Connect with us

BANTWAL

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

Published

on

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ನೇತ್ರಾವತಿ ನದಿ ಸಮೀಪದ ತಲೆಮೊಗರು ಎಂಬಲ್ಲಿ‌ ನಡೆದಿದೆ.

ರುಕ್ಮಯ ಸಪಲ್ಯ ಎಂಬವರ ಪುತ್ರ ಅಶ್ವಿತ್ (19) ಎಂಬಾತ ನೀರು ಪಾಲಾಗಿ ನಾಪತ್ತೆಯಾದ ಬಾಲಕನಾಗಿದ್ದಾನೆ.


ಸಜೀಪಪಡು ಪೆರ್ವ ನಿವಾಸಿ ಹರ್ಷಿತ್ ಎಂಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದು ಅಸ್ವಸ್ಥಗೊಂಡಿದ್ದ ಆತನನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶಾಲ್, ವಿಕೇಶ್, ಲಿಖಿತ್ ಎಂಬವರು ಸುರಕ್ಷಿತವಾಗಿ ದಡ ಸೇರಿದ್ದಾರೆ.

ತಲೆಮೊಗರು ನಿವಾಸಿ ನಾಗೇಶ್ ಸಪಲ್ಯ ಎಂಬವರ ಮನೆಯಲ್ಲಿ ಮಗುವಿನ ನಾಮಕರಣ ಕಾರ್ಯಕ್ರಮ ನಡೆದಿದ್ದು ಕಾರ್ಯಕ್ರಮ ಮುಗಿದ ಬಳಿಕ ನಾಗೇಶ್ ಅವರ ಅಣ್ಣ ರುಕ್ಮಯ ಸಪಲ್ಯ ಅವರ ಪುತ್ರ ಅಶ್ವಿಥ್ ಮತ್ತು ಸಂಬಂಧಿಗಳ ಮಕ್ಕಳಾದ ಹರ್ಷಿತ್, ಲಿಖಿತ್, ವಿಕೇಶ್ ಮತ್ತು ವಿಶಾಲ್ ಒಟ್ಟು ಐವರು ಜತೆಯಾಗಿ ನೇತ್ರಾವತಿ ನದಿಗೆ ತೆರಳಲಿ ಈಜಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿ ನಾಪತ್ತೆಯಾದ ಅಶ್ವಿತ್‌ಗಾಗಿ ಹುಡುಕಾಟ ನಡೆದಿದ್ದು ರಾತ್ರಿಯಾದರೂ ಆತ ಪತ್ತೆಯಾಗಿಲ್ಲ. ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಹುಡುಕಾಟಕ್ಕೆ ಅಡಚಣೆಯಾಗಿದೆ.

ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಸ್ಥಳೀಯ ಶಾಸಕ ಯು.ಟಿ.ಖಾದರ್, ನಾಪತ್ತೆಯಾದ ಬಾಲಕನ ಹುಡುಕಾಟಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರ್ ಗೆ ಸೂಚಿಸಿದ್ದು ಸಜಿಪಪಡು ಸಮೀಪದ ಪಾವೂರು, ಹರೇಕಳ, ಅಂಬ್ಲಮೊಗರು, ಉಳಿಯ, ಉಳ್ಳಾಲ ಭಾಗದಲ್ಲಿ ಪತ್ತೆ ಕಾರ್ಯ ನಡೆಸುವಂತೆ ಸೂಚಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending