Thursday, October 21, 2021

ಉದಯ ಗಾಣಿಗ ಕೊಲೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.


ಕೊಲೆಗೆ ಸಂಚು ರೂಪಿಸಿದ ಆರೋಪದಲ್ಲಿ ಬಂಧಿತನಾಗಿರುವ ಬಾಲಚಂದ್ರ ಭಟ್ ಈ ಹಿಂದೆ ಪ್ರಕರಣದ ತನಿಖೆ ಸ೦ದರ್ಭದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಇದೀಗ ದೋಷಾರೋಪಣಾ ಪಟ್ಟಿ ಸಲ್ಲಿಕೆಯ ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.

ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
ಜೂ.5 ರಂದು ಯಡಮೊಗೆಯಲ್ಲಿ ಉದಯ ಗಾಣಿಗ ಅವರನ್ನು ಕಾರು ಹತ್ತಿಸಿ, ದೊಣ್ಣೆಯಿಂದ ಹೊಡೆದು ಕೊಲೆಗೈಯಲಾಗಿತ್ತು.

ಪ್ರಕರಣ ಸಂಬಂಧ ಪ್ರಾಣೇಶ್ ಯಡಿಯಾಳ್, ರಾಜೇಶ್ ಭಟ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್, ಮನೋಜ್ ಕುಮಾರ್ ಹಾಗೂ ಗ್ರಾ.ಪಂ .ಸದಸ್ಯ ಸದಾಶಿವ ನಾಯ್ಕ್ ರನ್ನು ಪೊಲೀಸರು ಬಂಧಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...