LATEST NEWS
ಎರಡು ಮದುವೆ…ಇಬ್ಬರು ಬಾಯ್ ಫ್ರೆಂಡ್ಸ್…! ಎರಡನೇ ಪತಿಗೆ ಇಟ್ಳು ಮುಹೂರ್ತ!
Published
1 month agoon
By
NEWS DESK4ಮಂಗಳೂರು/ಕೊಡಗು : ಉಡುಪಿಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊ*ಲೆಗೈದಿರುವ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ಕೊಡಗಿನ ಸುಂಟಿಕೊಪ್ಪದಲ್ಲಿ.
ಏನಿದು ಪ್ರಕರಣ ?
ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಶಾ*ಕ್ ಆಗಿದೆ. ಇಲ್ಲಿ ಪತ್ನಿಯೇ ತನ್ನ ಪತಿಯನ್ನ ಹ*ತ್ಯೆ ಮಾಡಿದ್ದಾಳೆ . ಈ ಕೃತ್ಯ ನಡೆದಿರೋದು ಆಸ್ತಿಗಾಗಿ.
ಈ ಸಂಬಂಧ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ನಿಹಾರಿಕಾ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಬಂಧಿತರು. ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಕೊ*ಲೆಗೀಡಾದ ಪತಿ. ಈತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸು*ಟ್ಟುಹಾಕಿ ಪಾಪಿಗಳು ಎಸ್ಕೇಪ್ ಆಗಿದ್ದರು.
ಡಿವೋರ್ಸ್….ಎರಡನೇ ಮದುವೆ…ಲವ್ :
ನಿಹಾರಿಕಾ ತಾನು10ನೇ ತರಗತಿಯಲ್ಲಿಇರುವಾಗಲೇ ಮದುವೆಯಾಗಿದ್ದಳು. ಗಂಡ ಸಿವಿಲ್ ಇಂಜಿನಿಯರ್ ಆಗಿದ್ದ. ಎರಡು ಮಕ್ಕಳಾಗಿದ್ದವು. ಆದ್ರೆ, ಅದೇನಾಯ್ತೋ! ಮೊದಲ ಗಂಡನಿಗೆ ಡೈವೋರ್ಸ್ ನೀಡಿದ್ಲು. ಮತ್ತೆ ಕಾಲೇಜು ಶಿಕ್ಷಣ ಮುಗಿಸಿ ಬಿ. ಟೆಕ್ ಪದವಿಯನ್ನೂ ಪೂರೈಸಿದ್ದಳು. ವಿಪ್ರೋ ಸೇರಿದಂತೆ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದಳು. ಈ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ 54 ವರ್ಷದ ರಮೇಶ್ ಎಂಬಾತನ ಮದುವೆಯಾಗಿದ್ದಳು.
ಆದ್ರೆ, ಈ ಐನಾತಿ ಅಲ್ಲೂ ಆಟ ಆಡಿದ್ಲು. ಎರಡನೇ ಗಂಡನ್ನೂ ಬಿಟ್ಟು ಹರಿಯಾಣಕ್ಕೆ ಹಾರಿದ್ದಳು. ಅಲ್ಲಿಯೂ ಒಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಜೈಲು ಪಾಲಾದಳು. ಅಲ್ಲಿ ಪರಿಚಯವಾದವನೇ ಈ ಅಂಕುರ್ ಠಾಕೂರ್.
ನಂತರ ಆತನೊಂದಿಗೆ ಬೆಂಗಳೂರಿಗೆ ಬಂದು ನೆಲಸಿದ್ದ ಇವಳು ಇದರ ನಡುವೆ ಬೆಂಗಳೂರಿನಲ್ಲಿ ಪಶುವೈದ್ಯನೊಬ್ಬನೊಂದಿಗೆ ಲವ್ ಗಿವ್ ಅಂತ ಶುರು ಹಚ್ಚಿಕೊಂಡಳು. ಅಷ್ಟಕ್ಕೇ ಮುಗಿಲಿಲ್ಲ. ಪಾಪ! ರಮೇಶ ಈಕೆಯ ಆಟಕ್ಕೆ ಬ*ಲಿಯಾದ.
ಎರಡನೇ ಪತಿಗೆ ಇಟ್ಳು ಮುಹೂರ್ತ!
ಮೊದಲನೇ ಗಂಡನಿಗೆ ಡಿವೋರ್ಸ್ ಕೊಟ್ಟು ರಮೇಶನನ್ನು ಕಟ್ಟಿಕೊಂಡಿದ್ದ ನಿಹಾರಿಕಾ, ಆತನ ಆಸ್ತಿ ಮೇಲೆ ಕಣ್ಣಿಟ್ಟಿದ್ದಳು. ಅದಾಗಲೇ ಒತ್ತಡ ಹಾಕಿ ಮೂರು ಎಕರೆ ಜಾಗವನ್ನು ಜಿಪಿಎಸ್ ಮಾಡಿಸಿಕೊಂಡಿದ್ದಳು. ಜೈಲಿನಿಂದ ಹೊರಗೆ ಬಂದಿದ್ದ ಇವಳು ಹರಿಯಾಣದ ಅಂಕುರ್ ಠಾಕೂರ್ ನೊಂದಿಗೆ ಬೆಂಗಳೂರಿಗೆ ಬಂದು ನೆಲಸಿದ್ದಳು.
ಇದನ್ನೂ ಓದಿ : ಮದುವೆಯಾಗುವಂತೆ ಒತ್ತಾಯಿಸಿದ ಗರ್ಭಿಣಿ ಪ್ರೇಯಸಿಯನ್ನೇ ಹ*ತ್ಯೆಗೈದು ಹೂ*ತು ಹಾ*ಕಿದ ಗೆಳೆಯ
ಅಷ್ಟಕ್ಕೆ ಮುಗಿಲಿಲ್ಲ ಇವಳ ನವರಂಗಿ ಆಟ. ಅಂಕುರ್ ಠಾಕೂರ್ ಜೊತೆಗಿದ್ದೇ ಬೆಂಗಳೂರಿನಲ್ಲಿ ಪಶುವೈದ್ಯ ನಿಖಿಲ್ ಎಂಬಾತನಿಗೆ ಬಲೆ ಬೀಸಿದ್ದಳು. ನಿಹಾರಿಕಾ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದಳು. ಆದರೆ, ಆತ ಮಾತ್ರ ಸೊಪ್ಪೇ ಹಾಕಲಿಲ್ಲ. ಹಾಗಾಗಿ, ನಿನ್ನೊಂದಿಗೆ ಮಾತನಾಡಬೇಕು ಎಂದು ಹೈದರಾಬಾದಿನ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಅಂಕುರ್ ಮತ್ತು ನಿಹಾರಿಕಾ ರಮೇಶನ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹ*ತ್ಯೆ ಮಾಡಿದ್ದರು. ಮೃ*ತದೇಹವನ್ನು ಅಲ್ಲಿಯೇ ಬಿಟ್ಟು ರಮೇಶ್ ತಂದಿದ್ದ ಕಾರಿನಲ್ಲಿಯೇ ರಮೇಶ್ ಅಪಾರ್ಟ್ಮೆಂಟಿಗೆ ಹೋಗಿ ಆತನ ಮನೆಯಲ್ಲಿದ್ದ ಹಣ, ಆಸ್ತಿ ಪತ್ರಗಳನ್ನೆಲ್ಲಾ
LATEST NEWS
ಮಕ್ಕಳು ಅಪ್ಪ – ಅಮ್ಮನ ಮುಂದೆ ಸುಳ್ಳು ಹೇಳಲು ಮುಖ್ಯ ಕಾರಣಗಳೇನು ಗೊತ್ತಾ ??
Published
4 hours agoon
06/12/2024ಮಕ್ಕಳು ಏನೇ ವಿಷಯಗಳಿದ್ದರೂ ಅದನ್ನು ತಂದೆ – ತಾಯಿಯ ಬಳಿ ಹೇಳಲು ಬಯಸುತ್ತಾರೆ. ಆದರೆ, ಹೀಗೆ ಹೇಳಲು ಬಂದ ಮಕ್ಕಳ ಮೇಲೆ ಕೆಲವೊಮ್ಮೆ ಪೋಷಕರು ರೇಗುವುದುಂಟು. ಮಕ್ಕಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬ ಅರಿವಿಲ್ಲದೆ ಮಾಡುವ ಈ ತಪ್ಪು ಮುಂದೆ ಪೋಷಕರಿಗೇ ಸಮಸ್ಯೆಯಾಗಬಹುದು.
ಅಮ್ಮನ ಅಡುಗೆ ರುಚಿಯ ವಿಚಾರ ಇರಬಹುದು, ಸಹೋದರ ಸಹೋದರಿಯರ ನಡುವಿನ ಜಗಳ ಇರಬಹುದು, ಶಾಲೆಯಲ್ಲಿ ನಡೆದಿರುವ ಅದ್ಯಾವುದೋ ಸಂತಸದ ಅಥವಾ ಬೇಸರದ ಸಂಗತಿ ಇರಬಹುದು, ಪೋಷಕರು ವ್ಯವಧಾನದಿಂದ ಕೇಳಿಸಿಕೊಳ್ಳಬೇಕು. ಅದರ ಬದಲಾಗಿ ಮಕ್ಕಳು ಅದೇನೋ ಹೇಳಲು ಬಂದಾಗ ಅಸಹನೆ, ಸಿಟ್ಟು ಪ್ರದರ್ಶಿಸಿದರೆ ಮಕ್ಕಳ ಮೃದು ಮನಸಿಗೆ ಘಾಸಿ ಉಂಟಾಗುವ ಅಪಾಯ ಇದೆ. ಇದು ಪೋಷಕರನ್ನು ಮೆಚ್ಚಿಸಲು ಅಥವಾ ಗಮನವನ್ನು ತಮ್ಮತ್ತ ಸೆಳೆಯಲು ಮಕ್ಕಳು ಸುಳ್ಳಿನ ದಾರಿ ಹಿಡಿಯಲು ಅವಕಾಶ ಮಾಡಿಕೊಡುವ ಅಪಾಯ ಇದೆ.
ಇನ್ನು ಮಕ್ಕಳೇನೋ ಮಾಡಬೇಕು ಎಂಬ ತುಡಿತವನ್ನು ಪೋಷಕರ ಮುಂದೆ ವ್ಯಕ್ತಪಡಿಸಿದಾಗ ಗದರಿಸಿ ಸುಮ್ಮನಿರುವಂತೆ ಮಾಡುವುದು ಕೂಡ ಅವರ ಭವಿಷ್ಯವನ್ನು ಚಿವುಟಿದಂತೆ. ಇದರಿಂದ ತಮ್ಮ ಕನಸನ್ನು ಪೋಷಕರು ಕಮರಿ ಹಾಕಿದ್ರು ಎಂಬ ಅಸಮಾಧಾನ ಮಕ್ಕಳ ಮನಸಿನ ಮೂಲೆಯಲ್ಲಿ ಕೂತು ಬಿಡುತ್ತದೆ. ಇದು ಮುಂದೆ ಬೆಳೆದು ದೊಡ್ಡವರಾದ ಮಕ್ಕಳಲ್ಲಿ ಪೋಷಕರು ತಮಗೇನು ಮಾಡಿಲ್ಲ ಎಂಬ ಭಾವ ಮೂಡಿಸುವ ಸಾಧ್ಯತೆ ಕೂಡ ಇದೆ. ತಾನು ಮಾಡಬೇಕು ಅಂದುಕೊಂಡಿದ್ದನ್ನು ಮನೆಯಲ್ಲಿ ಸುಳ್ಳು ಹೇಳಿ ಮಾಡಲು ಆರಂಭಿಸಿ ಮುಂದೆ ಸುಳ್ಳು ಹೇಳುವುದನ್ನೇ ಮೈಗೂಡಿಸುವ ಮನಸ್ಥಿತಿಗೆ ಮಕ್ಕಳು ಬರಬಹುದು.
ಹುಟ್ಟಿದ ಮಗುವಿನ ಲಾಲನೆ ಪಾಲನೆ ಮಾಡುವ ಪೋಷಕರು ಮಗುವಿಗೆ ನಡೆಯುವುದರಿಂದ ಹಿಡಿದು ಮಾತನಾಡುವುದು, ತಿನ್ನುವುದು ಎಲ್ಲವನ್ನೂ ಕಲಿಸುತ್ತಾರೆ. ಆದರೆ, ಮಕ್ಕಳು ಬೆಳೆಯುತ್ತಾ ಹೋದಂತೆ ಕೆಲವೊಂದು ಬಾರಿ ಮಕ್ಕಳು ಕೇಳುವ ಪ್ರಶ್ನೆಗಳು, ಮಾಡುವ ಹಠಗಳು, ಹಾಗೂ ಅವರ ಬೇಡಿಕೆಗಳು ಕಿರಿಕಿರಿ ಅನಿಸಿ ಬಿಡುತ್ತದೆ. ಮಕ್ಕಳಿಗೆ ಏನು ಬೇಕು, ಏನು ಬೇಡ ಎಂಬುವುದು ಪೋಷಕರಿಗೆ ಗೊತ್ತಿರುತ್ತದೆಯಾದ್ರೂ ಕೆಲವೊಂದು ವಿಚಾರವನ್ನು ಮಕ್ಕಳಿಗೆ ನವಿರಾಗಿ ವಿವರಿಸಿ ಅರ್ಥೈಸಬೇಕು. ಆದ್ರೆ, ಎಲ್ಲವನ್ನೂ ನವಿರಾಗಿ ನಿರಾಕರಿಸುತ್ತಾ ಹೋದರೆ ನನ್ನ ಹೆತ್ತವರು ನನಗಾಗಿ ಏನೂ ಮಾಡುತ್ತಿಲ್ಲ ಎಂಬ ಭಾವ ಮಕ್ಕಳಲ್ಲಿ ಮೂಡಬಹುದು. ತಮ್ಮ ಕನಸಿಗೆ ಪೋಷಕರೇ ಅಡ್ಡಿ ಎಂಬ ಸಣ್ಣದೊಂದು ಅಸಹನೆ ಇಲ್ಲಿಂದಲೇ ಆರಂಭವಾಗಬಹುದು.
ಸಣ್ಣ ಪ್ರಾಯದಲ್ಲಿ ಮಕ್ಕಳು ದೂರು ಹೇಳುವ ಪ್ರಮುಖ ಕಾರಣಗಳು :
ಗಮನವನ್ನು ತನ್ನತ್ತ ಸೆಳೆಯಲು:
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಕ್ಕಳಿದ್ದು, ಒಬ್ಬರ ಕಡೆ ಹೆಚ್ಚಿನ ಗಮನ ನೀಡುತ್ತಾರೆ ಅಂತ ಮಗುವಿನ ಮನಸಿನಲ್ಲಿ ಮೂಡಿದಾಗ ಗಮನ ತನ್ನತ್ತ ಸೆಳೆಯಲು ಸುಳ್ಳು ದೂರುಗಳನ್ನು ಹೇಳಲು ಆರಂಭಿಸುತ್ತಾರೆ. ಇದು ಶಾಲೆಯಲ್ಲೂ , ಕುಟುಂಬ ಸದಸ್ಯರ ಮುಂದೆಯೂ ನಡೆಯುವ ಮೂಲಕ ಪೋಷಕರನ್ನು ಮುಜುಗರಕ್ಕೆ ಸಿಲುಕಿಸಬಹುದು. ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ಮನೋಭಾವನೆಯಿಂದ ಮಕ್ಕಳು ಸಣ್ಣ ಸಣ್ಣ ವಿಚಾರಗಳಲ್ಲೂ ಜಗಳ ಆಡುವುದು, ಸುಳ್ಳು ಹೇಳುವುದು ಮಾಡಬಹುದು. ಇಂತಹ ವಿಚಾರ ಬಂದಾಗ ಮಕ್ಕಳ ಜಗಳವನ್ನು ನಾಜೂಕಾಗಿ ಪರಿಹರಿಸಬೇಕು.
ಅಸಹನೆ , ಸಿಟ್ಟು, ಜಗಳ , ದೂರುಗಳು ಇವುಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಮಕ್ಕಳು ಪದೇಪದೇ ಸಿಟ್ಟಾಗುವುದು, ಅಸಹನೆಯಿಂದ ಒಂಟಿಯಾಗಿ ಕೂರುವುದು, ಸ್ನೇಹಿತರ ಜೊತೆ ಜಗಳ ಮಾಡುವುದು, ದೂರುಗಳನ್ನು ಹೇಳಿಕೊಂಡು ಬರುತ್ತಾರೆ ಅಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ ಇದು ಯಾಕಾಗಿ ಹೀಗೆ ಎಂಬುವುದನ್ನು ಮೊದಲು ತಮ್ಮಲ್ಲೇ ಪ್ರಶ್ನೆ ಮಾಡಿಕೊಳ್ಳಿ. ಪೋಷಕರಾಗಿ ತಮ್ಮಿಂದೇನು ತಪ್ಪಾಗಿಲ್ಲ ಎಂದರೆ ಒಂದು ಬಾರಿ ತಜ್ಞ ವೈದ್ಯರನ್ನು ಸಂಪರ್ಕಿಸಿ.
LATEST NEWS
ಉಡುಪಿ : ಶೀರೂರು ಪರ್ಯಾಯಕ್ಕೆ ಬಾಳೆ ಮುಹೂರ್ತ ಸಂಪನ್ನ
Published
4 hours agoon
06/12/2024By
NEWS DESK4ಉಡುಪಿ : ಪ್ರಥಮ ಬಾರಿಗೆ ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಇಂದು ಬಾಳೆ ಮುಹೂರ್ತ ನೆರವೇರಿಸಿದರು. ಪೂರ್ಣ ಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಶ್ರೀಗಳು ಬಾಳೆ ಸಸಿ ನೆಟ್ಟರು.
ಮುಹೂರ್ತಕ್ಕೂ ಮುನ್ನ ಕೃಷ್ಣ, ಮುಖ್ಯ ಪ್ರಾಣ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಶ್ರೀಗಳು ಶೀರೂರು ಮಠ, ಅನಂತೇಶ್ವರ, ಚಂದ್ರಮೌಳೀಶ್ವರನ ದರ್ಶನ ಪಡೆದರು. ಮೆರವಣಿಗೆಯಲ್ಲಿ ಬಾಳೆ ಗಿಡಗಳನ್ನು ಹೊತ್ತು ಸಾಗಿ ಮುಹೂರ್ತ ಕಾರ್ಯ ನೆರವೇರಿಸಲಾಯಿತು.
ಇದನ್ನೂ ಓದಿ : ಸೊಸೈಟಿಯಿಂದ ಹಣ ಡ್ರಾ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯ ಶ*ವ ಪತ್ತೆ!
ಈ ಬಾಳೆಯ ಎಲೆಗಳನ್ನು ಬಳಸಿಕೊಂಡು ಪರ್ಯಾಯ ಅವಧಿಯಲ್ಲಿ ಅನ್ನದಾಸೋಹ ಕಾರ್ಯ ನಡೆಯಲಿದೆ. ಇನ್ನು ಒಂದು ವರ್ಷಗಳ ಕಾಲ ಶೀರೂರು ಶ್ರೀ ದೇಶಾದ್ಯಂತ ತೀರ್ಥಕ್ಷೇತ್ರಗಳ ಸಂದರ್ಶನ ಮಾಡಲಿದ್ದಾರೆ.
LATEST NEWS
ಮಂಗಳೂರು: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ
Published
5 hours agoon
06/12/2024By
NEWS DESK2ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ.
ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೇಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Pingback: ಪ್ರಿಯಕರನೊಂದಿಗೆ ಸೇರಿ ಪತ್ನಿಯಿಂದ ಪತಿ ಹ*ತ್ಯೆ ಪ್ರಕರಣ; ಸ್ಥಳ ಮಹಜರು ವೇಳೆ ಓರ್ವ ಆರೋಪಿ ಪರಾರಿ - NAMMAKUDLA NEWS - ನಮ್ಮಕ