DAKSHINA KANNADA
ಮೋರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾ*ವು..!
Published
3 months agoon
By
NEWS DESK3ಸುಳ್ಯ: ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಸಹಸವಾರ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖೆ ಕಛೇರಿ ಬಳಿ ಆ.4 ರಂದು ರಾತ್ರಿ ನಡೆದಿದೆ. ಮೈಸೂರು ಮೂಲದ ಮನೋಜ್ ಹಾಹಾಗೂ ಪವನ್ ಎಂಬವರು ಮೈಸೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಮನೋಜ್ ಹಾಗೂ ಪವನ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
DAKSHINA KANNADA
ತೃತೀಯ ಲಿಂಗಿ ತಾಯಿಯ ಹೋರಾಟ ; ಅಪ್ಪನ ಹೆಸರಿಲ್ಲದೆ ಪಾಸ್‌ಪೋರ್ಟ್ ಪಡೆದ ಮಗ .. !
Published
20 hours agoon
13/11/2024ಮಂಗಳೂರು/ಬೆಂಗಳೂರು: ಅಕ್ಕೈ ಪದ್ಮಶಾಲಿ ತೃತೀಯ ಲಿಂಗಿಯರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ವೀರ ಹೋರಾಟಗಾರ್ತಿಯಾಗಿದ್ದು. ಈಗ ಅವರ ಮಗ ಅವಿನ್‌ಗೆ ತನ್ನ ತಂದೆಯ ಹೆಸರಿಲ್ಲದೆ ಪಾಸ್‌ಪೋರ್ಟ್ ದೊರಕಿದೆ. ಅಪ್ಪನ ಹೆಸರಿಲ್ಲದೆ, ಟ್ರಾನ್ಸ್‌ಜೆಂಡರ್ ತಾಯಿಯ ಹೆಸರಿನಲ್ಲಿ ಪಾಸ್‌ಪೋರ್ಟ್ ನೀಡಿರುವುದು ಇದೇ ಮೊದಲಾಗಿದೆ.
“ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ತೃತೀಯಲಿಂಗಿ ಮಾನವ ಹಕ್ಕುಗಳ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ ಅವರ ಪುತ್ರ ಐದು ವರ್ಷದ ಅವಿನ್ ಅಕ್ಕೈ ಪದ್ಮಶಾಲಿಗೆ ತಂದೆಯ ಹೆಸರನ್ನು ನಮೂದು ಮಾಡದೆ ಪಾಸ್‌ಪೋರ್ಟ್ ನೀಡಿದೆ” ಎಂದು ವರದಿಯಾಗಿದೆ.
ತಂದೆಯ ಹೆಸರನ್ನು ನಮೂದಿಸದೆ, ತೃತೀಯ ಲಿಂಗಿ ತಾಯಿಯ ಹೆಸರಿನಲ್ಲಿ ಪಾಸ್‌ಪೋರ್ಟ್ ನೀಡಿರುವುದು ಭಾರತದಲ್ಲಿ ಐತಿಹಾಸಿಕವೂ ಹೌದು. ಈ ಪಾಸ್‌ಪೋರ್ಟ್‌ನಲ್ಲಿ ಅಕ್ಕೈ ಪದ್ಮಶಾಲಿಯನ್ನು ಪೋಷಕರು ಎಂದು ನಮೂದಿಸಲಾಗಿದೆ.
ಮಗುವಿನ ಪಾಸ್‌ಪೋರ್ಟ್‌ನಲ್ಲಿ ಮಹಿಳೆಯ ಹೆಸರನ್ನು ಮಾತ್ರ ‘ಪೋಷಕ’ ಎಂದು ನಮೂದಿಸಲಾಗಿದೆ. ಅಕ್ಕೈ ಪದ್ಮಶಾಲಿ ತಮ್ಮ ಸಿಸ್ಜೆಂಡರ್ ಪತಿ ವಾಸುದೇವ್ ವಿ. ಅವರಿಮದ ಡಿವೋರ್ಸ್ ಪಡೆದಿದ್ದಾರೆ. ಅಕ್ಕೈ ಪದ್ಮಶಾಲಿ “ವಿಚ್ಛೇದಿತ, ಏಕ-ಪೋಷಕ ಟ್ರಾನ್ಸ್ ವುಮನ್ ಎದುರಿಸುತ್ತಿರುವ ಸವಾಲನ್ನು ಸರಕಾರ ಒಪ್ಪಿಕೊಂಡಿದೆ. ಹೀಗಾಗಿ, ಈ ಮಹತ್ವದ ಕ್ರಮ ಕೈಕೊಂಡಿದೆ” ಎಂದು ಹೇಳಿದ್ದಾರೆ.
ಅಕ್ಕೈ ಪದ್ಮಶಾಲಿ ಮತ್ತು ವಾಸುದೇವ್ ಅವರು 2017ರಲ್ಲಿ ಮದುವೆಯಾಗಿದ್ದರು. 2018ರಲ್ಲಿ ತಮ್ಮ ವಿವಾಹವನ್ನು ನೋಂದಣಿ ಮಾಡಿದ್ದರು. 2019ರಲ್ಲಿ ಇವರಿಬ್ಬರು ಮಗುವೊಂದನ್ನು ದತ್ತು ಪಡೆದಿದ್ದರು. ಕಾನೂನುಬದ್ಧವಾಗಿ ವಿವಾಹವನ್ನು ನೋಂದಣಿ ಮಾಡಿರುವ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಮಹಿಳೆಯೂ ಇವರಾಗಿದ್ದಾರೆ. ಇದೀಗ ತಂದೆಯ ಹೆಸರಿಲ್ಲದೆ ಪಾಸ್‌ಪೋರ್ಟ್ ನೀಡಿರುವುದು ದೇಶದಲ್ಲಿ ತೃತೀಯ ಲಿಂಗಿಯ ಪೋಷಕರ ಹಕ್ಕುಗಳು ಗುರುತಿಸುವಲ್ಲಿ ಪ್ರಗತಿಶೀಲ ಬೆಳವಣಿಗೆ ಎನ್ನಲಾಗುತ್ತಿದೆ.
ಅಕಾಡೆಮಿ ನೇಮಕ ನಿರಾಕರಿಸಿದ ಅಕ್ಕೈ :
ಈ ವರ್ಷ ಮಾರ್ಚ ತಿಂಗಳಲ್ಲಿ ಅಕ್ಕೈ ಪದ್ಮಶಾಲಿಗೆ ರಾಜ್ಯ ಸರಕಾರವು ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ ನೇಮಿಸಿತ್ತು. ಆದರೆ, ಅಕಾಡೆಮಿ ಹುದ್ದೆಯಿಂದ ತಮ್ಮ ಹೆಸರನ್ನು ಕೈಬಿಡುವಂತೆ ಅಕ್ಕೈ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮನವಿ ಮಾಡಿದ್ದರು. “ತಮ್ಮನ್ನು ಅಕಾಡೆಮಿಗೆ ನೇಮಿಸಿದ್ದಕ್ಕೆ ಧನ್ಯವಾದಗಳು. ತೃತೀಯ ಲಿಂಗಿಗಳ ಮೇಲಿರುವ ಸಾಮಾಜಿಕ ಕಳಂಕದ ವಿರುದ್ಧ ಹೋರಾಟ ನಡೆಯಲು ಆದ್ಯತೆ ನೀಡುತ್ತಿದ್ದೇನೆ. ನನ್ನನ್ನು ಕರ್ನಾಟಕ ಶಾಸಕಾಂಗ ಅಥವಾ ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಿ” ಎಂದು ಒತತಾಯಿಸಿದ್ದರು.
DAKSHINA KANNADA
ಅ*ಪ್ರಾಪ್ತ ವಯಸ್ಕನ ಮೇಲೆ ಅ*ಸ್ವಾಭವಿಕ ಲೈಂ*ಗಿಕ ಕ್ರಿಯೆ ಆರೋಪ; ಶಿಕ್ಷಕ ದೋಷಮುಕ್ತ
Published
21 hours agoon
13/11/2024ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮೇಲೆ ಕಾಲೇಜಿನಲ್ಲಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೀರ್ಘ ತನಿಖೆಯ ಬಳಿಕ ನೈಜ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ಶಿಕ್ಷನನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ (ಪೊಕ್ಸೊ) ದೋಷಮುಕ್ತ ಗೊಳಿಸಿದೆ.
ಏನಿದು ಪ್ರಕರಣ ?
‘ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ನೃತ್ಯ ಅಭ್ಯಾಸ ಮಾಡುತ್ತಿದ್ದಾಗ ಉಪನ್ಯಾಸಕ ಕಾರ್ತಿಕ್, ನೋಟ್ಸ್ ನೋಡುವ ನೆಪದಲ್ಲಿ ಅ*ಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಕರೆಸಿಕೊಂಡಿದ್ದರು. ನಂತರ ದೈಹಿಕ ಶಿಕ್ಷಕರ ಕೊಠಡಿಗೆ ಕರೆದೊಯ್ದು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡುವುದಾಗಿ ಆಮಿಷವೊಡ್ಡಿ ಬಟ್ಟೆ ಕ*ಳಚಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ್ದರು. ನಂತರವೂ ಹಲವು ಬಾರಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ್ದರು’ ಎಂದು ಆ*ರೋಪಿಸಿ ಅ*ಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ದೂರು ನೀಡಿದ್ದ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ್ದ ಸಹಾಯಕ ಪೊಲೀಸ್ ಆಯುಕ್ತ ಪಿ. ಎ. ಹೆಗಡೆ ಮತ್ತು ಎಸ್.ಮಹೇಶ್ ಕುಮಾರ್ ದೋಷರೋಪಣ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ : ಉಜಿರೆ: ಕಬಡ್ಡಿ ಕ್ರೀಡಾಪಟುವಾಗಿದ್ದ ಕಾಲೇಜು ವಿದ್ಯಾರ್ಥಿ ಅಸೌಖ್ಯದಿಂದ ಮೃ*ತ್ಯು
‘ಪರೀಕ್ಷೆಗಳಲ್ಲಿ ಅತ್ಯಂತ ಕಡಿಮೆ ಅಂಕಗಳಿಸಿದ್ದನ್ನು ಹಾಗೂ ಈ ಸಲುವಾಗಿ ಆರೋಪಿ ಉಪನ್ಯಾಸಕರು ಪೋಷಕರನ್ನು ಕಾಲೇಜಿಗೆ ಹಲವು ಬಾರಿ ಕರೆಸಿದ್ದನ್ನು ವಿದ್ಯಾರ್ಥಿಯು ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣಾ ಸಮಯದಲ್ಲಿ ಒಪ್ಪಿಕೊಂಡಿದ್ದ. ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿದ ಪ್ರಕರಣ ಸಂಬಂಧ ಪೋಷಕರನ್ನು ಕಾಲೇಜಿಗೆ ಕರೆಸಿದ್ದನ್ನೂ ಒಪ್ಪಿಕೊಂಡಿದ್ದ. ವಿದ್ಯಾರ್ಥಿಯನ್ನು ಪೊಲೀಸರು ಡ್ರ*ಗ್ಸ್ ಸೇವನೆ ವಿಚಾರವಾಗಿ ವಿಚಾರಣೆ ಮಾಡಿ, ಎಚ್ಚರ ನೀಡಿದ ಕುರಿತು ಕಾಲೇಜಿನ ಪ್ರಾಂಶುಪಾಲರು ನ್ಯಾಯಾಲದಲ್ಲಿ ಹೇಳಿಕೆ ನೀಡಿದ್ದರು. ವಿದ್ಯಾರ್ಥಿ ಡ್ರ*ಗ್ಸ್ ಸೇವನೆ ಮಾಡಿದ ಬಗ್ಗೆ ಆರೋಪಿ ಉಪನ್ಯಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಹಗೆಯಿಂದ ವಿದ್ಯಾರ್ಥಿಯು ಕತೆ ಕಟ್ಟಿ ಉಪನ್ಯಾಸಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದ’ ಎಂದು ಆರೋಪಿ ಪರ ವಕೀಲರಾದ ರಾಜೇಶ್ ಕುಮಾರ್ ಅಮ್ಟಾಡಿ ವಾದಿಸಿ ಸಾಬೀತುಪಡಿಸಿದ್ದರು.
DAKSHINA KANNADA
ಪಕ್ಷಿಕೆರೆ ಮೂವರ ಸಾ*ವಿನ ಪ್ರಕರಣ; ಕಾರ್ತಿಕ್ ಭಟ್ ನ ಅವ್ಯವಹಾರ ಬಯಲು
Published
1 day agoon
13/11/2024ಕಿನ್ನಿಗೋಳಿ: ಪಕ್ಷಿಕೆರೆಯಲ್ಲಿ ನಡೆದ ಕೊ*ಲೆ ಮತ್ತು ಆ*ತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ.
ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್ ವೊಂದರಲ್ಲಿ ತನ್ನ 10 ಪವನ್ ಚಿನ್ನವನ್ನು ಅಡವಿಟ್ಟು 1 ಲಕ್ಷ 60 ಸಾವಿರ ಸಾಲ ಪಡೆದಿದ್ದ ಮಹಮ್ಮದ್ ಅವರಿಗೆ ಇನ್ನೂ ಹೆಚ್ಚಿನ ಸಾಲದ ಅಗತ್ಯವಿದೆ ಎಂದು ಅರಿತ ಕಾರ್ತಿಕ್ ಭಟ್ ತಾನೂ ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೀಗಾಗಿ ಮಹಮ್ಮದ್ ಅವರು ಪಕ್ಷಿಕೆರೆ ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ, ಕಾರ್ತಿಕ್ ಬ್ರಾಂಚ್ ಮ್ಯಾನೇಜರ್ ಆಗಿರುವ ಬ್ಯಾಂಕ್ ನಲ್ಲಿ ಇರಿಸಿ 3 ಲಕ್ಷ 4 ಸಾವಿರ ಸಾಲ ಪಡೆದಿದ್ದರು.
ಈ ನಡುವೆ ವೈಯಕ್ತಿಕ ಸಮಸ್ಯೆಯಿಂದ ಮಹಮ್ಮದ್ ಅವರು ಊರಲ್ಲಿ ಇರದ ಕಾರಣ ಬ್ಯಾಂಕ್ ಗೆ ಸರಿಯಾಗಿ ಭೇಟಿ ನೀಡಿರಲಿಲ್ಲ. ಕಾರ್ತಿಕ್ ಅತ್ಮಹತ್ಯೆ ಮಾಡಿದ ಕಾರಣ ಸಂಶಯಗೊಂಡ ಮಹಮ್ಮದ್ ಅವರು ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ.
ಇದನ್ನೂ ಓದಿ : ಪಕ್ಷಿಕೆರೆಯಲ್ಲಿ ಕೊ*ಲೆ ಪ್ರಕರಣ; ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ
ಕಾರ್ತಿಕ್ ಈ ಬಂಗಾರವನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳಕೊಂಡ ಮಹಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
LATEST NEWS
ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್ ಕೇಳಿದ ಗಂಡ!
ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ಸಿಹಿಸುದ್ದಿ: ಎಲ್ಲಾ ನಿಲ್ದಾಣಗಳಲ್ಲಿ ‘ಡಿಜಿಟಲ್ ಲಗೇಜ್ ಲಾಕರ್’ ಸೌಲಭ್ಯ
ಅಯ್ಯಪ್ಪನ ಭಕ್ತರಿಗೆ KSRTC ಗುಡ್ನ್ಯೂಸ್; ಶಬರಿಮಲೆಗೆ ಹೋಗಲು ವಿಶೇಷ ವ್ಯವಸ್ಥೆ..!
ಪಾರು ಖ್ಯಾತಿಯ ಮೋಕ್ಷಿತಾಗೆ ತುಕಾಲಿ ಸಂತು ತರದ ಗಂಡ ಬೇಕಂತೆ..!
ತೃತೀಯ ಲಿಂಗಿ ತಾಯಿಯ ಹೋರಾಟ ; ಅಪ್ಪನ ಹೆಸರಿಲ್ಲದೆ ಪಾಸ್‌ಪೋರ್ಟ್ ಪಡೆದ ಮಗ .. !
ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು
Trending
- LATEST NEWS17 hours ago
ಬಾದಾಮಿ-ಹರ್ಬಲ್ ಟೀಯಂತಹ ಸಿಂಪಲ್ ಆಹಾರದಿಂದಲೇ 32 ಕೆಜಿ ಸ್ಲಿಮ್ ಆದ ವ್ಯಕ್ತಿ; 90 ದಿನಗಳಲ್ಲೇ ರಿಸಲ್ಟ್!
- DAKSHINA KANNADA21 hours ago
ಅ*ಪ್ರಾಪ್ತ ವಯಸ್ಕನ ಮೇಲೆ ಅ*ಸ್ವಾಭವಿಕ ಲೈಂ*ಗಿಕ ಕ್ರಿಯೆ ಆರೋಪ; ಶಿಕ್ಷಕ ದೋಷಮುಕ್ತ
- LATEST NEWS19 hours ago
ಅಯ್ಯಪ್ಪನ ಭಕ್ತರಿಗೆ KSRTC ಗುಡ್ನ್ಯೂಸ್; ಶಬರಿಮಲೆಗೆ ಹೋಗಲು ವಿಶೇಷ ವ್ಯವಸ್ಥೆ..!
- LATEST NEWS7 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್