Monday, January 24, 2022

ದೂರುದಾರರನ್ನು ಠಾಣೆಗೆ ತನ್ನ ಕಾರಿನಲ್ಲೇ ಕಳುಹಿಸಿಕೊಟ್ಟ ಎಸ್‌ಪಿ: ಇನ್ಸ್​​ಪೆಕ್ಟರ್‌ಗೆ ಶಾಕ್‌

ತುಮಕೂರು: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್​​ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ.


ದಂಡಿನಶಿವರ ಪೊಲೀಸ್ ಠಾಣೆ ಸಿಬ್ಬಂದಿ ಎಸ್​ಪಿ ಕಾರು ಇನ್ಸ್​​ಪೆಕ್ಟರ್ ಕಚೇರಿಗೆ ಬರುತ್ತಿದ್ದಂತೆ, ಅಲ್ಲದೇ ಅದರಲ್ಲಿದ್ದ ದೂರುದಾರರನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ತುರುವೇಕೆರೆ ತಾಲೂಕಿನ ದಂಡಿನಶಿವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೋಡಿ ಹಳ್ಳಿಯಲ್ಲಿ ಶಿವಕುಮಾರ್ ಮತ್ತು ಚಂದನ್ ಎಂಬ ಇಬ್ಬರು ನಾಗೇಂದ್ರಪ್ಪ ಎಂಬವರ ಮೇಲೆ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕಾಗಿ ತೀವ್ರವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ ನಾಗೇಂದ್ರಪ್ಪ ಅವರು ದಂಡಿನಶಿವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕಿದ್ದರು. ಅಲ್ಲದೇ ಅನೇಕ ಬಾರಿ ನಾಗೇಂದ್ರಪ್ಪ ಅವರು ಸಬ್ ಇನ್ಸ್​​ಪೆಕ್ಟರ್ ಶಿವಲಿಂಗಪ್ಪ ಅವರಿಗೆ ಮನವಿ ಮಾಡಿದ್ದರೂ ಸ್ಪಂದಸಿರಲಿಲ್ಲ.

ಜತೆಗೆ ಆರೋಪಿಗಳನ್ನು ಬಂಧಿಸಲು ಬಾಡಿಗೆ ಕಾರು ತೆಗೆದುಕೊಂಡು ಬಾ ಎಂದು ಪುನಃ ದೂರುದಾರ ನಾಗೇಂದ್ರಪ್ಪ ಅವರಿಗೆ ಹೇಳುತ್ತಿದ್ದರು ಎನ್ನಲಾಗಿದೆ.

ಸಬ್​​ ಇನ್ಸ್​ಪೆಕ್ಟರ್ ಶಿವಲಿಂಗಪ್ಪ ಅವರ ವರ್ತನೆಗೆ ಬೇಸತ್ತಿದ್ದ, ನಾಗೇಂದ್ರಪ್ಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಎಸ್​ಪಿ ರಾಹುಲ್ ಕುಮಾರ್ ಅವರು ಸ್ವತಃ ತಮ್ಮ ಕಾರಿನಲ್ಲಿಯೇ ದೂರುದಾರರನ್ನು ತುರುವೇಕೆರೆ ಇನ್ಸ್​​ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Hot Topics

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...