FILM
ನಟ ಅನಿರುದ್ಧ್‌ಗೆ 2 ವರ್ಷ ಕಿರುತೆರೆಯಲ್ಲಿ ಅವಕಾಶವಿಲ್ಲ: ನಿರ್ಮಾಪಕ ಸಂಘ
Published
2 years agoon
By
Adminಬೆಂಗಳೂರು: ಕನ್ನಡ ಕಿರುತೆರೆಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್ನ ನಾಯಕ ನಟ ಅನಿರುದ್ಧ್ ಅವರನ್ನು 2 ವರ್ಷಗಳ ಕಾಲ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅವಕಾಶ ನೀಡದಂತೆ ನಿರ್ಮಾಪಕರ ಸಂಘ ನಿರ್ಧರಿಸಿದೆ.
ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್‌ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ’ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.
ಸಂಚಿಕೆ ನಿರ್ದೇಶಕರಾದ ಉತ್ತಮ್ ಮಧು ಅವನ್ನು ಶೂಟಿಂಗ್ ಸೆಟ್ನಲ್ಲಿ ಅನಿರುದ್ಧ್ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಅವರನ್ನು ಸೀರಿಯಲ್ನಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ್, ನನ್ನ ವಿರುದ್ಧದ ನಿರ್ಮಾಪಕರ ಸಂಘದ ಆರೋಪ ಸುಳ್ಳು. ಅವರ ಮಕ್ಕಳ ಮೇಲೆ ಪ್ರಮಾಣ ಮಾಡಿ ನನ್ನ ವಿರುದ್ಧ ಆರೋಪ ಮಾಡಲಿ, ನಾನೂ ನನ್ನ ಮಕ್ಕಳ ತಲೆ ಮೇಲೆ ಕೈ ಇಟ್ಟು ಅದಕ್ಕೆಲ್ಲ ಉತ್ತರಗಳನ್ನು ಕೊಡುತ್ತೇನೆ ಎಂದು ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.
FILM
ಪ್ರಭಾಸ್ ಮದುವೆಯಾಗುತ್ತಿರುವ ಹುಡುಗಿ ಬಗ್ಗೆ ಸುಳಿವು ಬಿಟ್ಟು ಕೊಟ್ಟ ನಟ ರಾಮ್ ಚರಣ್
Published
2 days agoon
11/01/2025By
NEWS DESK4ಮಂಗಳೂರು/ಆಂಧ್ರಪ್ರದೇಶ : ತೆಲುಗು ನಟ ಪ್ರಭಾಸ್ ಮದುವೆ ಬಗ್ಗೆ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಅವರ ಮದುವೆಯ ಬಗ್ಗೆ ಯಾವಾಗಲೂ ವದಂತಿಗಳು ಹಬ್ಬುತ್ತಿರುತ್ತದೆ. ಇದೀಗ ಮತ್ತೆ ಪ್ರಭಾಸ್ ಮದುವೆ ವಿಚಾರ ಸುದ್ದಿಯಾಗುತ್ತಿದೆ. ಈ ಬಾರಿ ಗಾಸಿಪ್ ಅಲ್ಲ. ಪ್ರಭಾಸ್ ಮದುವೆ ಬಗ್ಗೆ ನಟ ರಾಮ್ ಚರಣ್ ತೇಜ ಅವರು ಮಾಹಿತಿ ನೀಡಿದ್ದಾರೆ.
ಆಂಧ್ರ ಹುಡುಗಿ ಜೊತೆ ಮದುವೆ!
ನಂದಮೂರಿ ಬಾಲಕೃಷ್ಣ ಅವರ ಜನಪ್ರಿಯ ಅನ್‌ಸ್ಟಾಪೇಬಲ್ ಟಾಕ್ ಶೋನಲ್ಲಿ ರಾಮ್ ಚರಣ್ ಸ್ನೇಹಿತ ಪ್ರಭಾಸ್ ಮದುವೆ ಬಗ್ಗೆ ಸುಳಿವು ನೀಡಿದ್ದಾರೆ. ಬಾಲಕೃಷ್ಣ ಅವರು ಪ್ರಭಾಸ್ ಮದುವೆ ಬಗ್ಗೆ ಕೇಳಿದ್ದಾರೆ. ಈ ವೇಳೆ ರಾಮ್ ಚರಣ್ ನಕ್ಕಿದ್ದಾರೆ. ಪ್ರಭಾಸ್ ಮದುವೆಯ ಕುರಿತು ಸುಳಿವು ನೀಡಿದ್ದಾರೆ. ಆಂಧ್ರಪ್ರದೇಶದ ಗಾನಪವರಂನ ಹುಡುಗಿಯನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ.ಸದ್ಯ ಶೋನ ಟ್ರೇಲರ್ ಬಿಡುಗಡೆಯಾಗಿದ್ದು, ರಾಮ್ ಚರಣ್ ಹೇಳಿರುವ ಕೆಲವು ದೃಶ್ಯಗಳನ್ನು ತೋರಿಸಲಾಗಿದೆ. ಜನವರಿ 14 ರಂದು ಶೋ ಪ್ರಸಾರವಾಗಲಿದೆ. ಹಾಗಾಗಿ ಟ್ರೇಲರ್‌ನಲ್ಲಿ ತೋರಿಸಲಾಗಿರುವ ವಿಚಾರಗಳ ಸ್ಪಷ್ಟನೆ ಶೋ ಪೂರ್ತಿ ನೋಡಿದ ಮೇಲೆ ಗೊತ್ತಾಗಲಿದೆ.
ಈ ಹಿಂದೆ ಬಾಹುಬಲಿ ಸಿನಿಮಾ ವೇಳೆ ಪ್ರಭಾಸ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದರು. ನಾನು ಶೀಘ್ರದಲ್ಲಿ ಮದುವೆಯಾಗುವುದಿಲ್ಲ. ಏಕೆಂದರೆ, ನನ್ನ ಮಹಿಳಾ ಅಭಿಮಾನಿಗಳ ಭಾವನೆಗಳನ್ನು ನೋಯಿಸಲು ನಾನು ಬಯಸುವುದಿಲ್ಲ ಎಂದಿದ್ದರು.
ಪ್ರಭಾಸ್ ಜೊತೆ ಅನುಷ್ಕಾ ಶೆಟ್ಟಿ ಹೆಸರು ಹಲವು ಸಮಯಗಳಿಂದ ತಳುಕು ಹಾಕುತ್ತಿದೆ. ಇತ್ತೀಚೆಗೆ ಕೃತಿ ಸನೊನ್ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎಂಬ ಗುಲ್ಲೂ ಹಬ್ಬಿತ್ತು. ಸದ್ಯ ಪ್ರಭಾಸ್ ಸಲಾರ್ ಬಳಿಕ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಜೊತೆ ಮೂರು ಸಿನಿಮಾ ಮಾಡುವ ಒಪ್ಪಂದ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಶ್ರೀಮಂತನನ್ನು ಬಿಕಾರಿಯನ್ನಾಗಿಸಿತು ಕ್ಯಾಲಿಫೋರ್ನಿಯಾದ ಕಾಡ್ಗಿಚ್ಚು !
ಇನ್ನು ಆರ್ ಆರ್ ಆರ್ ಸಿನಿಮಾ ರಾಮ್ ಚರಣ್‌ಗೆ ದೊಡ್ಡ ಯಶಸ್ಸು ನೀಡಿತ್ತು. ಈಗ ಗೇಮ್ ಛೇಂಜರ್ ಆಗಿ ಅವರು ಬೆಳ್ಳಿ ಪರದೆಯ ಮೇಲೆ ಎಂಟ್ರಿ ಕೊಟ್ಟಿದ್ದಾರೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಬಹುಭಾಷಾ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ.
FILM
ಕಾಟನ್ ಕ್ಯಾಂಡಿ ಹಾಡು: ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ
Published
2 days agoon
11/01/2025By
NEWS DESK2ರ್ಯಾಪರ್ ಚಂದನ್ ಶೆಟ್ಟಿ ಇತ್ತೀಚೆಗಷ್ಟೆ ‘ಕಾಟನ್ ಕ್ಯಾಂಡಿ’ ಹೆಸರಿನ ಹಾಡು ಬಿಡುಗಡೆ ಮಾಡಿದ್ದಾರೆ. ಇನ್ಸ್ಟಾಗ್ರಾಂ ರೀಲ್ಗಳಲ್ಲಿ ತಮ್ಮ ಹಾಡನ್ನು ಸಖತ್ ಪ್ರೊಮೋಷನ್ ಮಾಡುತ್ತಿದ್ದಾರೆ. ಬೇರೆ ಬೇರೆ ಸೆಲೆಬ್ರಿಟಿಗಳಿಂದ ತಮ್ಮ ಹಾಡಿಗೆ ರೀಲ್ಸ್ ಮಾಡಿಸುತ್ತಿದ್ದಾರೆ. ಆದರೆ ಇದೀಗ ಚಂದನ್ ಶೆಟ್ಟಿ ವಿರುದ್ಧ ಇದೀಗ ಕೃತಿ ಚೌರ್ಯ ಆರೋಪ ಎದುರಾಗಿದೆ. ಕನ್ನಡದ ರ್ಯಾಪರ್ ಒಬ್ಬರು, ಚಂದನ್ ಶೆಟ್ಟಿ ತಮ್ಮ ಹಳೆಯ ಹಾಡಿನ ಟ್ಯೂನ್ ಕದ್ದು, ‘ಕಾಟನ್ ಕ್ಯಾಂಡಿ’ ಹಾಡಿನಲ್ಲಿ ಬಳಸಿಕೊಂಡಿದ್ದಾರೆ. ತಾವು ಚಂದನ್ ವಿರುದ್ಧ ಕಾನೂನು ಮೊರೆ ಹೋಗುವುದಾಗಿ ಹೇಳಿದ್ದಾರೆ.
ಯುವರಾಜ್ ಹೆಸರಿನ ಮತ್ತೊಬ್ಬ ರ್ಯಾಪರ್, ಚಂದನ್ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದು, ತಾನು ಆರು ವರ್ಷದ ಹಿಂದೆ ‘ವೈ ಬುಲ್ ಪಾರ್ಟಿ’ ಹಾಡಿನ ಮೊದಲ ಪಲ್ಲವಿ ಹಾಗೂ ಎರಡನೇ ಚರಣ ನಕಲು ಮಾಡಿ ತಮ್ಮ ಹಾಡಿನಲ್ಲಿ ಬಳಸಿಕೊಂಡಿದ್ದಾರೆ. ಚಂದನ್ ಶೆಟ್ಟಿಯೇ ಈ ಬಗ್ಗೆ ಮಾತನಾಡುತ್ತಾರೆ ಎಂದು ಕಾದಿದ್ದೆ ಆದರೆ ಅವರು ಈ ಬಗ್ಗೆ ಎಲ್ಲೂ ಮಾತನಾಡಿಲ್ಲ. ನನ್ನ ಬಳಿಯೂ ಅವರು ಈ ಬಗ್ಗೆ ಕೇಳಿಲ್ಲ. ಹಾಗಾಗಿ ಈಗ ನಾನೇ ಈ ಬಗ್ಗೆ ಮಾತನಾಡುತ್ತಿದ್ದೇನೆ. ಚಂದನ್ ಶೆಟ್ಟಿ ವಿರುದ್ಧ ನಾವು ಕಾನೂನು ಮೊರೆ ಹೋಗಲಿದ್ದೀವಿ’ ಎಂದಿದ್ದಾರೆ ಯುವರಾಜ್.
‘ಆ ಹಾಡನ್ನು ನಾನು ಬಹಳ ಕಷ್ಟಪಟ್ಟು ಮಾಡಿದ್ದೆ. ಆಗಲೇ ಹಣ ಕೂಡಿಟ್ಟು 17 ಲಕ್ಷ ರೂಪಾಯಿ ಖರ್ಚು ಮಾಡಿ ಹಾಡು ಮಾಡಿದ್ದೆ. ‘ಕಾಟನ್ ಕ್ಯಾಂಡಿ’ ಹಾಡಿನಲ್ಲಿ ನನ್ನ ಟ್ಯೂನ್ ಮಾತ್ರವೇ ಅಲ್ಲದೆ ಇನ್ನೊಬ್ಬರ ಬಿಜಿಎಂ ಅನ್ನು ಸಹ ಕದ್ದಿದ್ದಾರೆ. ಚಂದನ್ ಶೆಟ್ಟಿ ಈಗಾಗಲೇ ಬೆಳೆದಿದ್ದಾರೆ. ಆದರೆ ಅವರು ಇನ್ನೊಬ್ಬರನ್ನೂ ಬೆಳೆಯಲು ಬಿಡಬೇಕು. ಚಂದನ್ ಶೆಟ್ಟಿ ನನಗೆ ಮೊದಲಿನಿಂದಲೂ ಪರಿಚಯ. ಟ್ಯೂನ್ ಬೇಕು ಎಂದು ಕೇಳಿದ್ದರೆ ನಾನೇ ಕೊಟ್ಟುಬಿಡುತ್ತಿದ್ದೆ’ ಎಂದಿದ್ದಾರೆ.
‘ಕಾಟನ್ ಕ್ಯಾಂಡಿ’ ಸಿನಿಮಾದ ಹಾಡಿನ ಕೆಲ ಸಾಲುಗಳು, ಯುವರಾಜ್ ಅವರ ಹಳೆಯ ಹಾಡನ್ನು ಹೋಲುತ್ತಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ ಚಂದನ್ ಶೆಟ್ಟಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ ಧ್ರುವ ಸರ್ಜಾ ನಟಿಸಿದ್ದ ‘ಪೊಗರು’ ಸಿನಿಮಾಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡಿದ್ದರು. ಆ ಸಿನಿಮಾದ ಒಂದು ಹಾಡನ್ನು ಚಂದನ್ ಶೆಟ್ಟಿ ಬೇರೊಂದು ಸಿನಿಮಾದಿಂದ ಎತ್ತಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆಗ ಸ್ಪಷ್ಟನೆ ನೀಡಿದ್ದ ಚಂದನ್ ಶೆಟ್ಟಿ ಎರಡೂ ಹಾಡಿನ ಟೆಂಪೊ ಬೇರೆ ಬೇರೆ ಎಂದು ಸಮಜಾಯಿಷಿ ನೀಡಿದ್ದರು.
ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು(ಜ.10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಜಾಮೀನು ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊ*ಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಇತರೆ ಆರೋಪಿಗಳು ತಮ್ಮ ತಮ್ಮ ವಕೀಲರೊಡನೆ ಕೋರ್ಟ್‌ಗೆ ಹಾಜರಾಗಿದ್ದರು. ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದಿದ್ದು, ಅವರೊಂದಿಗೆ ವಕೀಲರು ಸಹ ಆಗಮಿಸಿದ್ದರು.
ಇದನ್ನೂ ಓದಿ : ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶ*ವ ಪತ್ತೆ!
ನ್ಯಾಯಾಲಯಕ್ಕೆ ಹಾಜರಾದ ಎಲ್ಲಾ ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.
LATEST NEWS
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ
ಈ ವಾರ ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಇವರೇ..!
ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್
Trending
- FILM7 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!