Monday, July 4, 2022

ಮಾಣಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ: ಓರ್ವ ಸಾವು-ನಾಲ್ವರಿಗೆ ಗಾಯ

ಬಂಟ್ವಾಳ: ಬೆಳ್ಳಂ ಬೆಳಗ್ಗೆ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ನಾಲ್ವರು ಗಾಯಗೊಂಡ ಘಟನೆ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರಾಗಿದ್ದಾರೆ.


ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡಲು ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ.

ಇದೇ ವೇಳೆ ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ.

ಈ ಸಮಯ ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ. ಪ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಆಸ್ಟ್ರೇಲಿಯಾದಲ್ಲಿ ತುಳು ಕೂಟ ಸಿಡ್ನಿಯಿಂದ ಜು.17ರಂದು ‘ಆಟಿಡ್‌ ಒಂಜಿ ದಿನ’

ಸಿಡ್ನಿ: ತುಳುನಾಡಿನ ಸಾಂಪ್ರದಾಯಿಕ ತಿಂಡಿಗಳನ್ನು ಆಸ್ಟ್ರೇಲಿಯಾದಲ್ಲಿರುವ ಅನಿವಾಸಿ ತುಳುವರಿಗೆ ಉಣಬಡಿಸುವ ನಿಟ್ಟಿನಲ್ಲಿ 'ತುಳು ಕೂಟ ಸಿಡ್ನಿ'ಯು ಜು.17ರಂದು ಸಿಡ್ನಿಯಲ್ಲಿ 'ಆಟಿಡ್‌ ಒಂಜಿ ದಿನ' ಆಯೋಜಿಸಿದೆ.ಜು.17 ರಂದು ಮಧ್ಯಾಹ್ನ 12 ಗಂಟೆಗೆ ಈ ಕಾರ್ಯಕ್ರಮ...