Connect with us

DAKSHINA KANNADA

ಹನಿಟ್ರಾಪ್ ಜಾಲ ಭೇಧಿಸಿದ ಮಂಗಳೂರು ಸಿಸಿಬಿ: ಇಬ್ಬರ ಬಂಧನ-ಚಿನ್ನಾಭರಣ ವಶ

Published

on

ಮಂಗಳೂರು: ಹನಿಟ್ರಾಫ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಾಸನ ಅರಕಲಗೂಡು ತಾಲೂಕಿನ ಕುಮಾರ್‌ ಯಾನೆ ರಾಜು ಮತ್ತು ಕೊಡಗು ಶನಿವಾರ ಸಂತೆ ಮೈಲಾಪುರ ಗ್ರಾಮದ ಭವ್ಯಾ ದಂಪತಿಯನ್ನು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು ಮಂಗಳೂರಿನ ಪದವಿನಂಗಡಿಯ ಬಾಡಿಗೆ ಮನೆಯ ದಂಪತಿ ನಡುವಿನ ಸಮಸ್ಯೆಯನ್ನು ಪರಿಹರಿಸಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತರನ್ನು ಕರೆಸಿ ಹನಿಟ್ರಾಪ್‌ ಮಾಡಿ ವ್ಯಕ್ತಿಯನ್ನು ಸುಲಿಗೆ ಮಾಡಿದ ಕೃತ್ಯಕ್ಕೆ ಸಂಬಂಧಿಸಿ ಇವರನ್ನು ಬಂಧಿಸಲಾಗಿದೆ.

ಆರೋಪಿಗಳು ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಬಗ್ಗೆಯೂ ತನಿಖೆ ಮುಂದುವರಿಸಲಾಗಿದೆ. ಆರೋಪಿಗಳಿಂದ 37 ಸಾವಿರ ರೂಪಾಯಿ ಮೌಲ್ಯದ 2 ಚಿನ್ನದ ರಿಂಗ್‌, ನಗದು ಹಣ ಹಾಗೂ 31 ಸಾವಿರ ರೂಪಾಯಿ ಮತ್ತು ನಾಲ್ಕು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಜೊತೆ ಇನ್ನೂ ಹಲವರು ಭಾಗಿಯಾಗಿದ್ದಾರೆ, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನಸ್ಪೆಕ್ಟರ್‌ ಅವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ, ಇನ್ನಷ್ಟು ಹಣವನ್ನು ನೀಡದೇ ಇದ್ದಲ್ಲಿ ಸುದ್ದಿ ಮಾಧ್ಯಮಗಳಲ್ಲಿ ಪೋಟೊ ಮತ್ತು ವಿಡಿಯೋ ವೈರಲ್‌ ಮಾಡುವುದಾಗಿಯೂ ಬೆದರಿಕೆ ಹಾಕುತ್ತಿದ್ದರು ಎಂದರು.

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು.

ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್‌ವೊಂದನ್ನು ಲೀಸ್‌ಗೆ ಪಡೆದುಕೊಂಡಿರುವುದಲ್ಲದೇ, ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದಾರೆ.

ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿದ್ದಾರೆ.

ಆರೋಪಿ ಭವ್ಯಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದರು.

Click to comment

Leave a Reply

Your email address will not be published. Required fields are marked *

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

LATEST NEWS

Trending