Wednesday, August 12, 2020

ಜೀವವನ್ನೇ ಒತ್ತೆಯಿಟ್ಟು ಪುಣ್ಯ ಕಾರ್ಯ ಮಾಡಿದ ಚೌಳಿಕೆರೆ ಅವಳಿ ವೀರರು…!!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಉಡುಪಿ ಚೌಳಿಕೆರೆ ಕಾರು ಅಪಘಾತದಲ್ಲಿ ಜೀವದ ಹಂಗು ತೊರೆದು ಕೆರೆಗೆ ಧುಮುಕಿ ಜೀವ ಉಳಿಸಿದ ಯುವಕರು…

ಉಡುಪಿ: ಯಾವುದೇ ಒಂದು ಅಪಘಾತ ನಡೆದರೆ ಮೊಬೈಲ್ ತೆಗೆದು ವಿಡಿಯೋ ಮಾಡಿ, ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡೋ ಈಗಿನ ದಿನಗಳಲ್ಲಿ,

ತಮ್ಮ ಜೀವದ ಹಂಗು ತೊರೆದು ಜೀವ ಉಳಿಸೋ ಪುಣ್ಯ ಕಾರ್ಯ ಮಾಡಿದ ಬಾರ್ಕೂರಿನ ಅವಳಿ ವೀರರು ಎಲ್ಲರ ನಡುವೆ ವಿಭಿನ್ನ ಎನಿಸಿಕೊಂಡಿದ್ದಾರೆ.

ಹೌದು.. ಉಡುಪಿ ಚೌಳಿಕೆರೆ ಕಾರು ಅಪಘಾತದಲ್ಲಿ ಜೀವದ ಹಂಗು ತೊರೆದು ಕೆರೆಗೆ ಧುಮುಕಿ ಜೀವ ಉಳಿಸಿದ ಅಪತ್ಬಾಂಧವರು ಸದ್ಯ ಭಾರಿ ಪ್ರಶಂಸೆಗೆ ಒಳಗಾಗುತ್ತಿದ್ದಾರೆ.

ಜೂನ್ 21ರಂದು ಬಾರ್ಕೂರಿನ ಹೂಳು ತುಂಬಿದ್ದ ಚೌಳಿಕೆರೆಗೆ ಉರುಳಿ ತಲೆ ಕೆಳಗಾಗಿದ್ದ ಕಾರಿನಿಂದ ಇಬ್ಬರನ್ನು ಹೊರಗೆಳೆದ ಯುವಕರಿಬ್ಬರ ಶೌರ್ಯ ಇದೀಗ ಸ್ಥಳೀಯವಾಗಿ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಬಾರ್ಕೂರಿನವರೇ ಆಗಿರುವ ಪ್ರವೀಣ್ ಪೂಜಾರಿ ಹಾಗೂ ಪ್ರದೀಪ್ ದೇವಾಡಿಗ ಎಂಬ ಇಬ್ಬರು ಯುವಕರೇ ಸಕಾಲಿಕ ಸಮಯಪ್ರಜ್ಞೆ ಮೆರೆದು ಅಮೂಲ್ಯ ಜೀವದ ಉಳಿವಿಗೆ ಕಾರಣರಾದವರು.

ಜೂನ್ 21 ರಂದು ಬೀಜಾಡಿಯ ಲಕ್ಷ್ಮೀ ಗ್ಲಾಸ್ & ಪ್ಲೈವುಡ್ ನ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಶ್ವೇತ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರಿನ ನಿಯಂತ್ರಣ ತಪ್ಪಿ ಬಾರ್ಕೂರಿನ ಚೌಳಿಕೆರೆಗೆ ಬಿದ್ದು ಸಂತೋಷ ಶೆಟ್ಟಿ ಸಾವನ್ನಪ್ಪಿದರು.

ಕಾರಿನಲ್ಲಿದ್ದ ಅಂಗಡಿಯ ಕೆಲಸದಾಕೆ ಶ್ವೇತ ಶೆಟ್ಟಿ ಈಗ ಮಣಿಪಾಲದಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ.

ಅಪಘಾತ ನಡೆದ ತಕ್ಷಣ ಹತ್ತಾರು ಮಂದಿ ಸೇರಿ ಬೊಬ್ಬೆ ಹೊಡೆಯುತ್ತಿದ್ದು, ಯಾರೂ ಕೂಡ ಕೆರೆಗೆ ಧುಮುಕದೇ ಇದ್ದ ಸಂದರ್ಭದಲ್ಲಿ,

ಪ್ರದೀಪ್ ದೇವಾಡಿಗ ಹಾಗೂ ಪ್ರವೀಣ್ ಪೂಜಾರಿ ಎಂಬ ಯುವಕರಿಬ್ಬರು ಜೀವದ ಹಂಗು ತೊರೆದು ಕೆರೆಗೆ ಧುಮುಕಿ ಕಾರಿನ ಡೋರನ್ನು ಒಡೆಯುವ ಸಾಹಸವನ್ನು ಮಾಡಿದ್ದಾರೆ.

ಮಾತ್ರವಲ್ಲದೇ ಅದರ ಒಳಗಿದ್ದವರನ್ನು ಹೊರಗೆಳೆಯುವ ಸಾಹಸಕ್ಕೂ ಕೈ ಹಾಕಿದ್ದಾರೆ.

ನೀರು ಕುಡಿದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಹೊರಗೆಳೆದ ಯುವಕರು ಆಕೆಯನ್ನು ಇನ್ನೊಬ್ಬ ಯುವಕನ ಮೂಲಕ ಕೆರೆಯ ದಡಕ್ಕೆ ಸಾಗಿಸಿದ್ದಾರೆ.

ಅಲ್ಲಿ ಈ ಯುವತಿಗೆ ನಮನಾ ಎಂಬ ವಿದ್ಯಾರ್ಥಿನಿ ಸಹಿತ ಉಳಿದವರು ಪ್ರಥಮ ಚಿಕಿತ್ಸೆ ಮಾಡಿ ಆಕೆಯ ಹೊಟ್ಟೆಯಲ್ಲಿದ್ದ ನೀರನ್ನು ಹೊರಹಾಕಿ,

ಮೈಯನ್ನು ಬೆಚ್ಚಗಾಗಿಸುವ ಮೂಲಕ ಆಕೆಯ ಜೀವವನ್ನು ಉಳಿಸುವ ಪ್ರಾಥಮಿಕ ಕೆಲಸವನ್ನು ಮಾಡಿದ್ದಾರೆ.

ಬಳಿಕ ಕಾರಿನಲ್ಲಿದ್ದ ವಕ್ವಾಡಿಯ ಉದ್ಯಮಿ ಸಂತೋಷ್ ಶೆಟ್ಟಿ ಅವರನ್ನೂ ಕೂಡ ಈ ಯುವಕರು ಕಷ್ಟಪಟ್ಟು ಕಾರಿನಿಂದ ಹೊರಗೆಳೆದಿದ್ದಾರೆ.

ಆದರೆ ಸಂತೋಷ್ ಅವರು ಆಗಲೇ ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನಲೆ ಅವರನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಫಲ ನೀಡಿಲ್ಲ.

ಈ ನಡುವೆ ಸಮಯಕ್ಕೆ ಸರಿಯಾಗಿ ಪ್ರಥಮ ಚಿಕಿತ್ಸೆ ನೀಡಿ ಯುವತಿಯನ್ನು ಬದುಕಿಸಲು ನೆರವಾದ ವಿದ್ಯಾರ್ಥಿನಿ ನಮನ ಅವರ ವಿಡಿಯೋ ವೈರಲ್ ಆಗಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

ಆದರೆ ಕೆಸರು ತುಂಬಿದ ಕೆರೆಗೆ ಧುಮುಕಿ ಕಾರಿನಲ್ಲಿದ್ದವರನ್ನು ಸಾಹಸದಿಂದ ಹೊರಗೆಳೆದ ಈ ಇಬ್ಬರು ಯುವಕರ ಕುರಿತಾದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.

ಹಾಗೂ ಈ ಇಬ್ಬರು ಯುವಕರ ಸಮಯಪ್ರಜ್ಞೆ ಹಾಗೂ ಸಾಹಸ ಕಾರ್ಯಕ್ಕೆ ಸದ್ಯ ಎಲ್ಲೆಡೆಯಿಂದ ಮೆಚ್ಚುಗೆ ಲಭಿಸುತ್ತಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.