Thursday, March 23, 2023

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.

ಈ ಅಂಕಿ ಅಂಶ ಇನ್ನೂ ಏರುತ್ತಲೇ ಇದೆ.

ಟರ್ಕಿ-ಸಿರಿಯಾ ಭೂಕಂಪದಿಂದ ಸಾವಿನ ಸಂಖ್ಯೆ 15,000 ದಾಟಿದ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದೃಢಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿಗಳು ಭೂಕಂಪದಿಂದ ಉಂಟಾದ ವಿನಾಶದ ಪ್ರಮಾಣವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದ್ದಾರೆ.

ಸಿರಿಯಾದಲ್ಲಿ ಒಟ್ಟು ಸಾವಿನ ಸಂಖ್ಯೆ 2,992 ಕ್ಕೆ ತಲುಪಿದೆ. ವಾಯುವ್ಯದಲ್ಲಿ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ 1,730 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

2011ರಲ್ಲಿ ಜಪಾನ್ ನಲ್ಲಿ ಭೂಕಂಪನ ಹಾಗೂ ಅದರಿಂದ ಸೃಷ್ಟಿಯಾದ ಸುನಾಮಿಗೆ 20000 ಮಂದಿ ಬಲಿಯಾಗಿದ್ದರು. ಅದಾದ ನಂತರ ಕಳೆದೊಂದು ದಶಕದ ಅವಧಿಯಲ್ಲಿ ಸಂಭವಿಸಿದ ಘೋರ ಪ್ರಕೃತಿ ವಿಕೋಪ ಈ ಭೂಕಂಪವಾಗಿದೆ.

ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ.

ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದೀಗ ಎರಡು ಡಜನ್ ರಾಷ್ಟ್ರಗಳಿಂದ ರಕ್ಷಣಾ ಸಿಬ್ಬಂದಿ ಟರ್ಕಿ ಹಾಗೂ ಸಿರಿಯಾಗೆ ತೆರಳಿ, ಜನರ ರಕ್ಷಣೆಗೆ ನೆರವಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...