Connect with us

    LATEST NEWS

    ಉಡುಪಿ: ವಾಯು ಭಾರ ಕುಸಿತ, ಗಾಳಿ, ಕಡಲ ಅಲೆಗಳ ಅಬ್ಬರ

    Published

    on

    ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯು ಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ, ಗಾಳಿಯ ತೀವ್ರತೆ ಕಳೆದೆರಡು ದಿನಗಳಿಂದ ಜಾಸ್ತಿಯಾಗಿದ್ದು, ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು, ಗುಜ್ಜಾಡಿ ಗ್ರಾಮದ ಸನ್ಯಾಸಿಬಲೆ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, 7-8 ಮನೆಗಳು ಅಪಾಯದಲ್ಲಿವೆ. ಕಂಚುಗೋಡಿನಲ್ಲಿ ಈ ವರ್ಷದ ಮುಂಗಾರು ಋತುವಿನಲ್ಲಿ ಇದುವರೆಗೆ ಸುಮಾರು 500 ಮೀ. ನಷ್ಟು ಕಡಲ್ಕೊರೆತ ಸಂಭವಿಸಿದೆ.


    ಬುಧವಾರ (ಅ.16) ರಾತ್ರಿ ಇಲ್ಲಿನ 3 ಮನೆಗಳ ಒಳಗೆ ನೀರು ನುಗ್ಗಿದೆ. ಗುರುವಾರವೂ ಕಡಲ್ಕೊರೆತ ತೀವ್ರ ಗೊಂಡಿತ್ತು. ಸುಮಅರು 20-30 ಮೀ. ದೂರದಲ್ಲಿರುವ ನಾಗರಾಜ ಖಾರ್ವಿ, ಬಿಕ್ಕ ಖಾರ್ವಿ, ಚಂದು ಖಾರ್ವಿ, ಸಂಜೀವ ಖಾರ್ವಿ, ನಾಗೇಶ್‌ ಖಾರ್ವಿ ಹಾಗೂ ಮೋಹನ್‌ ಖಾರ್ವಿ ಅವರ ಮನೆಗಳಿದ್ದು, ಅಲ್ಲಿನ ನಿವಾಸಿಗಳು ಆತಂಕದಲ್ಲಿದ್ದಾರೆ.

    ದಡದಲ್ಲಿದ್ದ ದೋಣಗಳಿಗೂ ಅಲೆಗಳು ಅಪ್ಪಳಿಸುತ್ತಿದ್ದು, ಕೆಲವರ ಬಲೆಗಳು ಮರಳಿನಡಿಗೆ ಬಿದ್ದಿವೆ. ದೋಣಿಗಳನ್ನು ಸುರಕ್ಷಿತವಾಗಿ ಇಡುವುದೇ ಸವಾಲಾಗಿ ಪರಿಣಮಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮ ಅರಬ್ಬಿ ಸಮುದ್ರದಲ್ಲೂ ಸಣ್ಣ ಪ್ರಮಾಣದ ತೂಫಾನ್‌ ಆರಂಭವಾಗಿದೆ ಎಂಬ ಮಾಹಿತಿ ಇದೆ.

    ಕೇರಳದಿಂದ ಆರಂಭವಾಗಿ ಕರ್ನಾಟಕದ ಕರಾವಳಿ, ಗೋವಾ, ರತ್ನಾಗಿರಿಯವರೆಗೂ ಇದರ ಪರಿಣಾಮವಿದೆ. ಇನ್ನೆರಡು ದಿನ ಇದು ಮುಂದು ವರಿಯುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಆಸ್ಪತ್ರೆಯೊಳಗೆ ಅಗ್ನಿ ಅವಘಡ; ಓರ್ವ ರೋಗಿ ಸಾ*ವು

    Published

    on

    ಮಂಗಳೂರು/ಕೊಲ್ಕತ್ತಾ: ಕೋಲ್ಕತ್ತಾದಲ್ಲಿರುವ ಸೀಲ್ದಾಹ್ ಇಎಸ್‌ಐ ಆಸ್ಪತ್ರೆಯಲ್ಲಿ ಇಂದು (ಅ,18) ಬೆಳಗ್ಗೆ ಬೃಹತ್ ಅ*ಗ್ನಿ ಅವಘಡ ಸಂಭವಿಸಿದೆ.


    ಘಟನೆಯಲ್ಲಿ ಓರ್ವ ರೋಗಿ ಸಾ*ವನ್ನಪ್ಪಿರುವುದಾಗಿ ವರದಿಯಾಗಿದೆ. ಮಾಹಿತಿ ತಿಳಿದ ನಂತರ ಅ*ಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದರು.

    ತುರ್ತು ಮತ್ತು ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ಕೂಡ ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬೆಳಗಿನ ಜಾವ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅನೇಕ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದರು.

    ಸುಮಾರು 80 ಮಂದಿ ಇದ್ದರು. ಆದರೆ, ICU ಗೆ ದಾಖಲಾಗಿದ್ದ ಒಬ್ಬ ರೋಗಿ ಹೊಗೆ ಸೇವಿಸಿ ಉಸಿರಾಟದ ಸಮಸ್ಯೆಯಿಂದ ಬಳಲಿ ಸಾ*ವನ್ನಪ್ಪಿದ್ದಾನೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

    54 ರೋಗಿಗಳು ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ಧೈರ್ಯದಿಂದ ಮತ್ತು ತ್ವರಿತವಾಗಿ ಕೆಲಸ ಮಾಡಿದ್ದರಿಂದ ದೊಡ್ಡ ಅ*ನಾಹುತ ತಪ್ಪಿದೆ ಎಂದು ಸುಜಿತ್ ಬೋಸ್ ಹೇಳಿದರು. ಘಟನೆಗೆ ಕಾರಣ ತನಿಖೆ ನಡೆಸಲಾಗುತ್ತಿದೆ.

    Continue Reading

    LATEST NEWS

    ಡಿ.ಕೆ. ಸುರೇಶ್ ಗೆ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ಗಾಗಿ ಕೊಲ್ಲೂರಿನಲ್ಲಿ ಪೂಜೆ

    Published

    on

    ಉಡುಪಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಕಾಂಗ್ರೆಸ್‌ ಪಕ್ಷದ ಟಿಕೆಟ್ ಗಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಹೋಮ ಸಹಿತ ಪ್ರಾರ್ಥನೆ ನಡೆದಿದೆ.

    ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಎಂ.ಸಿ. ಅಶ್ವಥ್ ನೇತೃತ್ವದಲ್ಲಿ ವಿಶೇಷ ಪೂಜೆ ಮತ್ತು ಹೋಮ ನಡೆದಿದ್ದು, ಡಿ.ಕೆ. ಸುರೇಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ಮೂಕಾಂಬಿಕಾ ದೇವಸ್ಥಾನದಲ್ಲಿ ಸರ್ವಾಲಂಕಾರ ಸೇವೆ ಮತ್ತು ಪೂಜೆ ಸಲ್ಲಿಸಲಾಗಿದ್ದು, ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ಸಿಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ. ಕುಟುಂಬ ಸಹಿತ ಹೋಮ ಕಾರ್ಯದಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ಅಶ್ವಥ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಕ್ತಿ ಸಿಗಲು ಕೂಡಾ ಪ್ರಾರ್ಥನೆ ಸಲ್ಲಿಸಿದ್ದಾರೆ.

    ನವೆಂಬರ್ 13 ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

    Continue Reading

    FILM

    ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

    Published

    on

    ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.

    ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹ 5 ಕೋಟಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗಿರುತ್ತದೆ ಎಂದು ಕಳುಹಿಸಿದವರು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

    ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ (66) ಅವರನ್ನು ಅಕ್ಟೋಬರ್ 12 ರಂದು ಮುಂಬೈನ ಉನ್ನತ ಮಟ್ಟದ ಬಾಂದ್ರಾದಲ್ಲಿರುವ ಅವರ ಶಾಸಕ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು.

    Continue Reading

    LATEST NEWS

    Trending