ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ ಎಂದು ಗುರುತಿಸಲಾಗಿದೆ.
ಘಟನೆಯಿಂದ ಮತ್ತೋರ್ವ ವ್ಯಕ್ತಿ ಸುಜಿತ್ ಎಂಬವರಿಗೆ ಗಾಯಗಳಾಗಿದ್ದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.