ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಮೋಜಿನ ಆಟ ಆಡಿದ ಆರೋಪದ ಮೇಲೆ ಒಂದು ಜೀಪ್ ಮತ್ತು ಮೂರು ಕಾರುಗಳ ಚಾಲಕರ ವಿರುದ್ಧ ಕಾಪು ಪೊಲೀಸರು ಕಾನೂನು ಕ್ರಮ ಕೈಗೊಂಡು ಕೇಸು ದಾಖಲಿದ್ದಾರೆ.
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಮೋಜಿನ ಆಟ ಆಡಿದ ಆರೋಪದ ಮೇಲೆ ಒಂದು ಜೀಪ್ ಮತ್ತು ಮೂರು ಕಾರುಗಳ ಚಾಲಕರ ವಿರುದ್ಧ ಕಾಪು ಪೊಲೀಸರು ಕಾನೂನು ಕ್ರಮ ಕೈಗೊಂಡು ಕೇಸು ದಾಖಲಿದ್ದಾರೆ.
ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಎಲ್ಲಾ ನಾಲ್ಕು ವಾಹನಗಳ ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 66 ರಲ್ಲಿ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದವರೆಗೆ ಉಡುಪಿ-ಮಂಗಳೂರು ರಸ್ತೆಯಲ್ಲಿ ಒಂದು ಜೀಪು ಮತ್ತು ಮೂರು ಕಾರುಗಳನ್ನು ಅವುಗಳ ಚಾಲಕರು ಅತೀ ವೇಗ ಹಾಗೂ ತೀವ್ರ ಅಜಾಗರೂಕತೆಯಿಂದ ಓಡಿಸುತ್ತಿದ್ದರು.
ಅಲ್ಲದೆ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋದ ವಿಡಿಯೋ ವೈರಲ್ ಆಗಿದೆ.
ವಿಡಿಯೋವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಕಾಪು ಪೊಲೀಸರ ಗಮನಕ್ಕೆ ತಂದಿದ್ದರು.
ಪೊಲೀಸರು ರಿಜಿಸ್ಟ್ರೇಶನ್ ನಂಬರ್ ಆಧಾರದಲ್ಲಿ ಈ ವಾಹನಗಳನ್ನು ಪತ್ತೆ ಹಚ್ಚಿ ಅವುಗಳ ಚಾಲಕರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.