Connect with us

UDUPI

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶೋತ್ಸವ-4ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Published

on

ಉಡುಪಿ: ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯಕ್ತ  ಕ್ಷೇತ್ರದಲ್ಲಿ ನಾಲ್ಕನೆ ದಿನವಾದ ನಿನ್ನೆ ಬೆಳಿಗ್ಗೆ ಬಿಂಬಶುದ್ಧಿ ಹಾಗೂ ಅರಣಿಜನಿತಾಗ್ನಿಗೆ ವೈಷ್ಣವತ್ವ ಕರ್ಮಗಳು,

ಸುಗಮ ಸಂಗೀತ, ಮಧ್ಯಾಹ್ನ ಅನ್ನ ಸಂತರ್ಪಣೆ, ಚಕ್ರಾಬ್ಧ ಮಂಡಲ ಪೂಜೆ, ನಿತ್ಯ ಭಜನಾ ಕಾರ್ಯಕ್ರಮ ನಡೆದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.


ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಕ್ತಿ ಕುಣಿತ ಕಾರ್ಯಕ್ರಮ, ನೃತ್ಯ ಭಾರತಿ ಕದ್ರಿ ಮಂಗಳೂರು ತಂಡದಿಂದ ನೃತ್ಯ ರೂಪಕ ನವದುರ್ಗ ನಮಃ ಶ್ರೀ ಕೃಷ್ಣಾಂತರಂಗ ಹಾಗೂ ನಮಸ್ಕಾರ ಮೇಸ್ಟ್ರೇ ನಾಟಕ ಪ್ರದರ್ಶನ ನಡೆಯಿತು.

ಧಾರ್ಮಿಕ ಸಭಾ ಕಅರ್ಯಕ್ರಮದಲ್ಲಿ ಜೀರ್ಣೋದ್ಆಧರ ಸಮಿತಿಯ ಗೌರವಾಧ್ಯಕ್ಷ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಜಿ ಶಂಕರ್ ಅಧ್ಯಕ್ಷತೆ ವಹಿಸಿದ್ರು.ಆಶೀರ್ವನ ನೀಡಿ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ “ಕರಾವಳಿಗರದ್ದು ಅಗಾಧ, ಅಪೂರ್ವ ದೃಡವಾದ ನಂಬಿಕೆಯಾಗಿದೆ.

ನಮ್ಮಲ್ಲಿ ಯಾವುದೇ ಪ್ರಾಕೃತಿಕ ವಿಕೋಪಗಳಾಗದು.ನಂಬಿಕೆಯನ್ನು ಚಿರಾಯುವಾಗಿ ಮುನ್ನಡೆಸುವ ಹೊಣೆಗಾರಿಕೆಯನ್ನು ನಾವು ಸಮರ್ಥವಾಗಿ ನಿಭಾಯಿಸಿದ್ದೇವೆ ಎಂದರು.

ಇನ್ನು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ “ಡಾ, ಜಿ ಶಂಕರ್ ಸಮಾಜದ ಎಲ್ಲರಿಗಾಗಿ ಉತ್ತಮ ಮನೋಭಾವನೆಯೊಂದಿಗೆ ಈ ದೇವಾಲಯದ ನಿರ್ಮಾಣವನ್ನು ಎಲ್ಲರ ಸಹಕಾರದೊಂದಿಗೆ ನಿರ್ಮಿಸಿದ್ಧಾರೆ ಎಂದರು.

ಜನಪದ ವಿದ್ವಾಂಸ ಕೆ.ಎಲ್ ಕುಂಡಂತಾಯ ಮಾತನಾಡಿ “21ನೇ ಶತಮಾನದಲ್ಲಿ ಅದ್ಭುತ ಶಿಲ್ಪದೊಂದಿಗೆ ನಿರ್ಮಾಣವಾಗಿರುವ ಈ ಮಹಾಲಕ್ಷ್ಮೀ ಸನ್ನಿಧಾನವು ಅಧ್ಯಯನಕಾರರಿಗೊಂದು ಉತ್ತಮ ವೇದಿಕೆಯನ್ನು ನಿರ್ಮಿಸಿದೆ ಎಂದರು.

ಕಾರ್ಯಕ್ರಮದಲ್ಲಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

LATEST NEWS

ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

Published

on

ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್‌ ಬಂಧಿತ ಆರೋಪಿ. ಬ್ರಹ್ಮಾವರ ತಾಲೂಕು ಕೋಟ ಮೂರ್ಕೈನಲ್ಲಿ ಶನಿವಾರ ರಾತ್ರಿ ಕೋಟ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭ ಈತ ಬಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಈತನ ಕರಾಮತ್ತು ಕೇಳಿ ಪೊಲೀಸರೇ ಶಾಕ್ ಗೊಳಗಾಗಿದ್ದಾರೆ.


‘ಕೋಟಿ’ ಮೇಲೆ ಕಣ್ಣು:

ಇರ್ಫಾನ್ ಸಾಮಾನ್ಯ ಕಳ್ಳನಲ್ಲ. ಈತನ ವಿರುದ್ಧ 13 ರಾಜ್ಯಗಳಲ್ಲಿ ಹಲವಾರು ಕಳ್ಳತನ ಆರೋಪಗಳಿವೆ. ಇದರ ಜತೆಗೆ ಹಲವಾರು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ. ಈತ ಈಗಾಗಲೇ ಹಲವು ಬಾರಿ ಪೊಲೀಸರ ಅತಿಥಿಯಾಗಿದ್ದು, ಸಿನಿಮಾ ನಟರು, ರಾಜಕಾರಣಿಗಳು, ಗುತ್ತಿಗೆದಾರರು ಸೇರಿದಂತೆ ಅತ್ಯಂತ ಶ್ರೀಮಂತರ ಮನೆಗಳನ್ನೇ ಹೊಂಚುಹಾಕಿ ಕಳ್ಳತನ ಮಾಡುತ್ತಿದ್ದ.

ಒಮ್ಮೆ ಕಣ್ಣಿಟ್ಟರೆ ಸಾಕು! ಎಷ್ಟೇ ದಿನಗಳಾದರೂ ಕಾದು ತನ್ನ ಕೈಚಳಕ ತೋರುತ್ತಿದ್ದ. ಹೆಚ್ಚಿನ ಬಾರಿ ಓರ್ವನೇ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪ್ರತಿ ಬಾರಿಯೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನೇ ಲಪಟಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

‘ನನ್ನ ಬಗ್ಗೆ ಯೂಟ್ಯೂಬ್ ನೋಡಿ’ ಎಂದ ಖದೀಮ :

ಕೋಟ್ಯಂತರ ರೂಪಾಯಿ ಕಳವುಗೈದು ಬಂಧಿಸಲ್ಪಟ್ಟ ಇರ್ಫಾನ್ ವಿಚಾರಣೆಗಿಳಿದ ಪೊಲೀಸರಿಗೆ ಆತನ ಹೇಳಿಕೆ ಅಚ್ಚರಿ ಹುಟ್ಟಿಸಿತ್ತು. ‘ ನನ್ನ ಬಗ್ಗೆ ಮಾಹಿತಿ ಬೇಕಾದರೆ ಯೂಟ್ಯೂಬ್‌ನಲ್ಲಿ ಮಹಮ್ಮದ್ ಇರ್ಫಾನ್ ರೋಬಿನ್‌ಹುಡ್ ಎಂದು ಸರ್ಚ್ ಮಾಡಿ’ ಎಂದಿದ್ದನಂತೆ ಈ ಖದೀಮ. ಯೂಟ್ಯೂಬ್‌ನಲ್ಲಿ ಸರ್ಚ್ ಮಾಡಿದಾಗ ಈತನ ಬಗ್ಗೆ ಇರುವ ಹತ್ತಾರು ವೀಡಿಯೋಗಳು ಸಿಕ್ಕಿವೆ. ಅದರಲ್ಲಿ ಕಳ್ಳತನ ಹಾಗೂ ಕೋಟ್ಯಂತರ ರೂ. ಮೊತ್ತವನ್ನು ಜನರಿಗೆ ಹಂಚುವ ಕುರಿತು ವಿಚಾರಗಳಿವೆ. ಇವೆಲ್ಲವನ್ನು ನೋಡಿದ ಪೊಲೀಸರಿಗೆ ಶಾಕ್ ಆಗಿದ್ದು ಸುಳ್ಳಲ್ಲ.

Continue Reading

LATEST NEWS

Trending