ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ.
ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ನಾನು ನಿಮ್ಮನ್ನು ಶಿವಸೇನೆ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕುತ್ತಿದ್ದೇನೆ’ ಎಂದು ಠಾಕ್ರೆ ಅವರು ಶಿಂಧೆಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.
39 ಶಾಸಕರ ಜೊತೆ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ ಶಿಂಧೆ, ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು. ಗುರುವಾರ ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನವಚನ ಸ್ವೀಕರಿಸಿದ್ದರು.
ಇದಕ್ಕೂ ಮುನ್ನ, ರಾಜ್ಯಪಾಲರು ಬಹುಮತ ಸಾಬೀತಿಗೆ ಮಹಾ ವಿಕಾಸ ಅಘಾಡಿ ನೇತೃತ್ವದ ಸರ್ಕಾರಕ್ಕೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಮುಖ್ಯಮಥ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.