Connect with us

    LATEST NEWS

    ಗಂಡನ ಮೈಮೇಲಿದೆ ಬ್ರಹ್ಮರಾಕ್ಷಸ‌; ಬೆತ್ತಲೆ ಪೂಜೆ ಮಾಡುವಂತೆ ಪತ್ನಿಗೆ ಕಿರುಕು*ಳ ನೀಡಿದ ಇಬ್ಬರು ಅರೆಸ್ಟ್

    Published

    on

    ಮಂಗಳೂರು/ಕೇರಳ : ಮಹಿಳೆಯರ ಮೇಲಿನ ದೌರ್ಜ*ನ್ಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅತ್ಯಾಚಾ*ರ, ಲೈಂ*ಗಿಕ ದೌರ್ಜನ್ಯ ಪ್ರಕರಣಗಳೂ ಅಲ್ಲಲ್ಲಿ ಕೇಳಿ ಬರುತ್ತಿವೆ. ಇದೀಗ ಮತ್ತೊಂದು ಕೃ*ತ್ಯ ನಡೆದಿದೆ.

    ಗಂಡನ ಮೇಲೆ ಬ್ರಹ್ಮರಾಕ್ಷಸ‌ ಮೆಟ್ಟಿಕೊಂಡಿದೆ ಎಂದು ಹೇಳಿ ಹೆಂಡತಿಗೆ ಬಲವಂತವಾಗಿ ವಿಚಿತ್ರವಾದ ಪೂಜೆ ಮಾಡುವಂತೆ ಒತ್ತಾಯಿಸಲಾಗಿದೆ‌. ಕೇರಳದ ಕೋಝಿಕ್ಕೋಡ್‌ನಲ್ಲಿ ಈ ಘಟನೆ ನಡೆದಿದ್ದು ಇಬ್ಬರನ್ನು ಬಂಧಿಸಲಾಗಿದೆ. ಆಕೆಯ ಪತಿ ಶಮೀರ್ ಮತ್ತು ಆತನ ಸ್ನೇಹಿತ ಪ್ರಕಾಶನ್ ಬಂಧಿತರು.

    ಬೆತ್ತಲೆ ಪೂಜೆ ಮಾಡಲು ಒತ್ತಾಯ : 

    ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪತಿ ಶಮೀರ್ ಆಗಾಗ್ಗೆ ಮನೆಗೆ ಬಂದು ಪತ್ನಿಯ ಮೇಲೆ ದೈಹಿಕ ಹ*ಲ್ಲೆ ನಡೆಸುತ್ತಿದ್ದನಂತೆ.

    ಇದೇ ವಿಚಾರವನ್ನು ಮುಂದಿಟ್ಟುಕೊಂಡು ಲಾಭ ಮಾಡಿಕೊಳ್ಳಲು ತಾನು ಮಂತ್ರವಾದಿ ಎಂದು ಪತಿಯ ಸ್ನೇಹಿತ ಪ್ರಕಾಶನ್ ಎಂಟ್ರಿ ಕೊಟ್ಟಿದ್ದಾನೆ.  ಮಹಿಳೆಗೆ ಕಾಲ್, ಮೆಸೇಜ್ ಮಾಡಿ ಕೌಟುಂಬಿಕ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾನೆ. ಗಂಡನ ದೇಹದಲ್ಲಿ ದುಷ್ಟಶಕ್ತಿ ಇದೆ. ಹೀಗಾಗಿ ಸಮಸ್ಯೆಯುಂಟಾಗಿದೆ. ಅಲ್ಲದೇ, ಪೂಜೆಗಾಗಿ ಸಂತ್ರಸ್ತೆ ಬೆತ್ತಲಾಗಬೇಕು ಎಂದೂ ಹೇಳಿದ್ದಾನೆ.  ಇದಕ್ಕೆ ಆಕೆ ಒಪ್ಪದಿದ್ದಾಗ ಪತಿಯ ಮೂಲಕ ಬಲವಂತಪಡಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ಇದನ್ನೂ ಓದಿ : ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    ಸದ್ಯ ಪೊಲೀಸರು ಗಂಡ ಹಾಗೂ ಮಂತ್ರವಾದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಕೋಝಿಕ್ಕೋಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    BELTHANGADY

    ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ

    Published

    on

    ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್‌ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

    ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ

    Published

    on

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


    ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
    ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Continue Reading

    LATEST NEWS

    Trending