Connect with us

    DAKSHINA KANNADA

    ವ್ಯಾಪಾರಿಗಳನ್ನು ವಂಚಿಸುತ್ತಿದ್ದ ಇಬ್ಬರು ಅಂದರ್‌; ಎಚ್ಚರ..!! ಹೀಗೂ ನಡೆಯುತ್ತೆ ಮೋಸ..

    Published

    on

    ಮೂಲ್ಕಿ: ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಸ್ಕೋರ್ಪಿಯೋ ಕಾರಿನಲ್ಲಿ ಬಂದ ಮೂರು ಜನ ಯುವಕರು ಕಿನ್ನಿಗೋಳಿ ಮಾರುಕಟ್ಟೆಯ ಅಂಗಡಿಯೊಂದಕ್ಕೆ ತೆರಳಿ ಸಾಮಾನುಗಳನ್ನು ಖರೀದಿಸಿ ಗೂಗಲ್ ಪೇ ಮಾಡುತ್ತೇವೆ ಎಂದು ಹೇಳಿದ್ದಾರೆ. ಬಳಿಕ 500 ರೂಪಾಯಿ ಕೊಡಿ, ಸಾಮಾನುಗಳ ಹಣಕ್ಕೆ 500 ರೂಪಾಯಿ ಸೇರಿಸಿ ಒಟ್ಟಿಗೆ ಗೂಗಲ್ ಪೇ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂದರ್ಭ ಪಕ್ಕದ ಅಂಗಡಿ ಮಾಲಕರಿಗೆ ಸಂಶಯ ಬಂದು ವಿಚಾರಿಸಿದಾಗ ಇದು ವಂಚನಾ ತಂಡ ಎಂದು ಖಾತ್ರಿಯಾಗಿದೆ.

    ರಜೆ ವಿಚಾರದಲ್ಲಿ ಕಿರಿಕಿರಿ..! ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ.!!

    ಬಳಿಕ ಈ ವಂಚನಾ ತಂಡದ ಮೂವರು ಅಲ್ಲಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಾರ್ವಜನಿಕರು ಬೆನ್ನಟ್ಟಿ ಇಬ್ಬರನ್ನು ಹಿಡಿದು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಓರ್ವ ಪರಾರಿಯಾಗಿದ್ದು ಇಬ್ಬರನ್ನು ಮೂಲ್ಕಿ ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೇ ತಂಡ ಕಳೆದ ಶುಕ್ರವಾರ ಪಕ್ಷಿಕೆರೆಯಲ್ಲಿ ಕೋಳಿ ಮಾಂಸದ ಅಂಗಡಿಗೆ ತೆರಳಿ 25 ಕಿಲೋ ಕೋಳಿ ಮಾಂಸ ತಯಾರು ಮಾಡಿ ಕೊಡಿ ಎಂದು ಹೇಳಿದ್ದು, ಬಳಿಕ ಅಂಗಡಿಯವನ ಬಳಿ 700 ರೂಪಾಯಿ ಕೊಡುವಂತೆ ಹೇಳಿ ಗೂಗಲ್ ಪೇ ಮಡುತ್ತೇನೆಂದು ಹೇಳಿ ಪಡೆದುಕೊಂಡಿದ್ದಾರೆ. ಬಳಿಕ 700 ರೂಪಾಯಿ ಪಡೆದುಕೊಂಡು ಪರಾರಿಯಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಇತಂಹದ್ದೇ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ ಕಟ್ಟೆಯಲ್ಲೂ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending