Connect with us

LATEST NEWS

ಮಂಗಳೂರಿನಲ್ಲಿ ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳ ಬಂಧನ

Published

on

ಮಂಗಳೂರು: ನಗರ ಹೊರವಲಯದ ಬಜ್ಪೆಯಲ್ಲಿ ಅಕ್ರಮವಾಗಿ ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್‌ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್(61) ಹಾಗೂ ಯಶವಂತ್ ಕುಮಾರ್(45) ಎಂದು ಗುರುತಿಸಲಾಗಿದೆ. ಇಬ್ಬರೂ ಕೇರಳ ಮೂಲದವರೆಂದು ತಿಳಿದು ಬಂದಿದೆ.

ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ವೊಂದರಲ್ಲಿ ಪಿಸ್ತೂಲ್‌ ಹಿಡಿದುಕೊಂಡು ತಿರುಗಾಡಿಕೊಂಡಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಪಿಸ್ತೂಲ್‌ ಸಮೇತ, 2 ಮೊಬೈಲ್ ಫೋನು, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಮೌಲ್ಯ 1,45,000 ರೂ ಎಂದು ಅಂದಾಜಿಸಲಾಗಿದೆ.

ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ   ಹಾಗೂ ಸಿಸಿಬಿ ಸಿಬ್ಬಂದಿ  ಪಾಲ್ಗೊಂಡಿದ್ದರು.

 

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!

Published

on

ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ರಾಜೇಶ್  (25)ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.

ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

Continue Reading

LATEST NEWS

ಕೊರಗಜ್ಜನ ಪವಾಡ- ವಾರವಿಡೀ ಕಾಡಿನಲ್ಲಿ ಸಿಲುಕಿದ ಯುವಕನ ರಕ್ಷಣೆ ಮಾಡಿದ ನಾಯಿಯ ಅದ್ದೂರಿ ಮೆರವಣಿಗೆ

Published

on

ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ.

ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ.

ಕುಂದಾಪುರದ ಯುವಕನೋರ್ವ ಕಾಣೆಯಾಗಿದ್ದಾನೆ ಎಂದು ತಿಳಿದ ಮನೆಯವರು ದೈವದ ಮೊರೆ ಹೋದ ಬೆನ್ನಲೇ ಆತ ನಾಯಿಯೊಂದಿಗೆ ವಾಪಸು ಮನೆಗೆ ಮರಳಿದ್ದಾನೆ.

ಇದು ನಂಬಿದ ದೈವವೇ ಯುವಕನನ್ನು ಮರಳಿ ಮನೆಗೆ ಕರೆಸಿದೆ ಎಂದು ಗ್ರಾಮಸ್ಥರು ನಂಬಬಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ಎಂಬ ಯುವಕನು ಕಾಡಿಗೆ ಕಟ್ಟಿಗೆ ತರಲು ಎಂದು ಹೋದವನು 8 ದಿನವಾದರೂ ಮನೆಗೆ ವಾಪಸು ಬಂದಿರಲಿಲ್ಲ.

ಹಾಗಾಗಿ ಮನೆಯವರು ದೈವದ ಮೊರೆ ಹೋಗಿದ್ದಾರೆ.

ಈ ವೇಳೆ ಆತ ಜೀವಂತವಾಗಿರುವುದು ತಿಳಿದು ಬಂದ ಕೂಡಲೇ ದೈವದ ಭರವಸೆಯಂತೆ ಪೊಲೀಸರು, ಎಎನ್‌ಎಫ್‌ ಪಡೆಯೊಂದಿಗೆ ಗ್ರಾಮಸ್ಥರು ಹಗಲು ರಾತ್ರಿ ಇಡೀ ಆತನ ಪತ್ತೆಗೆ ಹುಡುಕಾಡಿದ್ದಾರೆ.

ಆದರೆ ಆತನ ಸುಳಿವು ಸಿಕ್ಕಿರದ ಕಾರಣ ಮನೆಯವರು ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.

“ಆತ ಹಂದಿಯೊಂದನ್ನು ಓಡಿಸಿಕೊಂಡು ಹೋಗುವಾಗ ದಾರಿ ತಪ್ಪಿದ್ದಾನೆ.  ಹಕ್ಕಿಯೊಂದು ದಾರಿ ತೋರಿಸಿದೆ.

ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ.

5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ” ಎಂದು ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.

ಅದರಂತೆ ಮಗನ ಬರುವಿಕೆಗೆ ಮನೆಯವರು ಕಾಯುತ್ತಿದ್ದರು.

ಇದೀಗ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ಕೊರಗಜ್ಜನ ದೈವದ ಶಕ್ತಿ ಅಚ್ಚರಿಯನ್ನುಂಟು ಮಾಡಿದೆ.

ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಪುನೀತ್ ಅವರ ನುಡಿಯಂತೆ ಎಂಟು ದಿನಗಳ ಬಳಿಕ ಆತ ನಾಯಿಯೊಂದಿಗೆ ಮರಳಿ ಬರುತ್ತಾನೆ.

ಆದರೆ ಆತನಿಗೆ ತಾನೂ ಎಲ್ಲಿ ಹೋಗಿದ್ದೆ ಎಂದು ಗೊತ್ತಿಲ್ಲ. ಕಾಡಿನಲ್ಲಿ ಸಿಲುಕಿದ ಕಾರಣ ಆಹಾರವಿಲ್ಲದೆ ವಿವೇಕಾನಂದನು ನಿತ್ರಾಣಗೊಂಡಿದ್ದ.

ಆತನ ಜೊತೆಗಿದ್ದದ್ದು ಮಾತ್ರ  ಮನೆಯ ಸಾಕು ನಾಯಿ, ಆತನ ಮರಳಿ ಬರುವಂತೆ ದಾರಿ ತೋರಿಸಿ ರಕ್ಷಿಸಿದೆ.

ಹಾಗಾಗಿ ಆತನ ಜೀವ ಉಳಿಸಿದ ನಾಯಿಯನ್ನು ಗ್ರಾಮಸ್ಥರು ಸೇರಿ ಅದ್ದೂರಿಯಾಗಿ  ತೆರೆದ ಪಿಕಪ್ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಿದರು.

50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಜೊತೆಗೆ ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ.

ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಿದರು.

ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.

Continue Reading

LATEST NEWS

Trending