್. ಸಂಗೀತ  ಪ್ಯಾಟ್ಟ್ಸನ್ ಪಿರೇರಾ , ಸಾಯೀಶ್ ಭಾರದ್ವಾಜ್ ಛಾಯಾಗ್ರಹಣ ಚಂತೂ ಮೆಪ್ಪಯುರು, ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನೃತ್ಯ ಸಂಯೋಜಕ ವಿಜೇತ್ ಆರ್ ನಾಯಕ್, ಸಂಕಲನ  ಗಣೇಶ್ ನೀರ್ಚಾಲ್ , ಪ್ರಚಾರ ವಿನ್ಯಾಸದಲ್ಲಿ  ದೇವಿ ಕಾರ್ಯ ನಿರ್ವಹಿಸಿದ್ದಾರೆ.

    ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
    ತಾರಾಗಣದಲ್ಲಿ ಸಿದ್ಧಾರ್ಥ್ ಎಚ್ ಶೆಟ್ಟಿ, ದೀಕ್ಷಾ ಭಿಷೇ, ಅರವಿಂದ ಬೋಳಾರ್, ರೂಪ ವರ್ಕಾಡಿ, ಸದಾಶಿವ ಅಮೀನ್, ನಮಿತಾ ಕೂಳೂರು, ಎಲ್ಟನ್ ಮಶ್ಚರೇನ್ಹಸ್, ವಿಕಾಸ್ ಪುತ್ರನ್, ಪ್ರಜ್ವಲ್ ಶೆಟ್ಟಿ, ಹರ್ಷಿತಾ ಶೆಟ್ಟಿ, ರಾಧೇಶ್ ಶೆಣೈ ಅನ್ವಿತಾ ಸಾಗರ್, ಜಯಶೀಲ, ಉಮೇಶ್ ಮಿಜಾರ್, ಅಶೋಕ್ ಕುಮಾರ್ , ಉದಯ ಪೂಜಾರಿ, ಮೋಹನ್ ರಾಜ್  ರವರು ಬಣ್ಣ ಹಚ್ಚಿದ್ದು ಪ್ರೇಕ್ಷಕರನ್ನು ಮೋಡಿಮಾಡಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    FILM

    ಬೆಂಗಳೂರಿನಲ್ಲಿ ದರ್ಶನ್ ಅಭಿಮಾನಿಯ ಬಂಧನ

    Published

    on

    ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಆರೋಪ ಹೊತ್ತಿರುವ ದರ್ಶನ್ ಜೈಲು ಪಾಲಾಗಿದ್ದಾರೆ. ಇತ್ತ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಂಧನದಿಂದ ಆಘಾ*ತಕ್ಕೊಳಗಾಗಿದ್ದಾರೆ. ಅಲ್ಲದೇ, ಕೆಲವರು ಟೀಕಾಪ್ರಹಾರಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಬೆಂಗಳೂರಿನಲ್ಲಿ ಓರ್ವ ದರ್ಶನ್ ಅಭಿಮಾನಿಯನ್ನು ಬಂಧಿಸಲಾಗಿದೆ.


    ಚೇತನ್ ಬಂಧಿತ ಆರೋಪಿ. ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

    ಚೇತನ್ ಬಹಿರಂಗವಾಗಿ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋಗಳನ್ನು ನೋಡಿದ ನಿರ್ಮಾಪಕ ಉಮಾಪತಿ ಗೌಡ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ದೂರು ನೀಡಿದ್ದರು.

    ಇದನ್ನೂ ಓದಿ : ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅಭಿಮಾನಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 504,506 ಅಡಿಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.

    Continue Reading

    FILM

    WATCH : ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್; ವೀಡಿಯೋ ವೈರಲ್ ಆಗುತ್ತಿದ್ದಂತೆ ಏನಂದ್ರು ನಟ?

    Published

    on

    ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ ವೀಡಿಯೋ ಸದ್ಯ ವೈರಲ್ ಆಗಿದೆ.


    ವೈರಲ್ ಆಗಿರೋ ವೀಡಿಯೋ ನಟ ನಾಗಾರ್ಜುನ ಅವರದು. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್​ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

    ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

    ಇನ್ನು ವೀಡಿಯೋ ವೈರಲ್​ ಆಗುತ್ತಿದ್ದಂತೆ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ಇದು ಈಗ ತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದಿದ್ದಾರೆ.

    ಇದನ್ನೂ ಓದಿ: ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಅಂದಹಾಗೆ ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್​ ನಟ ಧನುಷ್​ ಕೂಡ ಇದ್ದರು. ಸಿನಿಮಾ ನಟರನ್ನು ಕಂಡಾಗ ಸಿನಿಪ್ರಿಯರು ಹತ್ತಿರ ಬರೋದು ಸಹಜ. ಈ ವೇಳೆ ಬಾಡಿಗಾರ್ಡ್ ಗಳು ನಟರ ಬಳಿ ಬರಲು ಬಿಡುವುದಿಲ್ಲ. ಇಲ್ಲೂ ಹಾಗೇ ಆಗಿದೆ.

    Continue Reading

    FILM

    ಟೀಸರ್ ಮೂಲಕ ಭಾರಿ ಸದ್ದು ಮಾಡುತ್ತಿದೆ ‘ಸಾಂಕೇತ್’

    Published

    on

    ಮಂಗಳೂರು : ಸದ್ಯ ಪೋಸ್ಟರ್, ಟೀಸರ್ ಮೂಲಕ ಭಾರಿ ಹೈಪ್ ಕ್ರಿಯೆಟ್ ಮಾಡಿರುವ ಸಿನಿಮಾ ‘ಸಾಂಕೇತ್’. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಕಥೆಯನ್ನೊಳಗೊಂಡ ವಿನೂತನ ಚಿತ್ರ ಅನ್ನೋದು ಟೀಸರ್ ಮೂಲಕ ಖಚಿತವಾಗಿದೆ. ಟೀಸರ್ ಚಿತ್ರದ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ.

    ಚಿತ್ರ ತಂಡ :

    ಚಿತ್ರದ ನಿರ್ದೇಶನವನ್ನು ಜ್ಯೋತ್ಸ್ನಾ ಕೆ. ರಾಜ್ ಮಾಡಿದ್ದು, ಜೊತೆಗೆ ಸೌಂಡ್ ಡಿಸೈನಿಂಗ್, ಎಡಿಟಿಂಗ್ ಹೊಣೆಯನ್ನೂ ಹೊತ್ತಿದ್ದಾರೆ. ಸ್ಕ್ರೀನ್ ಪ್ಲೇ, ಸಿನಿಮಾಟೋಗ್ರಾಫಿ, ಬಿಜಿಎಂ ಆ್ಯಂಡ್ ವಿಎಫ್ ಎಕ್ಸ್ ರಾಜ್ ಕಾರ್ತಿಕ್ ಮಾಡಿದ್ದಾರೆ.

    ಸಹಾಯಕ ನಿರ್ದೇಶಕನಾಗಿ, ಛಾಯಾಗ್ರಾಹಕನಾಗಿ ಸನತ್ ಕುಮಾರ್ ಕೆಲಸ ಮಾಡಿದ್ದಾರೆ. ಪ್ರಕಾಶ್ ರಾವ್ ಸಾಹಿತ್ಯ ಚಿತ್ರಕ್ಕಿದೆ. ಪ್ರೊಡಕ್ಸನ್ ಮ್ಯಾನೇಜರ್ ಆಗಿ ನಿಶಾನ್ ತೆಲ್ಲಿಸ್ ಕಾರ್ಯ ನಿರ್ವಹಿಸಿದ್ದಾರೆ.

    ಪಾತ್ರವರ್ಗ :

    ತುಳನಾಡ ಪ್ರತಿಭೆ ಚೈತ್ರ ಶೆಟ್ಟಿ, ವಿಕ್ಕಿ ರಾವ್, ಮೋಹನ್ ಶೆಣಿ, ರೂಪಶ್ರೀ ವರ್ಕಾಡಿ, ರಾಹುಲ್ ಅಮೀನ್, ನಿರೀಕ್ಷಾ ಶೆಟ್ಟಿ, ಸದಾಶಿವ ಅಮೀನ್, ನಿರೀಕ್ಷಾ ರಾಣಿ, ರಜೀತ್ ಕದ್ರಿ, ಮೇಘನಾ ರಕ್ಷಿತಾ ಮೊದಲಾವರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಇನ್ನು ಚಿತ್ರದ ಟ್ರೇಲರ್ ಇದೇ ಜೂನ್ 29 ರಂದು ಬಿಡುಗಡೆಯಾಗಲಿದೆ.

    Continue Reading

    LATEST NEWS

    Trending