Wednesday, February 1, 2023

ದೇಗುಲದ ಜಾಗದ ವಿಚಾರದಲ್ಲಿ ಗಲಾಟೆ: ವಿವಾದ ತಾರಕಕ್ಕೇರಿ ಮಹಿಳೆ ಸಹಿತ ಇಬ್ಬರು ಕೊನೆಯುಸಿರು

ತುಮಕೂರು: ದೇಗುಲವೊಂದರ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ವಿವಾದ ತಾರಕಕ್ಕೇರಿ ಮಹಿಳೆ ಸೇರಿದಂತೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮುಕೂರಿನ ತಾಲೂಕು ಮಿಡಿಗೇಶಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ರಾಮಾಂಜನೇಯ (48) ಹಾಗೂ ಶಿಲ್ಪಾ (36) ಕೊಲೆಗೀಡಾದವರು. ಘಟನೆಯಲ್ಲಿ ಮಲ್ಲಿಕಾರ್ಜುನಯ್ಯ ಎಂಬುವರು ಕೂಡ ಗಂಭೀರ ಗಾಯಗೊಂಡವರು.


ಮಿಡಿಗೇಶಿ ಗ್ರಾಮದ ಶ್ರೀಧರ್ ಗುಪ್ತಾ ಎಂಬುವರು ಗಣಪತಿ ದೇವಸ್ಥಾನದ ಜಾಗ ಒತ್ತುವರಿ ಮಾಡಿಕೊಳ್ಳಲು ಯತ್ನಿಸಿದ್ದರು ಎಂಬ ಆರೋಪವಿದೆ.

ಇದರ ಸಂಬಂಧ ಗ್ರಾಮಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಗ್ರಾಮಸ್ಥರ ಪರವಾಗಿ ತೀರ್ಪು ನೀಡಿತ್ತು.

ದೇವಸ್ಥಾನದ ಪರ ರಾಮಾಂಜನೇಯ ಹಾಗೂ ಶಿಲ್ಪಾ ನ್ಯಾಯಾಲಯದ ಮೊರೆ ಹೋಗಿದ್ದರು. ಇದರಿಂದ ರೊಚ್ಚಿಗೆದ್ದ ಶ್ರೀಧರ್ ಗುಪ್ತ ಹಾಗೂ ಸಹಚರರು ನಿನ್ನೆ ರಾತ್ರಿ ಮಾರಕಾಸ್ತ್ರಗಳಿಂದ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ಲಭ್ಯವಾಗಿದೆ.

ಈ ಪ್ರಕರಣ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಲ್ಲಿಕಾರ್ಜುನಯ್ಯ ಅವರನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಮಿಡಿಗೇಶಿ ಗ್ರಾಮಕ್ಕೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಪರಿಸ್ಥಿತಿ ಅವಲೋಕಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಘಟನೆ ಬಗ್ಗೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

Hot Topics

ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ

ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್...

ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!

ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ‌ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು...

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಆಸಾರಾಂ ಬಾಪುಗೆ 2ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ..

2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಅಹಮದಾಬಾದ್:‌ 2013ರಲ್ಲಿ ತನ್ನ...