Saturday, September 18, 2021

ದಾರಿಹೋಕನ ಮೇಲೆ ದಾಳಿ: ನಾಯಿಗಳಿಗೆ ಮರಣದಂಡನೆ ಶಿಕ್ಷೆ..!

ಕರಾಚಿ: ದಾರಿಹೋಕರ ಮೇಲೆ ದಾಳಿ ಮಾಡಿದ ತಪ್ಪಿಗೆ ಎರಡು ಸಾಕು ನಾಯಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ವಿಚಿತ್ರ ಘಟನೆ ಪಕ್ಕದ ಪಾಕಿಸ್ತಾನದಲ್ಲಿ ನಡೆದಿದೆ.

ಕರಾಚಿಯ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಎಂಬುವವರು ಕಳೆದ ತಿಂಗಳ ವಾಕಿಂಗ್‌ ಹೋಗಿದ್ದಾಗ 2 ಜರ್ಮನ್ ಶೆಫರ್ಡ್​ ನಾಯಿಗಳು ಅವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದವು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಕೀಲರ ಮೇಲೆ ನಾಯಿಗಳು ಆಕ್ರಮಣ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಆ ವಿಡಿಯೋವನ್ನು ಹರಿಬಿಡಲಾಗಿತ್ತು.

ಈ ವಿಚಾರ ಕೋರ್ಟ್​ ಮೆಟ್ಟಿಲೇರಬಹುದು ಎಂಬ ಭೀತಿಯಿಂದ ನಾಯಿಗಳ ಮಾಲೀಕ ತನ್ನ ಪ್ರೀತಿಯ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ ನೀಡಲು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಉಳಿದೆಲ್ಲ ನಿಯಮಗಳಿಗೂ ಒಪ್ಪಿಗೆ ನೀಡುವುದಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇಬ್ಬರೂ ಸಹಿ ಮಾಡಿಕೊಂಡ ಒಪ್ಪಂದದ ಪ್ರತಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಸದ್ಯ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧಕ್ಕೆ ಸಾಕ್ಷಿಯಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...