MANGALORE
ಮೂರು ದಶಕಗಳ ಪತ್ರಿಕಾ ವೃತ್ತಿಗೆ ಗುಡ್ ಬೈ ಹೇಳಿದ ಕ್ರಾಸ್ತಾಮ್
ಮಂಗಳೂರು: ಹಿರಿಯ ಪತ್ರಕರ್ತ ಹಾಗೂ ಉದಯವಾಣಿ ಪತ್ರಿಕೆಯ ಮಂಗಳೂರು ಬ್ಯರೋ ಉಪ ಮುಖ್ಯ ವರದಿಗಾರರಾದ ಹಿಲರಿ ಕ್ರಾಸ್ತಾ ಅವರು ನಿನ್ನೆ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.
ಮುಂಗಾರು ಪತ್ರಿಕೆಯಿಂದ ವೃತ್ತಿ ಬದುಕು ಆರಂಭಿಸಿದ್ದ ಅವರು ಸುಮಾರು ಎರಡೂವರೆ ದಶಕಗಳ ಕಾಲ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿ ಉಪಮುಖ್ಯ ವರದಿಗಾರರಾಗಿ ನಿವೃತ್ತಿ ಹೊಂದಿದ್ದಾರೆ.
ಅಪರಾಧ ವರದಿಗಾರಿಕೆಯಲ್ಲಿ ಪಳಗಿದ ಅವರು ಸೌಮ್ಯ ಸ್ವಭಾವ ಹೊಂದಿದ್ದರು. ಸರಳ, ಸಜ್ಜನ, ಅಜಾತಶತ್ರುವಾಗಿದ್ದ ಹಿಲರಿ ಪತ್ರಿಕಾ ವಲಯದಲ್ಲಿ ಕ್ರಾಸ್ತಾಮ್ ಎಂದೇ ಚಿರಪರಿಚಿತರು.
ಮೂರು ದಶಕಗಳ ಪತ್ರಿಕಾ ವೃತ್ತಿ ಬದುಕಿಗೆ ವಿದಾಯ ಹೇಳಿದ ಅವರ ಮುಂದಿನ ಬದುಕಿಗೆ ನಾವೆಲ್ಲ ಶುಭ ಹಾರೈಸೋಣ.
bangalore
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.
ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.
ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.
ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.
ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.
ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.
ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.
DAKSHINA KANNADA
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!
ಮಂಗಳೂರು: ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.
ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ನ ಬೆಡ್ ರೂಮ್ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
bangalore
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.