Connect with us

LATEST NEWS

ಉಡುಪಿ: ಮನೆಯಿಂದ ಹೊರ ಹೋದ ಯುವಕ ನಾಪತ್ತೆ..!

Published

on

ಮನೆಯಿಂದ ತೆರಳಿದ ಯುವಕ ವಾಪಸು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕಿನ ಕುತ್ಪಾಡಿಯಲ್ಲಿ ನಡೆದಿದೆ.

ಉಡುಪಿ: ಮನೆಯಿಂದ ತೆರಳಿದ ಯುವಕ ವಾಪಸು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕಿನ ಕುತ್ಪಾಡಿಯಲ್ಲಿ ನಡೆದಿದೆ.

ಪ್ರಕಾಶ್ ಸದಾಶಿವ ಶೆಟ್ಟಿ (31) ನಾಪತ್ತೆಯಾದ ಯುವಕ.

ನಾಪತ್ತೆಯಾದ ಯುವಕನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನಾಪತ್ತೆಯಾದ ಸದಾಶಿವ ಶೆಟ್ಟಿ ಕನ್ನಡ, ತುಳು ಮತ್ತು ಹಿಂದಿ ಭಾಷೆ ಬಲ್ಲವರಾಗಿದ್ದು, 5 ಅಡಿ,7 ಇಂಚು ಎತ್ತರ, ಸಾಧರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾರೆ.

ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

LATEST NEWS

ಇಲ್ಲಿ ಕಂಠಪೂರ್ತಿ ವೈನ್‌‌ ಕುಡಿದ್ರೂ ಫ್ರೀ! ಆದ್ರೆ ಒಂದು ಕಂಡೀಷನ್‌!

Published

on

ಫ್ರೀ ಎಂದರೆ ಯಾರು ತಾನೇ ಬಿಡ್ತಾರೆ ಹೇಳಿ. ಫ್ರೀ ಅನ್ನುವ ಪದ ಕೇಳಿದ ಕೂಡಲೇ ಜನ ನಾ ಮುಂದು ತಾ ಮುಂದು ಅಂತ ನುಗ್ಗುತ್ತಾ ಇರುತ್ತಾರೆ. ಇನ್ನು ವೈನ್ ಫ್ರೀ ಅಂದರೆ ಬಾಯಿ ಬಿಡೋದು ಗ್ಯಾರಂಟಿನೇ. ಆದರೆ ವೈನ್ ಫ್ರೀ ಆಫರ್ ನಮ್ಮ ಭಾರತದಲ್ಲಿ ಅಲ್ವೇ ಅಲ್ಲ. ಈ ರೀತಿಯ ಆಫರ್ ಇರೋದು ಇಟಲಿ ದೇಶದಲ್ಲಿ. ಇಟಲಿಯಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಎಷ್ಟೇ ವೈನ್ ಕುಡಿದರೂ ಹಣ ಕೇಳಲ್ಲ. ಆದರೆ ರೆಸ್ಟೋರೆಂಟ್ ಮಾಲೀಕರ ಒಂದು ಕಂಡೀಷನ್ ಮಾತ್ರ ಫಾಲೋ ಮಾಡಲೇಬೇಕು. ವೈನ್ ಫ್ರೀ ಆಫರ್, ಮಾಲೀಕರ ಕಂಡೀಷನ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಈ ಸುದ್ದಿ ನೋಡಿದವರೆಲ್ಲಾ ವ್ಹಾವ್ ಎನ್ನುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ರೆಸ್ಟೋರೆಂಟ್‌ನಲ್ಲಿ ಎಷ್ಟಾದರೂ ವೈನ್ ಕುಡಿಯಬಹುದು!

ಇಟಲಿಯಲ್ಲಿನ ವೆರೋನಾದಲ್ಲಿರುವ ಅಲ್ ಕಾಂಡೋಮಿನಿಯೊ ಹೆಸರಿನ ಇಟಾಲಿಯನ್ ರೆಸ್ಟೋರೆಂಟ್ ಗೆ ಭೇಟಿ ಕೊಡುವ ಗ್ರಾಹಕರಿಗೆ ಉಚಿತವಾಗಿ ವೈನ್ ದೊರೆಯುತ್ತದೆ. ಆದರೆ ಊಟಕ್ಕೆ ಕುಳಿತುಕೊಳ್ಳುವಾಗ ಗ್ರಾಹಕರ ಬಳಿ ಮೊಬೈಲ್ ಫೋನ್ ಗಳು ಇರಬಾರದು. ರೆಸ್ಟೋರೆಂಟ್ ಗೆ ಪ್ರವೇಶಿಸಿದ ಕೂಡಲೇ ಮೊಬೈಲ್ ಫೋನ್ ಅನ್ನು ಸಿಬ್ಬಂದಿ ಬಳಿ ಒಪ್ಪಿಸಿಬಿಡಬೇಕು.

ಮೊಬೈಲ್‌ ಸೈಡಿಗಿಟ್ಟು ವೈನ್‌ ಕುಡಿಯಿರಿ!

ಇದೇ ಉದ್ದೇಶಕ್ಕಾಗಿ ಒಂದು ಬಾಟಲ್ ವೈನ್ ಅನ್ನು ಫ್ರೀ ಆಗಿ ಕೊಟ್ಟಿರಬಹುದು ಎಂದು ಅನ್ನಿಸುತ್ತದೆ. ಆದರೆ ಕಾರಣವೇನೆಂದರೆ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವೇ ಸಮಸ್ಯೆ ಆಗೋಗಿದೆ. ಪ್ರತಿ 5 ಸೆಕೆಂಡ್‌ಗೆ ಜನರು ತಮ್ಮ ಫೋನ್ ನೋಡುತ್ತಾ ಇರುತ್ತಾರೆ. ಆದರೆ ಆಗಾಗ ಫೋನ್ ನೋಡುವ ಅವಶ್ಯಕತೆ ಜನರಿಗೆ ಇಲ್ಲ ಕಾಣಿಸುತ್ತದೆ. ಈ ರೆಸ್ಟೊರೆಂಟ್‌ನಲ್ಲಿ ಜನರು ಸ್ವಲ್ಪ ಕಾಲ ಮೊಬೈಲ್ ಪಕ್ಕಕ್ಕೆ ಇಟ್ಟು ವೈನ್ ಕುಡಿಯಬೇಕು. ವೈನ್ ಕುಡಿದು ಮುಗಿಸುವವರೆಗೆ ಜನರು ಮೋನ್ ಮುಟ್ಟುವಂತಿಲ್ಲ.

ಇನ್ ಸ್ಟಾಗ್ರಾಂನಲ್ಲಿ ರೆಸ್ಟೋರೆಂಟ್ ನ ಆಫರ್, ಕಂಡೀಷನ್ ಬಗ್ಗೆ ಪೋಸ್ಟ್ ವೈರಲ್ ಆಗುತ್ತಿದೆ. ಪೋಸ್ಟ್ ಗೆ ಸುಮಾರು 68000 ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕೆಲವರು ತಮಾಷೆ ಸಹ ಮಾಡಿದ್ದಾರೆ.

ರೆಸ್ಟೋರೆಂಟ್ ಮಾಲೀಕರ ಈ ಕಾರ್ಯಕ್ಕೆ ಮೆಚ್ಚುಗೆ ತಿಳಿಸಿದ ನೆಟ್ಟಿಗರೊಬ್ಬರು, ಗ್ರಾಹಕರು ತಮ್ಮ ಸಮಯವನ್ನು ಆನಂದಿಸಲು ಈ ಮಾಲೀಕರು ತಮ್ಮ ಹಣವನ್ನು ವೆಚ್ಚ ಮಾಡುತ್ತಿದ್ದಾರೆ. ನಿಜಕ್ಕೂ ಮಾಲೀಕರು ಒಳ್ಳೆಯ ಮನುಷ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

Continue Reading

LATEST NEWS

ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ

Published

on

ಮೈಸೂರು : ಶುಕ್ರವಾರ ಮತದಾನ ನಡೆಯಲಿದೆ. ಶನಿವಾರ ಹಾಗೂ ಭಾನುವಾರ ರಜೆ ಇರುತ್ತೆ. ಹಾಗಾಗಿ ಮೈಸೂರಿಗೆ ಪ್ರವಾಸ ಬೆಳೆಸೋಣ ಅಂತ ನೀವಂದುಕೊಂಡಿದ್ರೆ ಅದು ಸಾಧ್ಯವಿಲ್ಲ. ಯಾಕೆಂದ್ರೆ, ಮೈಸೂರಿನ ಪ್ರವಾಸಿ ತಾಣಗಳು ಏಪ್ರಿಲ್ 26 ರಂದು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಹೀಗಾಗಿ ಈ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 26 ರಂದು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ರೆಸಾರ್ಟ್ ಬುಕ್ಕಿಂಗ್ ನಿರ್ಬಂಧ

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲೂ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ. ಹಾಗಾಗಿ ಏಪ್ರಿಲ್ 25 ಹಾಗೂ 26 ರಂದು ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರ ಬುಕ್ಕಿಂಗ್ ಸ್ವೀಕರಿಸಬಾರದು ಎಂದು ಡಿಸಿ ಮೀನಾ ನಾಗರಾಜ್ ರೆಸಾರ್ಟ್ ಮಾಲಕರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ನಂದಿ ಗಿರಿಧಾಮಕ್ಕೂ ನಿರ್ಬಂಧ :

ನಂದಿ ಗಿರಿಧಾಮಕ್ಕೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇತ್ತೀಚೆಗೆ ಆದೇಶ ಹೊರಡಿಸಿದೆ. ಏಪ್ರಿಲ್ 25 ಹಾಗೂ 26 ರಂದು ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Continue Reading

DAKSHINA KANNADA

ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Published

on

ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.


ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Continue Reading

LATEST NEWS

Trending