Tuesday, August 16, 2022

ಕಾಪು: ಲೋಡ್‌ ತುಂಬಿದ್ದ ಟೆಂಪೋವಿನ ಟಯರ್ ಬ್ಲಾಸ್ಟ್‌-ಉರುಳಿ ಬಿದ್ದ ವಾಹನ

ಕಾಪು: ಲೋಡ್‌ ತುಂಬಿದ್ದ ಟೆಂಪೊವೊಂದು ಟಯರ್ ಬ್ಲಾಸ್ಟ್‌ ಆಗಿ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.


ಸಿದ್ದಾಪುರದಿಂದ ಮಂಗಳೂರಿಗೆ ಅಡಿಕೆ ಸಾಗಾಟ ಮಾಡುತ್ತಿದ್ದ ಟೆಂಪೋವಿನ ಟಯರ್ ಮಾರ್ಗ ಮಧ್ಯೆ ಬ್ಲಾಸ್ಟ್‌ ಆಯಿತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಫ್ಲೈ ಒವರ್ ನಲ್ಲಿ ಪಲ್ಟಿಯಾಗಿ ರಸ್ತೆ ಗೆ ಅಡ್ಡವಾಗಿ ಬಿದ್ದಿದೆ.
ಇದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಘಟನೆಯಲ್ಲಿ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು...

ಬೆಳ್ತಂಗಡಿ: ಮರೋಡಿಯಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಸಂಭ್ರಮ

ವೇಣೂರು: ಮರೋಡಿ ಅರುಣೋದಯ ಯುವಕ ಮಂಡಲದ ಆಶ್ರಯದಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಕಾರ್ಯಕ್ರಮವು ಮರೋಡಿಯ ಬೊವೂರಿ ಜಯ ಪೂಜಾರಿಯವರ ಗದ್ದೆಯಲ್ಲಿ ಭಾನುವಾರ ನಡೆಯಿತು.ಶಾಸಕ ಹರೀಶ್ ಪೂಂಜ ಕ್ರೀಡಾಕೂಟವನ್ನು ಉದ್ಘಾಟಿಸಿ, ನಮ್ಮ ಮಣ್ಣಿನ ಕ್ರೀಡೆಯನ್ನು...

ದ.ಕ.ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್‌ : ಸ್ವಾತಂತ್ರ್ಯ ಸಂಭ್ರಮ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಮತ್ತು ರಜಕ ಯೂತ್ ಮಂಗಳೂರು ಸಹಭಾಗಿತ್ವದಲ್ಲಿ ಆಝಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಸಂಘದ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ಸಂಭ್ರಮದ...