Friday, August 12, 2022

ಉದಯಪುರದ ಕೊಲೆ ಪ್ರಕರಣ ವ್ಯವಸ್ಥಿತ ಸಂಚು ಮತ್ತು ಭಯೋತ್ಪಾದನೆ ಆರಂಭದ ಭಾಗ : ನಳಿನ್ ಕುಮಾರ್ ಕಟೀಲ್ ..!

ಮಂಗಳೂರು :  ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣ ಒಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ‌ನಡೆದಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಕಟೀಲ್ “ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವೀಡಿಯೋವನ್ನು ಆತನ ಸೋದರನಿಗೆ ಕಳಿಸಲಾಗಿತ್ತು. ಅದನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿ ಕಠಿಣ ಕ್ರಮ ಕೈಗೊಂಡಿತ್ತು.

ನೂಪುರ್ ಶರ್ಮಾ ಹೇಳಿಕೆ ನಂತರ ದೇಶದಲ್ಲಿ ನಡೆದಂತಹ ಘಟನೆಗಳು, ಗಲಭೆಗಳ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಸ್ಪಷ್ಟವಾಗಿದೆ.

ರಾಜಸ್ಥಾನದಲ್ಲಿರುವ ಸರ್ಕಾರದ ತುಷ್ಟೀಕರಣ ನೀತಿ ಈ ಕೃತ್ಯಕ್ಕೆ, ಘಟನೆ ನಡೆಯಲು ಕಾರಣ. ಘಟನೆಯ ಕುರಿತು ಕಾಂಗ್ರೆಸ್ ಯಾಕೆ ಮೌನ ವಹಿಸಿದೆ. ಚಿಕ್ಕ- ಚಿಕ್ಕ ವಿಷಯಕ್ಕೆ ರಸ್ತೆಗೆ ಬರುವ ಚಿಂತಕರು ಈಗ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಇವರ ತುಷ್ಟೀಕರಣ ರಾಜನೀತಿ, ಇಂತಹ ಮಾನಸಿಕಕತೆ ಬೆಳೆಯಲು ಕಾರಣ. ದೇಶದಲ್ಲಿ ಜನರ ನಡುವೆ ಭಯ ಹುಟ್ಟಿಸುವ ತಂತ್ರ ಇದಾಗಿದೆ. ಮಾನವೀಯ ಗುಣಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದು  ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಮಾನಸಿಕತೆಗಳಿಗೆ ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ತಕ್ಷಣ ಕಠಿಣ ಕ್ರಮ ಜರುಗಿಸಬೇಕು, ಕೇಂದ್ರ ಸರ್ಕಾರ ಎನ್.ಐ.ಎ ಕಳುಹಿಸಿದೆ.

ಏನು ಮಾಡಬೇಕೋ ಅದನ್ನು ಮಾಡಲಿದ್ದಾರೆ. ದೇಶದಲ್ಲಿ ನಿರಂತರ ಗಲಭೆ ಸೃಷ್ಟಿಸಲು, ಹತ್ಯೆ ಮಾಡಿ ಸಮಾಜ ಒಡೆಯುವ ಹುನ್ನಾರ ಇದರ ಹಿಂದಿದೆ.

ಜಿಹಾದಿ ಹೆಸರಿನಲ್ಲಿ ಇಂತಹ ಕೃತ್ಯಗಳನ್ನು ಮಾಡಲಾಗ್ತಿದೆ. ಕಾಶ್ಮೀರದಲ್ಲಿ ಹಿಂದೆ ನಡೆದ ಘಟನೆಗಳು ಹೊರಗಡೆ ಬರ್ತಿವೆ.

ಆದ್ರೆ ನರೇಂದ್ರ ಮೋದಿ ಸರ್ಕಾರ ಇದನ್ನ ಸಹಿಸಲ್ಲ, ತಡೆ ಹಾಕುತ್ತೆ. ಈ ರೀತಿಯ ಘಟನೆಗಳನ್ನು ಅಲ್ಲಲ್ಲೇ ನಿಯಂತ್ರಿಸುವ ಕೆಲಸ ಆಗಬೇಕು. ಕ್ರೂರಿ ಮಾನಸಿಕತೆಗಳಿಗೆ ಭಯದ ವಾತಾವರಣ ಸೃಷ್ಟಿಸಬೇಕು ಎಂದಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್‌ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್‌ ಕರೆನ್ಸಿ..!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ...