Home ಪ್ರಮುಖ ಸುದ್ದಿ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ: ಇಬ್ಬರು ಸಾವು, ನಾಲ್ವರು ಅಸ್ವಸ್ಥ..

ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ: ಇಬ್ಬರು ಸಾವು, ನಾಲ್ವರು ಅಸ್ವಸ್ಥ..

ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ: ಇಬ್ಬರು ಸಾವು, ನಾಲ್ವರು ಅಸ್ವಸ್ಥ..

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಇಂದು (ಜೂನ್ 30) ನಡೆದಿದೆ.

ಇಂದು ಬೆಳಗ್ಗೆ ಔಷಧ ಉತ್ಪಾದನಾ ಕಂಪೆನಿಯಲ್ಲಿ ಬೆಂಜಿಮಿಡಾಜೋಲ್ ಎಂಬ ವಿಷಾನಿಲ ಸೋರಿಕೆಯಾಗಿದ್ದು,

ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಕಳೆದ ಎರಡು ತಿಂಗಳ ಅಂತರದಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಜನರು ಸಾವನ್ನಪ್ಪಿರುವ ಮೂರನೇ ಘಟನೆ ಇದಾಗಿದೆ.

ಪರ್ವಾಡದ ಫಾರ್ಮಾ ಸಿಟಿಯೊಳಗೆ ಇರುವ ಸೈನರ್ ಲೈಫ್ ಸೈನ್ಸಸ್‌ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೇಳೆ 30ರಿಂದ 35 ಜನರು ಕೆಲಸ ಮಾಡುತ್ತಿದ್ದರು.

ರಿಯಾಕ್ಟರ್ ಸಮೀಪ ಅನಿಲ ಸೋರಿಕೆಯಾಗಿದ್ದು, ಇಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಅಸ್ವಸ್ಥರಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪರ್ವಾಡ ಠಾಣೆ ಇನ್ಸ್’ಪೆಕ್ಟರ್ ಪವನ್ ಕುಮಾರ್ ಅವರು, ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ನಾಲ್ವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮೃತಪಟ್ಟ ಇಬ್ಬರು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರೇ ಆಗಿದ್ದು, ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಇಬ್ಬರು ಸ್ಥಳದಲ್ಲಿಯೇ ಇದ್ದರು ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಕಳೆದ ರಾತ್ರಿ 11.30ರ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಘಟನೆ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರು ವರದಿ ಪಡೆದುಕೊಂಡಿದ್ದಾರೆ.

ಟಿಡಿಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ.

RECENT NEWS

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..! ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು...

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
error: Content is protected !!