HomeLATEST NEWSಉಡುಪಿ ಜಿಲ್ಲೆಯಲ್ಲಿ 241 ಕೊರೊನಾ ಪಾಸಿಟಿವ್ 2 ಸಾವು

ಉಡುಪಿ ಜಿಲ್ಲೆಯಲ್ಲಿ 241 ಕೊರೊನಾ ಪಾಸಿಟಿವ್ 2 ಸಾವು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 241 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7738 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5101 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2560 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1383 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1177 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಂದು ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 77 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 138, ಕುಂದಾಪುರ -70 , ಕಾರ್ಕಳ -30, ಜಿಲ್ಲೆಯ ಹೊರಗಿನ – 3 ಪ್ರಕರಣಗಳಿವೆ.

Latest articles

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...