Connect with us

    LATEST NEWS

    ಐವನ್ ಡಿಸೋಜ ಮನೆಗೆ ಕಲ್ಲು ಎಸೆದ ಪ್ರಕರಣ: ಇಬ್ಬರು ಸಂಘಪರಿವಾರದ ಕಾರ್ಯಕರ್ತರ ಬಂಧನ

    Published

    on

    ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.

    ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಕಳೆದ ಬುಧವಾರ ರಾತ್ರಿ ಸುಮಾರು 11.20ರ ಸುಮಾರಿಗೆ ಬೈಕ್ ನಲ್ಲಿ ಹೆಲ್ಮೆಟ್ ಹಾಕಿ ಬಂದ ಇಬ್ಬರು ಕಿಡಿಗೇಡಿಗಳು ಐವನ್ ಮನೆಗೆ ಎರ್ರಾಬಿರ್ರಿ ಕಲ್ಲುತೂರಾಟ ನಡೆಸಿ, ಪರಾರಿಯಾಗಿದ್ದರು. ಇದರಿಂದ ಐವನ್ ಮನೆಯ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.

    LATEST NEWS

    ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃ*ತ್ಯು

    Published

    on

    ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

    ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃ*ತರು ಎಂದು ಗುರುತಿಸಲಾಗಿದೆ.

    ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ವಿಡಿಯೋ ನೋಡಿ:

    Continue Reading

    LATEST NEWS

    ಭರ್ಜರಿ ಶಾಕ್ ಕೊಟ್ಟ ಕೇಂದ್ರ ಸರ್ಕಾರ ! ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ !

    Published

    on

    ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.


    ವಿಂಡ್​ಫಾಲ್ ಟ್ಯಾಕ್ಸ್ ಎಂದರೇನು ?
    ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.

    ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.

    Continue Reading

    LATEST NEWS

    ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ

    Published

    on

    ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ‌ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.

    ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

    ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.

    ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.

    Continue Reading

    LATEST NEWS

    Trending