Connect with us

LATEST NEWS

ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ- 75 ಸಾವಿರ ಮೌಲ್ಯದ ಗಾಂಜಾ ವಶ

Published

on

ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ 75 ಸಾವಿರ ರೂಪಾಯಿ ಮೌಲ್ಯದ 1.5 ಕೆ.ಜಿ. ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ 75 ಸಾವಿರ ರೂಪಾಯಿ ಮೌಲ್ಯದ 1.5 ಕೆ.ಜಿ. ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿ ಶಶಾಂಕ್‌  (25), ಪೆಡ್ಲರ್‌ ಗಳಾದ ಕಾರ್ಕಳದ ಆದಿಲ್‌ (36)  ಮತ್ತು  ನೌಶಾದ್‌ (27) ಬಂಧಿತ ಆರೋಪಿಗಳು.

ಮಣಿಪಾಲ ಪೊಲೀಸರು ಜೂ.14ರಂದು  ಹೆರ್ಗಾ ಗ್ರಾಮದ ಹೈ-ಪಾಯಿಂಟ್‌ ಹೈಟ್ಸ್ ಅಪಾರ್ಟ್‌ ಮೆಂಟ್‌ಗೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ಶಶಾಂಕ್‌ ಮತ್ತು ಆತನ ಜತೆಯಿದ್ದ ಕಾರ್ಕಳದ ಫೆಡ್ಲರ್‌ ಆದಿಲ್‌ ನನ್ನು ವಶಕ್ಕೆ ಪಡೆದು ಅವರಿಂದ 300 ಗ್ರಾಂ ಗಾಂಜಾ ಜಪ್ತಿ ಮಾಡಿದ್ದರು.

ಬಳಿಕ ಆದಿಲ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ – ಕಾರ್ಕಳ ರಸ್ತೆಯಲ್ಲಿ ನೌಶದ್‌ನನ್ನು ವಶಕ್ಕೆ ಪಡೆದು ಆತನಿಂದ 1 ಕೆಜಿ 100 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡರು.

ಆರೋಪಿ ಆದಿಲ್‌ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದಾನೆ.

ವಿಚಾರಣೆ ನಡೆಸಿದಾಗ ಆದಿಲ್‌ ಮತ್ತು ನೌಶದ್‌ ಗಾಂಜಾ ಪೆಡ್ಲರ್‌ಗಳಾಗಿದ್ದು, ಅವರಿಗೆ ಸ್ನೇಹಿತ ಕಾರ್ಕಳದ ಮೂಲದ ಪ್ರಸ್ತುತ ಓಮನ್‌ ದೇಶದ ಮಸ್ಕತ್‌ನಲ್ಲಿ ವಾಸವಿರುವ ಇಮ್ರಾನ್‌ ಖಾನ್‌ ಯಾನೆ ಶಕೀಲ್‌ ಎಂಬಾತ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪ್ರಕರಣದ ಮುಖ್ಯ ಆರೋಪಿ ಇಮ್ರಾನ್‌ ಖಾನ್‌ ನ ಪತ್ತೆಗೆ ಉಡುಪಿ ಎಸ್ಪಿ ಅವರು ಮಣಿಪಾಲ ಪೊಲೀಸ್‌ ಠಾಣೆಯ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್‌ ಔಟ್‌ ನೋಟೀಸ್‌ ಹೊರಡಿಸಲು ಸೂಚನೆ ನೀಡಿದ್ದಾರೆ.

ಒಂದು ವಾರದ ಹಿಂದೆ ಆದಿ ಉಡುಪಿಯ 25 ವರ್ಷ ಪ್ರಾಯದ ಸುಮನ್‌ ಶೆಟ್ಟಿಗಾರ್‌ ನನ್ನು ಬಂಧಿಸಿ 300 ಗ್ರಾಂ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿತ್ತು.

ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆದಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಅನೇಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

LATEST NEWS

Trending