Connect with us

ಕರ್ನಾಟಕ ಬಂದ್‌ಗೆ ನಾವು ಕೂಡಾ ಬೆಂಬಲ ನೀಡಿದ್ದೇವೆ-ಯು.ಟಿ.ಖಾದರ್ 

Published

on

ಕರ್ನಾಟಕ ಬಂದ್‌ಗೆ ನಾವು ಕೂಡಾ ಬೆಂಬಲ ನೀಡಿದ್ದೇವೆ-ಯು.ಟಿ.ಖಾದರ್

ಮಂಗಳೂರು-: “ಪ್ರಸ್ತುತವಾಗಿ ಎಲ್ಲಾ ಕಡೆಗಳಲ್ಲಿ ಖಾಸಗೀಕರಣವಾಗಿದೆ. ಹಾಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ದೊರೆಯಬೇಕು ಎಂಬ ಬೇಡಿಕೆ ಸಾಮಾನ್ಯ. ಆ ಹಿನ್ನಲೆಯಲ್ಲಿ ಈ ಕರ್ನಾಟಕ ಬಂದ್‌ಗೆ ನಾವು ಕೂಡಾ ಬೆಂಬಲ ನೀಡಿದ್ದೇವೆ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರ್ಕಾರ ಬಂದ್‌ ಮಾಡುವವರನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಆದರೆ ಸರ್ಕಾರ ಬಂದ್‌ ಮಾಡುವವರ ಬಳಿ ಮಾತನಾಡಲು ತಯಾರಿಲ್ಲ. ಚರ್ಚೆ ನಡೆಸಿದರಲ್ಲವೇ ಸಮಸ್ಯೆ ಬಗೆಹರಿಸಲು ಸಾಧ್ಯ, ಆದರೆ ಸರ್ಕಾರ ಚರ್ಚೆ ಮಾಡಲು ತಯಾರಿಲ್ಲ” ಎಂದಿದ್ದಾರೆ. ಖಾಸಗೀ ಕಂಪೆನಿಯವರೊಂದಿಗೂ ಸರ್ಕಾರವು ಚರ್ಚೆ ನಡೆಸಬೇಕು. ಸ್ಥಳೀಯರಿಗೆ ಕೆಲಸ ಕೊಡಲು ಸಮಸ್ಯೆಯೇನು ಎಂದು ಪ್ರಶ್ನಿಸಬೇಕು. ಹಾಗೆಯೇ ಈ ವರದಿಯನ್ನು ಎಷ್ಟು ಅನುಷ್ಟಾನಕ್ಕೆ ತರಬಹುದು ಎಂಬುದರ ಕುರಿತಾಗಿಯೂ ಚರ್ಚೆ ನಡೆಸಬೇಕು” ಎಂದು ಅವರು ಹೇಳಿದರು.

ವಿಡಿಯೋಗಾಗಿ

Click to comment

Leave a Reply

Your email address will not be published. Required fields are marked *

LATEST NEWS

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜೊತೆ 10 ವರ್ಷದ ಬಾಲಕಿ ಪರಾರಿ

Published

on

ವಡೋದರ: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಗುಜರಾತ್‌ನ ಧನ್ಸೂರಾ ಗ್ರಾಮದ ಹತ್ತು ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನ ಬಾಲಕನ ಜೊತೆ ಓಡಿ ಹೋಗಿರುವ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್‌ ಖಾತೆಯನ್ನು ಬಳಸಿ 16 ವರ್ಷದ ಬಾಲಕನ ಜೊತೆ ಚಾಟಿಂಗ್ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್ ಆತ್ಮೀಯತೆಗೆ ತಿರುಗಿದೆ.

ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ ಬಾಲಕಿಯ ಮನೆಯವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಕಿಡ್ನಾಪ್ ಮಾಡಿರಬಹುದೆನ್ನುವ ಸಂಶಯದ ಮೇರೆಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ.

ತಾವಿಬ್ಬರು ಇನ್ಸ್ಟಾಗ್ರಾಮ್‌ ಮೂಲಕ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದೇವೆ. ತಮ್ಮ ಮೂವರು ಸ್ನೇಹಿತರ ಸಹಾಯ ಪಡೆದು ಓಡಿಹೋಗಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ಮುಂದೆ ಇಬ್ಬರೂ ಅಪ್ರಾಪ್ತರು ಹೇಳಿದ್ದಾರೆ. ಸದ್ಯ ಇಬ್ಬರನ್ನು ಬಾಲಾಪರಾಧಿಗ್ರಹಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Continue Reading

DAKSHINA KANNADA

ಗುರುಪುರ : ನಗರದ ಹಲವು ಅಂಗಡಿಗಳಲ್ಲಿ ಕಳ್ಳತನ

Published

on

ಬಜಪೆ: ಎಲೆಕ್ಟ್ರಾನಿಕ್‌ ಅಂಗಡಿ, ಬೇಕರಿ, ತರಕಾರಿ ಅಂಗಡಿ ಹಾಗೂ ಬಂಡ ಶಾಲೆಯ ಒಂದು ಗೂಡಂಗಡಿಗೆ ಶುಕ್ರವಾರದ ರಾತ್ರಿ ವೇಳೆಯಲ್ಲಿ ಕಳ್ಳರು ನುಗ್ಗಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಸಾಮಾಗ್ರಿ, ಚಿನ್ನದ ಉಂಗುರ, ನಗದು, ಬೇಕರಿಯಿಂದ ತಿಂಡಿ, ನಗದು, ತರಕಾರಿ ಅಂಗಡಿಯಿಂದ ನಗದು ನಾಣ್ಯ, ಸಿಗರೇಟ್‌, ಗೂಡಂಗಡಿಯಿಂದ ಬಿಸ್ಕತ್‌ನ್ನು ಕಳವು ಮಾಡಿರುವ ಘಟನೆ ಗುರುಪುರ ಪೇಟೆಯಲ್ಲಿ ನಡೆದಿದೆ.


ಗುರುಪುರ ಪೇಟೆಯ ಉಮೇಶ್‌ ಭಟ್‌ ರ ಎಲೆಕ್ಟ್ರಾನಿಕ್‌ ಅಂಗಡಿಗೆ ನುಗ್ಗಿ 12 ಮೊಬೈಲ್‌ ಫೋನ್‌, 20 ಸಾವಿರ ರೂಪಾಯಿ ಮೊತ್ತದ ಇಲೆಕ್ಟ್ರಾನಿಕ್‌ ಸಾಮಾಗ್ರಿಗಳು, 60 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಉಂಗುರ, ಸುಮಾರು 25 ಸಾವಿರ ರೂಪಾಯಿ ನಗದು ಕಳವು ಮಾಡಲಾಗಿದೆ. ಉಮೇಶ್‌ ನ ಸಹೋದರ ರಮೇಶ್‌ ಭಟ್‌ ರ ಬೇಕರಿ ಅಂಗಡಿಗೆ ನುಗ್ಗಿದ ಕಳ್ಳರು ಬೇಕರಿ ತಿಂಡಿಗಳನ್ನು ಹಾಗೂ ನಗದುಗಳನ್ನು ಶಟರ್‌ ಬೀಗ ಒಡೆದು ಕಳವು ಮಾಡಿದ್ದಾರೆ. ಸಂಶುದ್ದೀನ್‌ ನ ತರಕಾರಿ ಅಂಗಡಿಯ ಮರದ ಬಾಗಿಲಿನ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ಡಬ್ಬಿಯಲ್ಲಿದ್ದ ಹತ್ತು ರೂಪಾಯಿಯ ನ್ಯಾಣ ಸುಮಾರು 10 ಸಾವಿರ ರೂಪಾಯಿ ನಗದು, ಸುಮಾರು 10ಸಾವಿರ ರೂಪಾಯಿ ಮೌಲ್ಯದ ಸಿಗರೇಟ್‌ ಸಹಿತ 20 ಸಾವಿರ ರೂಪಾಯಿ ಮೌಲ್ಯದ ಸೊತ್ತು ಕಳವು ಮಾಡಿದ ಕಳ್ಳರು ಅಂಗಡಿಯಲ್ಲಿನ ಫ್ರೀಜ್‌ನಲ್ಲಿದ್ದ ಮೊಸರನ್ನು ಕುಡಿದಿದ್ದಾರೆ ಹಾಗೂ ಚೆಲ್ಲಿದ್ದಾರೆ. ಅಂಗಡಿಯಲ್ಲಿದ್ದ ಅನಾನಸನ್ನು ತುಂಡು ಮಾಡಿ,ತಿಂದಿದ್ದಾರೆ. ಇಲ್ಲಿ ಕಳ್ಳರು ಹಲವು ಹೊತ್ತು ಕಾಲ ಕಳೆದಿರುವುದು ಕಂಡು ಬಂದಿದೆ.ಬಂಡಸಾಲೆಯಲ್ಲಿ ಧರ್ಮಣ ಪೂಜಾರಿ ಗೂಡಂಗಡಿಯ ಶಟರ್‌ನ ಬೀಗ ಮುರಿದು ಬಿಸ್ಕತ್‌ನ್ನು ಕಳವು ಮಾಡಿದ್ದಾರೆ.

ಸುಮಾರು ರಾತ್ರಿ 2 ರಿಂದ 3 ಗಂಟೆಯೊಳಗೆ ಈ ಕಳವು ನಡೆದಿದೆ. ಇದು ಒಂದು ಕಳ್ಳರ ತಂಡವಾಗಿದ್ದು, ಗುರುಪುರ ಪೇಟೆಯಲ್ಲಿ ಸಿಸಿ ಕ್ಯಾಮಾರದಲ್ಲಿ ಕಳ್ಳರ ಸುಳಿವು ಸಿಗುವ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕಳವಿನ ಬಗ್ಗೆ ಮಾಹಿತಿ ಪಡೆದು ಹೇಳಿಕೆ ತೆಗೆದುಕೊಂಡು ಹೋಗಿದ್ದಾರೆ.

Continue Reading

LATEST NEWS

ಮುಂದಿನ 3 ದಿನ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

Published

on

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.

Continue Reading

LATEST NEWS

Trending

Exit mobile version