Monday, July 4, 2022

ಪಕ್ಷದಲ್ಲಿ ಯು.ಟಿ ಖಾದರ್‌ಗೆ ಮಹತ್ವದ ಜವಾಬ್ದಾರಿ: ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದ ಖಾದರ್‌

ಬಂಟ್ವಾಳ: ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ವಿಧಾನಸಭೆ ವಿರೋಧಪಕ್ಷದ ಉಪನಾಯಕರಾಗಿ ನಿಯುಕ್ತಿಗೊಂಡಿರುವ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಸೋಮವಾರ ಭೇಟಿಯಾಗಿ ಅವರ ಆಶೀರ್ವಾದವನ್ನು ಪಡೆದುಕೊಂಡರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, “ತನ್ನ ಕೆಲಸ ಕಾರ್ಯಗಳನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಲಾಗಿದ್ದು,

ಹಿರಿಯರ ಆಶೀರ್ವಾದ ಪಡೆಯಲು ಪೂಜಾರಿಯವರ ಮನೆಗೆ ಬಂದಿದ್ದೇನೆ. ಹಿರಿಯ ಕಾಂಗ್ರೆಸ್ ನಾಯಕರ ಮಾರ್ಗದರ್ಶನದಂತೆ ಕೆಲಸ ಮಾಡುತ್ತೇನೆ ಎಂದರು.

ಬಿ.ಕೆ.ಹರಿಪ್ರಸಾದ್ ಅವರು ವಿಧಾನಪರಿಷತ್ತಿನ ಪಕ್ಷದ ನಾಯಕರಾದದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಆಸ್ಕರ್ ಫೆರ್ನಾಂಡಿಸ್, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಸಹಿತ ಪ್ರಮುಖ ನಾಯಕರ ಆಶೀರ್ವಾದದಿಂದ ಮುನ್ನಡೆಯುತ್ತೇನೆ.

ಎಲ್ಲ ಜಾತಿ ಧರ್ಮದವರೊಂದಿಗೆ ಬೆರೆತು ಕೆಲಸ ಮಾಡುವ ಕಾರಣ ತನಗೆ ಈ ಹುದ್ದೆ ದೊರಕಿದೆ ಎಂದು ಭಾವಿಸುತ್ತೇನೆ ಎಂದರು. , ಅವರು ಹಿರಿಯ ನಾಯಕರಾಗಿದ್ದು, ಪಕ್ಷದಲ್ಲೇ ಇರುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಬಳಿಕ ಸುದ್ದಿಗಾರರು ಸಿ.ಎಂ.ಇಬ್ರಾಹಿಂ ಅವರು ಪಕ್ಷ ತ್ಯಾಗದ ಕುರಿತು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಖಾದರ್ “ಸಿ.ಎಂ.ಇಬ್ರಾಹಿಂ ಅವರು ಪಕ್ಷದ ಹಿರಿಯ ನಾಯಕರಾಗಿದ್ದಾರೆ.

ಸದ್ಯ ಪಕ್ಷದ ವರಿಷ್ಠರೊಂದಿಗೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತ್ಯಜಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿವೆ.

ಈ ನಡುವೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಇಬ್ರಾಹಿಂ ಅವರು ಪಕ್ಷದಲ್ಲಿ ಉಳಿಯುತ್ತಾರೆ.

ಪಕ್ಷ ಬಲಪಡಿಸಲು ಹಾಗೂ ಬಿಜೆಪಿ ಕಿತ್ತೊಗೆಯಲು ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಪೂಜಾರಿ, ದೇವಸ್ಥಾನ, ಮಸೀದಿ, ಚರ್ಚುಗಳಿಗೆ ತೆರಳಿ ಸರ್ವಧರ್ಮದ ದೇವರ ಅನುಗ್ರಹ ಪಡೆದುಕೊಂಡು, ಉತ್ತಮವಾಗಿ ಕೆಲಸ ಕಾರ್ಯಗಳನ್ನು ನಡೆಸುವಂತೆ ಯು.ಟಿ.ಖಾದರ್ ಅವರಿಗೆ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್,

ಇರಾ ಗ್ರಾಪಂ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.
.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...