Wednesday, October 5, 2022

ಉಡುಪಿ: ಸೇತುವೆಯ ಮೇಲೆ ಬೈಕ್ ಪತ್ತೆ-ವ್ಯಕ್ತಿ ನದಿಗೆ ಹಾರಿದ ಶಂಕೆ

ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು, ಬೈಕ್ ನದಿಯ ಮೇಲೆ ಇಟ್ಟು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇವರು ಪತ್ತೆಯಾದಲ್ಲಿ ಅಥವಾ ಮೃತದೇಹ ಸಿಕ್ಕಿದ್ದಲ್ಲಿ ಕೋಟ ಪೊಲೀಸ್ ಠಾಣಾ ನಂಬರ್ 9663434415 ಸಂಪರ್ಕಿಸುವಂತೆ ತಿಳಿಸಲಾಗಿದೆ.


ಅಶೋಕ್ ಸುವರ್ಣ ನಾಪತ್ತೆಯಾದ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

LEAVE A REPLY

Please enter your comment!
Please enter your name here

Hot Topics

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...