Home ಉಡುಪಿ ಉಡುಪಿ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತ್ಯು

ಉಡುಪಿ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತ್ಯು

ಉಡುಪಿ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತ್ಯು

ಉಡುಪಿ: ಉಡುಪಿ ನಗರದಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಮಹಿಳೆ ಸ್ಥಳದಲ್ಲೆ ಮೃತ ಪಟ್ಟ ಘಟನೆ ದಾರುಣ ಘಟನೆ ವರಿಯಾಗಿದೆ.

ಕಿನ್ನಿಮೂಲ್ಕಿ ಬಳಿ ನಿನ್ನೆ ರಾತ್ರಿ ನಡೆದಿದ್ದು ಮೃತ ಮಹಿಳೆಯನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ನಂದಗೋಕುಲ ಸುಧಾಕರ್ ಪೂಜಾರಿ ಪತ್ನಿ,ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ 35 ವರ್ಷದ ಮಮತ ಪೂಜಾರಿ ಎಂದು ಗುರುತ್ತಿಸಲಾಗಿದೆ. ಗರ್ಭವತಿಯಾಗಿರುವ ಮಮತಾ ಅವರು ಕಿನ್ನಿಮೂಲ್ಕಿ ಪೆಟ್ರೊಲ್ ಪಂಪ್‌ ನಲ್ಲಿ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕ ಸ್ಕೂಟಿಯನ್ನು ಗಮನಿಸದೆ ಇದ್ದುದರಿಂದ ಸವಾರೆ ಬಸ್ಸಿನ ಎಡ ಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಚಾಲಕ ನಿರ್ಲಕ್ಷ್ಯದಿಂದ ಅಮಾಯಕ ಮಹಿಳೆಯೋರ್ವಳು ಜೀವ ಕಳಕೊಳ್ಳಬೇಕಾಗಿದ್ದು ಬಸ್‌ ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ ಚಲಾಯಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬಸ್ ಚಾಲಕರು ಮೊಬೈಲ್ ನಲ್ಲಿ ಮಾತನಾಡಿ ಬಸ್ ಚಾಲನೆ ಮಾಡುವುದು ಕಂಡು ಬರುತ್ತಿದ್ದು ಇದರಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆ ಇಂತಹ ಚಾಲಕರ ಮೇಲೆ ಕೊಲೆ ಪ್ರಕರಣ ದಾಖಲು ಮಾಡಬೆಕೆಂದು ಆಗ್ರಹಿಸಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...