LATEST NEWS
ಕುಂದಾಪುರ: ಅಂತರ್‌ರಾಜ್ಯ ಕಳ್ಳರಿಬ್ಬರ ಸೆರೆ-16 ಲಕ್ಷ ಮೌಲ್ಯದ ಸೊತ್ತು ವಶ
ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಉಡುಪಿ ಸಮೀಪದ ಕುಂದಾಪುರ ಕೋಟೇಶ್ವರದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ವತ್ತಿಪರ ಕಳವು ಆರೋಪಿಗಳಾದ ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಹಾಗು ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ 948)ಎಂಬವರುಗಳನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ.
ಜುವೆಲ್ಲರಿಯಿಂದ 15 ಲಕ್ಷ ಮೌಲ್ಯದ 300 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 1481 ಗ್ರಾಂ ಬೆಳ್ಳಿ ಸಹಿತ ಒಟ್ಟು 16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳನ್ನು ಜನವರಿ 6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್ ನೇತೃತ್ವದಲ್ಲಿ, ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸದಾಶಿವ ಗವರೋಜಿ, ಪ್ರಸಾದ್ ಕುಮಾರ್ ಕೆ. ಮತ್ತು ಎಎಸ್‌ಐ ಸುದಾಕರ ಹಾಗೂ ಸಿಬ್ಬಂದಿ ಗಳಾದ ಸಂತೋಷ ಕುಮಾರ್, ಕೆ.ಯು ಸಂತೋಷ ಕುಮಾರ್, ರಾಮಪೂಜಾರಿ ಮೊದಲಾದವರ ತಂಡ ಪ್ರಕರಣದ ಆರೋಪಿಗಳನ್ನು ಪತ್ತೆ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.
LATEST NEWS
ಕ್ರೇಟ್ ಗೆ ಪಿಕಪ್ ಢಿಕ್ಕಿ-ಸಾವಿರಾರು ರೂ. ಮೌಲ್ಯದ ನಂದಿನಿ ಹಾಲು ರಸ್ತೆ ಪಾಲು
ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್‌ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಹಾಗೂ ಸೈಕಲ್ ಸವಾರರಿಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಚಾಲಕನು ದ್ವಿಚಕ್ರ ವಾಹನವೊಂದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರಿಸಿದ್ದ ಹಾಲಿನ ಕ್ರೇಟ್‌ಗಳಿಗೆ ಪಿಕಪ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಹಾಲಿನ ಪ್ಯಾಕೆಟ್ ಶೇಖರಿಸಿಟ್ಟಿದ್ದ ಕ್ರೇಟ್‌ಗಳೆಲ್ಲ ಚೆಲ್ಲಾ ಪಿಲ್ಲಿಯಾಗಿದ್ದು, ಅಪಾರ ಪ್ರಮಾಣದ ಹಾಲು ರಸ್ತೆ ಪಾಲಾಗಿದೆ. ಪಿಕಪ್ ವಾಹನ ಚಾಲಕನ ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಪಿಕಪ್ ಚಾಲಕ ಪರಾರಿಯಾಗಿದ್ದಾನೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
Kundapura: ಲಂಚ ಪ್ರಕರಣ- ಸಬ್ ಇನ್‌ಸ್ಪೆಕ್ಟ್ರರ್ ಶಂಭುಲಿಂಗಯ್ಯ ಅಮಾನತು
ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್