Home ಉಡುಪಿ ಪುನುಗು ಬೆಕ್ಕಿನ ಆಕ್ರಮ ಸಾಗಾಟಕ್ಕೆ ಯತ್ನ: ಇಬ್ಬರ ಬಂಧನ, ಓರ್ವ ಪರಾರಿ

ಪುನುಗು ಬೆಕ್ಕಿನ ಆಕ್ರಮ ಸಾಗಾಟಕ್ಕೆ ಯತ್ನ: ಇಬ್ಬರ ಬಂಧನ, ಓರ್ವ ಪರಾರಿ

ಪುನುಗು ಬೆಕ್ಕಿನ ಆಕ್ರಮ ಸಾಗಾಟಕ್ಕೆ ಯತ್ನ: ಇಬ್ಬರ ಬಂಧನ, ಓರ್ವ ಪರಾರಿ

ಕುಂದಾಪುರ: ಅರಣ್ಯದಲ್ಲಿ ಹಿಡಿದ ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದ.ಕ. ಜಿಲ್ಲೆಯ ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳ ಕುಂದಾಪುರದ ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿ ಬಂಧಿಸಿದೆ.

ಕುಂದಾಪುರ ಹೈಕಾಡಿಯ ದತ್ತಾತ್ರೇಯ ನಗರದ ಅಸ್ಗರ್ ಅಲಿ ಹಾಗೂ ಬಿದ್ಕಲಕಟ್ಟೆಯ ಶರತ್ ಬಂಧಿತ ಆರೋಪಿಗಳು.

ಇನ್ನೋರ್ವ  ಆರೋಪಿ ಪರಾರಿಯಾಗಿದ್ದಾನೆ. ಇವರಿಂದ ಜೀವಂತ ಪುನುಗು ಬೆಕ್ಕು, ಪಂಜರ, ಮಾರುತಿ ಇಕೋ ಕಾರು, ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಹೊಳೆ ಶಂಕರನಾರಾಯಣ ಎಂಬಲ್ಲಿನ ಅರಣ್ಯದಲ್ಲಿ ಜೀವಂತವಾಗಿ ಹಿಡಿದ ಪುನುಗು ಬೆಕ್ಕನ್ನು ಇವರು ಮಾರಾಟಕ್ಕಾಗಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ಜಯ ಕೆ. ನೇತೃತ್ವದ ತಂಡ ಆರೋಪಿಗಳ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಬಳಿಕ ಹೆಚ್ಚಿನ ತನಿಖೆಗಾಗಿ ಅವರನ್ನು ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಉದಯ್, ರಾಮಕೃಷ್ಣ ಮೊದಲಾದವರು ಪಾಲ್ಗೊಂಡಿದ್ದರು.

ವಿಡಿಯೋಗಾಗಿ..

- Advertisment -

RECENT NEWS

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ ಪ್ರಾಣಿ...

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿದ ದಾರುಣ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ಸಂಭವಿಸಿದೆ. ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ಈ...