LATEST NEWS
ವಾಮಂಜೂರಿನಲ್ಲಿ ಕಂದಕ್ಕೆ ಉರುಳಿ ಬಿದ್ದ 2 ಕಾರು: ಓರ್ವ ಗಾಯ
Published
3 years agoon
By
Adminಮಂಗಳೂರು: ನಗರದ ಹೊರವಲಯದ ವಾಮಂಜೂರಿನ ಕೆತ್ತಿಕಲ್ಲು ಬಳಿ ಎರಡು ಕಾರುಗಳು ಢಿಕ್ಕಿ ಹೊಡೆದು ಆಳವಾದ ಕಂದಕಕ್ಕೆ ಬಿದ್ದು, ಓರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಗಾಯಗೊಂಡವರನ್ನು ಆಲ್ಬರ್ಟ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ
ಇಂದು ಮಧ್ಯಾಹ್ನ ಗುರುಪುರ ಕಡೆಯಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ KA19 ME 8429 ನೋಂದಣಿಯ ಟಾಟಾ ಟೀಯಾಗೋ ವಾಹನ ಮುಂದೆ ಹೋಗುತ್ತಿದ್ದ KA19 MJ 1363 ನೋಂದಣಿಯ ಹೋಂಡಾ ಐ ಟೆನ್ ಕಾರನ್ನು ಓವರ್‌ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹೋಂಡಾ ಕಾರಿಗೆ ಢಿಕ್ಕಿಯಾಗಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದೆ.
ಈ ವೇಳೆ ಹೋಂಡಾ ಐ ಟೆನ್ ವಾಹನವೂ ಸಹ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ.
ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೀಯಾಗೋ ವಾಹನದಲ್ಲಿ ಇಬ್ಬರು ಹಾಗೂ ಹೋಂಡಾ ಐಟೆನ್‌ನಲ್ಲಿ 4 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸದ್ಯ ಎಲ್ಲರನ್ನು ರಕ್ಷಿಸಲಾಗಿದೆ.
ಸ್ಥಳದಲ್ಲಿ ಟ್ರಾಫಿಕ್ ಜಾಂ ಉಂಟಾಗಿದ್ದು, ಹೈವೇ ಪ್ಯಾಟ್ರೋಲ್ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಸದ್ಯ ಕಾರುಗಳು ಕಂದಕದಲ್ಲೇ ಇದ್ದು, ಮೇಲೆತ್ತುವ ಕಾರ್ಯ ಇನ್ನು ನಡೆಯಬೇಕಿದೆ.
LATEST NEWS
ಸುಳ್ಳು ಸುದ್ದಿ ನಂಬಿ ಚಲಿಸುತ್ತಿರುವ ರೈಲಿನಿಂದ ನೆ*ಗೆದ 12 ಜನರ ದೇ*ಹ ಛಿ*ದ್ರ ಛಿ*ದ್ರ
Published
37 minutes agoon
23/01/2025ಮಂಗಳೂರು/ಮುಂಬೈ: ರೈಲಿನಡಿ ಸಿಲುಕಿ 11 ಜನರ ದು*ರಂತವಾಗಿ ಸಾ*ವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್‌ನ ಪರಾಂಡ ನಿಲ್ದಾಣದಲ್ಲಿ ನಡೆದಿದೆ.
ರೈಲಿನಲ್ಲಿ ಬೆಂ*ಕಿ ಕಾಣಿಸಿಕೊಂಡ ವದಂತಿ ಹರಡಿತ್ತು. ಇದರಿಂದ ಹೆದರಿದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಿಂದ ಜಿ*ಗಿದಿದ್ದರು. ಪಕ್ಕದ ಹಳಿ ಮೇಲೆ ನಿಂತಾಗ ಮತ್ತೊಂದು ರೈಲು ಡಿ*ಕ್ಕಿಯಾಗಿ ದು*ರಂತ ಸಂಭವಿಸಿ 11 ಜನ ಸಾ*ವನ್ನಪ್ಪಿದ್ದಾರೆ.
ಜಲಗಾಂವ್‌ನ ಪಚೋರಾ ರೈಲು ನಿಲ್ದಾಣದಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗೊಂದಲ ಸೃಷ್ಟಿಯಾಯಿತು. ಹಾಗಾಗಿ ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಗೆ 30-40 ಜನ ಜಿಗಿದಿದ್ದಾರೆ. ಕೆಲವರು ದೂರ ಓಡಿಹೋದರೆ ಇನ್ನು ಕೆಲವರು ಪಕ್ಕದ ಹಳಿ ಮೇಲೆ ನಿಂತಿದ್ದರು. ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಡಿ*ಕ್ಕಿಯಾಗಿದೆ.
ಬ್ರೇಕ್‌ಗಳನ್ನು ಹಾಕುತ್ತಿದ್ದಂತೆ, ರೈಲಿನ ಚಕ್ರಗಳಿಂದ ಕಿ*ಡಿಗಳು ಹೊರಹೊಮ್ಮಿದವು. ಇದರಿಂದ ರೈಲಿನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿತು. ಚಲಿಸುವ ರೈಲಿನಿಂದ ಜಿ*ಗಿದಿದ್ದರಿಂದ ಹಲವರಿಗೆ ಗಾ*ಯಗಳಾಗಿವೆ. ಗಾ*ಯಾಳು ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು. ಕೂಡಲೇ ಮುಂಬೈ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಭ್ರೂಣ ಲಿಂಗ ಕಾಯ್ದೆ ಉಲ್ಲಂಘಿಸಿದರೆ ಕಠಿಣ ಕ್ರಮ
Published
39 minutes agoon
23/01/2025By
NEWS DESK3ಮಂಗಳೂರು : ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಹಾಗೂ ತಪಾಸಣಾ ಸಮಿತಿಯ ಸಭೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ. ಅಮೃತ ಭಂಡಾರಿಯ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲಿಸಬೇಕು. ಪಿಸಿ ಪಿಎನ್‌ಡಿಟಿ ಕಾಯ್ದೆ ಮತ್ತು ಕಾನೂನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಕಳ್ಳತನ ನಡೆದ 7 ಗಂಟೆಯೊಳಗೆ ಆರೋಪಿ ದಂಪತಿ ಅಂದರ್
ಸರಕಾರಿ/ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಾಡಿಸಲು ಬರುವ ಪ್ರತಿ ಗರ್ಭಿಣಿಯರು ಕಡ್ಡಾಯವಾಗಿ ತಾಯಿ ಕಾರ್ಡ್ ತರಲು ಮಾಹಿತಿ ನೀಡಬೇಕು. ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಎಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು.
ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಾ. ತಿಮ್ಮಯ್ಯ ಸೂಚಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಕಾರ್ಯಸೂಚಿಯನ್ನು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿಯ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
LATEST NEWS
ಕಳ್ಳತನ ನಡೆದ 7 ಗಂಟೆಯೊಳಗೆ ಆರೋಪಿ ದಂಪತಿ ಅಂದರ್
Published
56 minutes agoon
23/01/2025By
NEWS DESK3ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮನೆ ಕಳ್ಳತನ ನಡೆದ ಕೇವಲ ಏಳು ಗಂಟೆಯೊಳಗೆ ಆರೋಪಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರದ ಗುಜ್ಜಾಡಿ ನಿವಾಸಿ ವಿನಾಯಕ (41) ಮತ್ತು ಆತನ ಪತ್ನಿ ಪ್ರಮೀಳಾ(30)ಬಂಧಿತ ಆರೋಪಿಗಳು. ಜನವರಿ 21ರಂದು ಬೆಳಗ್ಗೆ ಗಂಗೊಳ್ಳಿಯ ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ನ ಜಿಪ್ ತೆಗೆದು ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಕಡಬ : ಐಷಾರಾಮಿ ಕಾರಿನಲ್ಲಿ ಬಂದು ಡೀಸಿಲ್ ಖರೀದಿ ಮಾಡಿ ಪರಾರಿ
ಗಂಗೊಳ್ಳಿ ಪಿ.ಎಸ್,ಐ. ಹರೀಶ್ ಆರ್. , ಸಿಬಂದಿ ಶಾಂತರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ, ದಿನೇಶ್ ಅವರನ್ನೊಳಗೊಂಡ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಅದೇ ದಿನ ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದರು.
ಬಂಧಿತರಿಂದ 2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸ ಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
LATEST NEWS
ಮಹಾಕುಂಭ ಮೇಳದಲ್ಲಿ ಭಾಗಿಯಾದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್
ಕಡಬ : ಐಷಾರಾಮಿ ಕಾರಿನಲ್ಲಿ ಬಂದು ಡೀಸಿಲ್ ಖರೀದಿ ಮಾಡಿ ಪರಾರಿ
ಪ್ರೀತಿ ಗುಟ್ಟು ರಟ್ಟು: ಆ*ತ್ಮಹ*ತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
ಮಹಾಕುಂಭ ಮೇಳ : ಪುಣ್ಯಸ್ನಾನದಲ್ಲಿ ಭಾಗಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್
ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
Trending
- BIG BOSS19 hours ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS3 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS3 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
- FILM3 days ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು