Connect with us

LATEST NEWS

2021ರ   ವರ್ಷಾರಂಭಕ್ಕೆ ರಸ್ತೆಯಲ್ಲಿ ಶುಭಾಶಯ ಬರೆಯಲು ಕುಳಿತಿದ್ದ ಇಬ್ಬರ  ಬರ್ಬರ ಸಾವು..!

Published

on

2021ರ   ವರ್ಷಾರಂಭಕ್ಕೆ ರಸ್ತೆಯಲ್ಲಿ ಶುಭಾಶಯ ಬರೆಯಲು ಕುಳಿತಿದ್ದ ಇಬ್ಬರ  ಬರ್ಬರ ಸಾವು..!

ಕಾರ್ಕಳ: ಹೊಸ ವರ್ಷದ ಶುಭಾಶಯ ಹ್ಯಾಪಿ ನ್ಯೂ ಇಯರ್2021 ಎಂದು ರಾತ್ರಿ ಸುಮಾರು 1030ರ ಸಮಯ ರಸ್ತೆಯಲ್ಲಿ  ಕುಳಿತು  ಬರೆಯುತ್ತಿದ್ದಾಗ ನಡೆದ ಅಪಘಾತದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

ಸುಮಾರು ಹತ್ತು ಮೂವತ್ತರ ವೇಳೆಗೆ ವೇಗವಾಗಿ ಬರುತ್ತಿದ್ದ ಇಕೋ ಕಾರೊಂದು ಡಿಕ್ಕಿ ಹೊಡೆದು ಬಿಜಾಪುರ ಮೂಲದ ಶರಣಪ್ಪ ಗೌಡರ್, ಹಾಗೂ ಸಿದ್ದಪ್ಪ ಮೃತರಾಗಿದ್ದಾರೆ.

ಶರಣಪ್ಪಗೌಡ ಸ್ಥಳದಲ್ಲಿ ಮೃತರಾದರೆ, ಸಿದ್ದಪ್ಪ ತುರ್ತು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆ ಕೊಂಡೊಯ್ಯುವಾಗ ದಾರಿ ಮಧ್ಯ ಮೃತ ಪಟ್ಟಿದ್ದಾರೆ.

ಘಟನೆ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಕುಂಟಿ ಬೈಲು ಸಮೀಪ ನಡೆದಿದೆ.

ಅಪಘಾತ ನಡೆದ ಕೆಲ  ಸಮಯ  ಯುವಕರಿಬ್ಬರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!

Published

on

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.

ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಇದು ಕೋವಿಡ್‌ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಮತದಾರರ ಚೀಟಿಯಲ್ಲಿ ಕ್ಯೂಆರ್‌ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ

Published

on

ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್‌ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.

ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಮತದಾರರ ಸ್ಲಿಪ್‌ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.

Continue Reading

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

LATEST NEWS

Trending