ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಸುಳ್ಯದ ಮಾಧ್ಯಮವೊಂದರ ಪತ್ರಕರ್ತರು ಆಗಿರುವಂತಹ ಶರೀಫ್ ಹಾಗು ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಘಟನೆಯಲ್ಲಿ ಶರೀಫ್ ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.