Connect with us

LATEST NEWS

ವಾಮಂಜೂರಿನಲ್ಲಿ ಕಂದಕ್ಕೆ ಉರುಳಿ ಬಿದ್ದ 2 ಕಾರು: ಓರ್ವ ಗಾಯ

Published

on

ಮಂಗಳೂರು: ನಗರದ ಹೊರವಲಯದ ವಾಮಂಜೂರಿನ ಕೆತ್ತಿಕಲ್ಲು ಬಳಿ ಎರಡು ಕಾರುಗಳು ಢಿಕ್ಕಿ ಹೊಡೆದು ಆಳವಾದ ಕಂದಕಕ್ಕೆ ಬಿದ್ದು, ಓರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಗಾಯಗೊಂಡವರನ್ನು ಆಲ್ಬರ್ಟ್‌ ಫೆರ್ನಾಂಡಿಸ್‌ ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ
ಇಂದು ಮಧ್ಯಾಹ್ನ ಗುರುಪುರ ಕಡೆಯಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ KA19 ME 8429 ನೋಂದಣಿಯ ಟಾಟಾ ಟೀಯಾಗೋ ವಾಹನ ಮುಂದೆ ಹೋಗುತ್ತಿದ್ದ KA19 MJ 1363 ನೋಂದಣಿಯ ಹೋಂಡಾ ಐ ಟೆನ್‌ ಕಾರನ್ನು ಓವರ್‌ಟೇಕ್‌ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಬಸ್‌ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹೋಂಡಾ ಕಾರಿಗೆ ಢಿಕ್ಕಿಯಾಗಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದೆ.

ಈ ವೇಳೆ ಹೋಂಡಾ ಐ ಟೆನ್‌ ವಾಹನವೂ ಸಹ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ.

ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೀಯಾಗೋ ವಾಹನದಲ್ಲಿ ಇಬ್ಬರು ಹಾಗೂ ಹೋಂಡಾ ಐಟೆನ್‌ನಲ್ಲಿ 4 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸದ್ಯ ಎಲ್ಲರನ್ನು ರಕ್ಷಿಸಲಾಗಿದೆ.

ಸ್ಥಳದಲ್ಲಿ ಟ್ರಾಫಿಕ್‌ ಜಾಂ ಉಂಟಾಗಿದ್ದು, ಹೈವೇ ಪ್ಯಾಟ್ರೋಲ್‌ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಸದ್ಯ ಕಾರುಗಳು ಕಂದಕದಲ್ಲೇ ಇದ್ದು, ಮೇಲೆತ್ತುವ ಕಾರ್ಯ ಇನ್ನು ನಡೆಯಬೇಕಿದೆ.

LATEST NEWS

ಈ ದಿನಾಂಕದಂದು ಜನಿಸಿದ ಮಹಿಳೆಯರು ತಮ್ಮ ಗಂಡನಿಗೆ ಅದೃಷ್ಟ ಹೊತ್ತು ತರುತ್ತಾರೆ..!

Published

on

ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಸಂಖ್ಯಾಶಾಸ್ತ್ರದ ಆಧಾರದ ಮೇಲೆ, ವ್ಯಕ್ತಿಯ ಜನ್ಮ ದಿನಾಂಕವು ಅವರ ಭವಿಷ್ಯದ ಜೀವನ ಮತ್ತು ಆರ್ಥಿಕ ವಿಷಯಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಹೀಗಾಗಿ, ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ಮದುವೆಯ ನಂತರ ತಮ್ಮ ಗಂಡನ ಮನೆಯನ್ನು ಪ್ರವೇಶಿಸುವಾಗ ಜತೆಯಲ್ಲಿ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತಾರೆ ಎಂದು ಹೇಳಲಾಗುತ್ತದೆ. ಆ ಮಹಿಳೆಯರು ಜನಿಸಿದ ದಿನಾಂಕಗಳು ಮತ್ತು ಅವರ ವಿಶೇಷ ಗುಣಗಳ ಬಗ್ಗೆ ತಿಳಿದುಕೊಳ್ಳೋಣ.

ಸಂಖ್ಯೆ 6

ಸಂಖ್ಯಾಶಾಸ್ತ್ರದ ಪ್ರಕಾರ, 1ರಿಂದ 9 ಸಂಖ್ಯೆಗಳಲ್ಲಿ 6ನೇ ಸಂಖ್ಯೆಯು ಲೌಕಿಕ ಸುಖಗಳು ಮತ್ತು ಸಂಪತ್ತಿನ ಅಧಿಪತಿಯಾದ ಶುಕ್ರನೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ಆದ್ದರಿಂದ, ಯಾವುದೇ ತಿಂಗಳ 6,15 ಮತ್ತು 24ನೇ ತಾರೀಖಿನಂದು ಜನಿಸಿದ ಮಹಿಳೆಯರು ಶುಕ್ರನ ಪ್ರಭಾವಕ್ಕೆ ಒಳಗಾಗುತ್ತಾರೆ. ಹೀಗಾಗಿ ಅವರು ಸ್ವಾಭಾವಿಕವಾಗಿಯೇ ಐಷಾರಾಮಿ ಜೀವನದತ್ತ ಆಕರ್ಷಿತರಾಗುತ್ತಾರೆ.

ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಅಪಾರ ಸಂಪತ್ತು ಮತ್ತು ಅದೃಷ್ಯವನ್ನು ತರುತ್ತಾರೆ. ಇವರು ತಮ್ಮ ಜೀವನದುದ್ದಕ್ಕೂ ತಮ್ಮ ಗಂಡಂದಿರಿಗೆ ಹಣಕಾಸಿನ ವಿಷಯಗಳಲ್ಲಿ ವಿಶೇಷವಾಗಿ ಬೆಂಬಲ ನೀಡುತ್ತಾರೆ. ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರಿಗೆ ಎಂದಿಗೂ ಹಣದ ಕೊರತೆ ಇರುವುದಿಲ್ಲ.

ವಿಶೇಷ ಗುಣಗಳು

ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ಭಾವನೆಗಳಿಗೆ ಹೆಚ್ಚಿನ ಬೆಲೆ ನೀಡುತ್ತಾರೆ ಮತ್ತು ತಮ್ಮ ಪ್ರೇಮ ಜೀವನದಲ್ಲಿ ಅತಿಯಾಗಿ ತೊಡಗಿಸಿಕೊಂಡಿರುತ್ತಾರೆ. ಜೀವನದಲ್ಲಿ ಸಣ್ಣ ವಿಷಯಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಸುಂದರವಾಗಿ ಕಾಣುವುದರಿಂದ ಇತರರನ್ನು ಸುಲಭವಾಗಿ ಮೋಡಿ ಮಾಡುತ್ತಾರೆ. ತಮ್ಮ ಪ್ರೀತಿಪಾತ್ರರನ್ನು ಹೆಚ್ಚಿನ ಗೌರವದಿಂದ ಕಾಣುತ್ತಾರೆ. ಅವರಿಗೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಮದುವೆಯ ನಂತರವೂ ಅವರು ತಮ್ಮ ವೃತ್ತಿಜೀವನದಲ್ಲಿ ಯಶಸ್ವಿಯಾಗುತ್ತಲೇ ಇರುತ್ತಾರೆ. ಗಂಡನ ಮನೆಯನ್ನು ಇಬ್ಬಾಗಿಸಲು ಎಂದಿಗೂ ಇಚ್ಛಿಸುವುದಿಲ್ಲ. ತಮ್ಮ ಗಂಡಂದಿರನ್ನು ಜೀವನದುದ್ದಕ್ಕೂ ಆರ್ಥಿಕವಾಗಿ ಬೆಂಬಲಿಸುತ್ತಾರೆ. ಅವರು ಸ್ವಾಭಾವಿಕವಾಗಿ ಅತ್ಯುತ್ತಮ ಹಣಕಾಸು ನಿರ್ವಹಣಾ ಕೌಶಲ್ಯಗಳನ್ನು ಹೊಂದಿರುತ್ತಾರೆ.

Continue Reading

FILM

ಖ್ಯಾತ ಚಲನಚಿತ್ರ ನಿರ್ದೆಶಕ ರಾಮ್‌ ಗೋಪಾಲ್‌ ವರ್ಮಾ ಜೈಲಿಗೆ

Published

on

ಮಂಗಳೂರು/ಮುಂಬೈ : ತೆಲುಗು ಚಿತ್ರರಂಗದಲ್ಲಿ ವಿವಾದಗಳಿಗೆ ಕೇರಾಫ್ ಅಡ್ರೆಸ್ ರಾಮ್ ಗೋಪಾಲ್ ವರ್ಮಾ ಅಂದ್ರೆ  ತಪ್ಪಾಗಲ್ಲ. ಹೆಚ್ಚಾಗಿ ಅಡಲ್ಟ್ ಸಿನಿಮಾಗಳನ್ನು ಮಾಡಿ ಯುವಜನತೆ ಗಮನಸೆಳೆದಿದ್ದರು. ಮೇಲಾಗಿ ಇವರ ಚಿತ್ರಗಳ ಮೂಲಕ ಹಲವು ನಾಯಕಿಯರು ಸ್ಟಾರ್‌ ಗಿರಿ ಪಡೆದಿದ್ದಾರೆ ಎನ್ನಬಹುದು. ವರ್ಮಾ ನಿರ್ದೇಶನದ ಒಂದೇ ಒಂದು ಚಿತ್ರ ಅವರ ವೃತ್ತಿಜೀವನವನ್ನು ಬದಲಾಯಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದು ಇದೀಗ ರಾಮ್ ಗೋಪಾಲ್ ವರ್ಮಾರ ಕೊರಳಿಗೆ ಸುತ್ತಿಕೊಂಡಿದೆ. ಮುಂಬೈನ ಅಟಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಇತ್ತೀಚೆಗೆ ಈ ಪ್ರಕರಣದಲ್ಲಿ ಸಂಚಲನಕಾರಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರ್‌ಜಿವಿ ತಪ್ಪಿತಸ್ಥರಾಗಿದ್ದು, ಮೂರು ತಿಂಗಳ ಜೈಲು ಶಿಕ್ಷೆಯ ನೀಡಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್‌ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ.

ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್‌ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್‌ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.

Continue Reading

LATEST NEWS

ಅರಣ್ಯ ನಿಯಮ ಉಲ್ಲಂಘನೆ ಆರೋಪ; ಕಾಂತರ ಚಿತ್ರ ತಂಡಕ್ಕೆ ಕ್ಲೀನ್ ಚಿಟ್

Published

on

ಮಂಗಳೂರು/ಹಾಸನ : ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಚಿತ್ರದ ಚಿತ್ರೀಕರಣದ ವೇಳೆ ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಆದರೆ, ತನಿಖೆಯಲ್ಲಿ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂದು ಕಂಡುಬಂದಿದೆ. ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದ್ದು, ಚಿತ್ರ ತಂಡ ನಿರಾಳ ಆಗಿದೆ.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಕಾಡಿನಲ್ಲಿ ಬ್ಲಾಸ್ಟ್ ಮಾಡಿ ಅರಣ್ಯ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿತ್ತು. ಶೂಟಿಂಗ್ ವೇಳೆ ಕಾಡಿನಲ್ಲಿ ಬೆಂಕಿ ಹಚ್ಚಿ ಸಾಕಷ್ಟು ಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಇದೀಗ ಪ್ರಕರಣದಲ್ಲಿ ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.

ಇದನ್ನೂ ಓದಿ: ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು ಗ್ರಾಮದ ಸಮೀಪ ಇರುವ ಗವಿಗುಡ್ಡ ಪ್ರದೇಶದ ಡೀಮ್ಡ್ ಅರಣ್ಯ ಹಾಗೂ ಗೋಮಾಳ ಜಮೀನಿನಲ್ಲಿ ಚಿತ್ರೀಕರಣ ಮಾಡಲು ಕಾಂತಾರ ತಂಡ ಅನುಮತಿ ಪಡೆದುಕೊಂಡಿತ್ತು. ತಂಡದವರು ಅಕ್ರಮವಾಗಿ ಮರಕಡಿದು, ಸ್ಪೋಟಕ ಬಳಸಿ, ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಕೆಲ ಸ್ಥಳೀಯರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅರಣ್ಯಾಧಿಕಾರಿಗಳ ತಂಡ ಯಾವುದೇ ಉಲ್ಲಂಘನೆ ಮಾಡಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ.

ಸ್ಥಳೀಯರ ಆರೋಪ
ಸಿನಿಮಾ ಚಿತ್ರೀಕರಣದ ವೇಳೆ ಬ್ಲಾಸ್ಟ್ ಮಾಡಲಾಗಿದೆ, ಮರ ಕಡಿಯಲಾಗಿದೆ, ಇದರಿಂದ ಕಾಡು ಪ್ರಾಣಿಗಳು ಗ್ರಾಮಗಳತ್ತ ನುಗ್ಗಿ ಬರುತ್ತಿವೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.

ವರದಿಯಲ್ಲಿ ಏನಿದೆ?
ಜನವರಿ 4ರಂದು ಅನುಮತಿ ಪಡೆಯದೆ ಡೀಮ್ಡ್ ಅರಣ್ಯದಲ್ಲಿ ಶೂಟಿಂಗ್ ಪರಿಕರ ತಂದ ಆರೋಪದಲ್ಲಿ 50 ಸಾವಿರ ದಂಡ ವಿಧಿಸಲಾಗಿತ್ತು. ಇದನ್ನು ಬಿಟ್ಟರೆ ಯಾವುದೇ ಬ್ಲಾಸ್ಟ್ ಮಾಡಿಲ್ಲ, ಮರಗಳನ್ನು ಕಡಿದಿಲ್ಲ, ಮರದಂತೆ ಪೇಂಟ್ ಮಾಡಿದ ವಸ್ತುಗಳನ್ನು ಬಳಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಕಾಂತಾರ ಸಿನಿಮಾ ತಂಡ ನಿರಾಳ ಆಗಿದೆ.

Continue Reading

LATEST NEWS

Trending

Exit mobile version