Thursday, December 1, 2022

ಶಿವಮೊಗ್ಗದಲ್ಲಿ ಕಾರ್ ಮರಕ್ಕೆ ಢಿಕ್ಕಿ : ಇಬ್ಬರು ಸಾವು, ಮೂವರು ಗಂಭೀರ

ಶಿವಮೊಗ್ಗದಲ್ಲಿ ಕಾರ್ ಮರಕ್ಕೆ ಢಿಕ್ಕಿ : ಇಬ್ಬರು ಸಾವು, ಮೂವರು ಗಂಭೀರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಕಾಚಿನಕಟ್ಟೆ ಸಮೀಪದ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಎನ್‌ಆರ್ ಪುರ ನಿವಾಸಿಗಳು ಎಂದು ಹೇಳಲಾಗಿದೆ.

ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಸಲಾಕೆಯಿಂದ ಕಾರ್ ಬಾಗಿಲು ತೆರೆದು ಗಾಯಾಳುಗಳನ್ನು ರಕ್ಷಿಸಲಾಗಿದೆ.

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics