Monday, July 4, 2022

ಎರಡು ಕಾರುಗಳ ಭೀಕರ ಅಪಘಾತ: ದಂಪತಿ ಸ್ಪಾಟ್‌ ಡೆತ್‌

ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.


ಓಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಆಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ.
ಡಿಕ್ಕಿ ಹೊಡೆದ ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಗಂಭೀರವಾದ ಗಾಯಗಳಾಗಿವೆ.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ. ಮೃತ ಕುಶಾಲಪ್ಪ ಗೌಡ ಮನೆಯ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...