Connect with us

    LATEST NEWS

    ‘ನಾ ಡ್ರೈವರ್’ ಹಾಡಿನ ಗಾಯಕನಿಂದ ಇಬ್ಬರ ಮೇಲೆ ಹ*ಲ್ಲೆ 

    Published

    on

    ಮಂಗಳೂರು/ಬೆಳಗಾವಿ: “ನಿಧಾನಕ್ಕೆ ಕಾರು ಚಲಾಯಿಸಿ” ಎಂದಿದ್ದಕ್ಕೆ ಯುವಕ ಹಾಗೂ ಅವನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹ*ಲ್ಲೆ ನಡೆಸಿದ್ದಾರೆ.

    ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆಯುತ್ತಿದ್ದಾರೆ.

    ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್ ಮೇಲೆ ಸಂಚರಿಸುತ್ತಿದ್ದ ವೇಳೆ ನಾ ಡ್ರೈವರ್ ಹಾಡಿನ ಗಾಯಕ ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಹೋಗುತ್ತಿದ್ದರು. ಎದುರಿಗಿದ್ದ ಯುವಕನ ಬೈಕ್ ಮೀರಿ ಜೋರಾಗಿ‌ ಕಾರು ಬಂದಿದೆ. ಆಗ ಬೈಕ್ ಮೇಲಿದ್ದ ಮಹಿಳೆ, ‘ನೋಡಿಕೊಂಡು ಕಾರು ಓಡಿಸಿ’ ಎಂದು ಹೇಳುತ್ತಿದ್ದಂತೆ ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಹ*ಲ್ಲೆ ನಡೆಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ, “ಜಾನಪದ ಕಲಾವಿದ ಮಾಳು ನಿಪನಾಳ ಎಂಬಾತ ಕೆಲವರ ಮೇಲೆ ಹ*ಲ್ಲೆ ಮಾಡಿರುವುದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದಾಗ ತಿಳಿದಿದೆ. ಈತ ಹಲ್ಲೆ* ಮಾಡಿದ್ದು ಮೇಲ್ನೋಟಕ್ಕೆ ನಿಜವಾಗಿದೆ. ಪ್ರಕರಣದಲ್ಲಿ ನೊಂದ ಶೇಖಪ್ಪ ಹಕ್ಯಾಗೋಳ ಹಾಗೂ ಆತನ ಸಂಬಂಧಿಕರು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ನೊಂದವರಿಗೆ ನಮ್ಮ ಪೊಲೀಸರು ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಅವರು ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಮೇಲೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂಬ ಎಚ್ಚರಿಕೆಯ ಮಾತುಗಳನ್ನಾಡಿರುವುದು ವರದಿಯಾಗಿದ್ದು ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ.

    BANTWAL

    ಬಂಟ್ವಾಳ: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

    Published

    on

    ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.

    ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.

    ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.

    ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌ಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಂದು ಬೆಳಿಗ್ಗೆ (ನ.4ರಂದು) ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

    ಇತ್ತೀಚೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ‌.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

    Continue Reading

    DAKSHINA KANNADA

    ಉಳ್ಳಾಲ: ಅಕ್ರಮ ಮರಳುಗಾರಿಕೆಯ ಮಾಹಿತಿದಾರನ ಕೊ*ಲೆ ಯತ್ನ..!

    Published

    on

    ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಎಮ್ ಉಚ್ಚಿಲ (53)ಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈಯ್ದು ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಸೋಮೇಶ್ವರ ಪುರಸಭಾ ಕಚೇರಿಯ ಬಳಿ ಸೋಮವಾರ (ನ.4) ನಡೆದಿದೆ.

    ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹ*ಲ್ಲೆಗೈದಿದ್ದು, ಕಿಶೋರ್ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

    ಕಿಶೋರ್ ಅವರು ಸೋಮವಾರ ಸ್ನೇಹಿತ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲ್ ನಲ್ಲಿ ಚಹಾ ಕುಡಿದು ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಬಳಿ ಸುನಿಲ್ ಪೂಜಾರಿ ಸ್ಕೂಟರ್ ತಡೆದು ಮರಳುಗಾರಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತೀಯ ಎಂದು ಕೊ*ಲೆ ಬೆದರಿಕೆ ನೀಡಿದ್ದಾನೆ. ಅಲ್ಲದೆ ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದಾನೆ. ಬಳಿಕ ಸೊಂಟದಿಂದ ಚಾ*ಕು ಹೊರ ತೆಗೆದು ಇ*ರಿಯಲು ಮುಂದಾಗಿದ್ದಾನೆ.

    ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ನು ವೇಗವಾಗಿ ಚಲಾಯಿಸಿದರ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ದೂರಿನಲ್ಲಿ ತಿಳಿಸಿದ್ದಾರೆ. ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳನ್ನ ವಶಪಡಿಸಿದ್ದು, ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

    ತಿಂಗಳ ಹಿಂದೆಯಷ್ಠೇ ಕೆಥೋಲಿಕ್‌ ಮಹಾಸಭಾ ಮುಖಂಡ, ಆಲ್ವಿನ್‌ ಡಿಸೋಜ ವಿರುದ್ಧ ಅಡ್ಯಾರು ಸಮೀಪ ಮರಳು ಮಾಫಿಯಾ ದವರಿಂದ ಹಲ್ಲೆ ನಡೆದಿತ್ತು. ಪ್ರತಿಭಟನೆ ಹಲ್ಲೆ ಬಳಿಕ ಕೆಲ ದಿನಗಳ ಕಾಲ ಮರಳುಗಾರಿಕೆ ಸ್ಥಗಿತಗೊಂಡಿತ್ತಾದರೂ, ಇದೀಗ ತಡರಾತ್ರಿ ೧೧ ರ ನಂತರ ಉಳ್ಳಾಲ ತಾಲೂಕಿನ ಎಲ್ಲಾ ರಸ್ತೆಗಳಲ್ಲಿಯೂ ಮರಳು ಹೊತ್ತ ಟಿಪ್ಪರ್‌ ಲಾರಿಗಳ ಅಟ್ಟಹಾಸ ಮುಂದುವರಿದಿದೆ. ಅಕ್ರಮ ಮರಳುಗಾರರ ದರ್ಪ, ದಬ್ಬಾಳಿಕೆಗೆ ಕಡಿವಾಣ ಹಾಕಲು ಪೊಲೀಸರೇ ಭಯಪಡುವಂತಾಗಿದೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.

    Continue Reading

    LATEST NEWS

    ಅಟ್ಟಾಡಿಸಿಕೊಂಡು ಬಂದ ಆನೆಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿ ಸಾ*ವು

    Published

    on

    ಮಂಗಳೂರು/ಮೈಸೂರು : ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಟ್ಟಾಡಿಸಿಕೊಂಡು ಬಂದ ಆನೆಯಿಂದ ತಪ್ಪಿಸಿಕೊಳ್ಳಲು ಹೋಗಿ ಕಪಿಲಾ ನದಿಯಲ್ಲಿ ಮುಳುಗಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಸಾಂದರ್ಭಿಕ ಚಿತ್ರ

    ಕಬಿನಿ ಹಿನ್ನೀರಿನಲ್ಲಿರುವ ಕಾಳೇನಹಳ್ಳಿ ಹಾಡಿಯ ಶಶಾಂಕ್‌ (22) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ನೌಕರನಾಗಿದ್ದ ಶಶಾಂಕ್, ಎನ್‌.ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

    ಗಸ್ತು ತಿರುಗುತ್ತಿದ್ದಾಗ ದುರಂ*ತ :

    ಫಾರೆಸ್ಟ್ ಐಬಿ ಸಮೀಪದ ಆರಮಲ್ಲೇಶ್ವರ ಅರಣ್ಯ ಪ್ರದೇಶದಲ್ಲಿ ಅರಣ್ಯ ರಕ್ಷಕರಾದ ಶಶಾಂಕ್ ಪಿ ಸಿ ಮತ್ತು ರಾಜಣ್ಣ ಪಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು.

    ಆನೆಯು ದೊಡ್ಡ ಪೊದೆಯೊಂದರ ಹಿಂದೆ ಇದ್ದುದರಿಂದ, ಇದನ್ನು ಗಮನಿಸದ ಅರಣ್ಯ ಸಿಬ್ಬಂದಿ ಸಮೀಪಕ್ಕೆ ಹೋಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಬಂದ ಆನೆ ಇಬ್ಬರನ್ನು ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಇಬ್ಬರೂ ಪ್ರಾಣ ಉಳಿಸಿಕೊಳ್ಳಲು ನದಿಗೆ ಹಾರಿದ್ದಾರೆ.

    ಇದನ್ನೂ ಓದಿ : ಇನ್ಮುಂದೆ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ
    ಬಳಿಕ ರಾಜಣ್ಣ ಈಜಿ ದಡಕ್ಕೆ ಬಂದು ಪ್ರಾಣ ಉಳಿಸಿಕೊಂಡಿದ್ದರೆ, ಶಶಾಂಕ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ರಾಜಣ್ಣ ಗ್ರಾಮದತ್ತ ಧಾವಿಸಿ ಅರಣ್ಯಾಧಿಕಾರಿಗಳಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್‌ಒ ಅಮೃತೇಶ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

     

     

    Continue Reading

    LATEST NEWS

    Trending