Wednesday, December 1, 2021

ಇಂದಿನಿಂದ ಭಾರತ-ಯುಎಇ ವಿಮಾನಯಾನ ಆರಂಭ

ನವದೆಹಲಿ: ಕೊರೊನಾ ವೈರಸ್‌ ಪ್ರಕರಣಗಳ ಉಲ್ಬಣದಿಂದಾಗಿ ಭಾರತ–ಯುಎಇ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದ್ದು, ಇಂದಿನಿಂದ (ಗುರುವಾರ) ಕಾರ್ಯಾಚರಣೆ ಪುನಾರಂಭಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ.

‘ಜೂನ್ 24ರಿಂದ ಎಲ್ಲಾ ಏರ್ ಇಂಡಿಯಾ ವಿಮಾನಗಳು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಡಿಎಕ್ಸ್‌ಬಿ) ಟರ್ಮಿನಲ್ -1ರಿಂದ ಕಾರ್ಯನಿರ್ವಹಿಸಲಿವೆ’ ಎಂದು ಏರ್ ಇಂಡಿಯಾ ತಿಳಿಸಿದೆ. ದುಬೈನಿಂದ ನಿರ್ಗಮಿಸಲಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳು ದುಬೈ ಟರ್ಮಿನಲ್ -2ರಿಂದ ಕಾರ್ಯನಿರ್ವಹಿಸಲಿವೆ ಎಂದು ಹೇಳಲಾಗಿದೆ. ಭಾರತದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾದ ಕಾರಣಕ್ಕೆ ಏ.24ರಿಂದ ವಿಮಾನ ಸಂಚಾರ ನಿಷೇಧಿಸಿ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...