DAKSHINA KANNADA
ಉಡುಪಿ : ಬಿಲ್ ವಿಚಾರ-ಹೆಜಮಾಡಿ ಹೈವೇ ಕ್ಯಾಂಟೀನ್ ಕಾರ್ಮಿಕನಿಗೆ ಹಲ್ಲೆ,ದೂರು ದಾಖಲು..!
ಬಿಲ್ ವಿಚಾರದಲ್ಲಿ ಕ್ಯಾಂಟೀನ್ ವೊಂದರ ಕಾರ್ಮಿಕರೊರ್ವರಿಗೆ ಕಾರಿನಲ್ಲಿ ಬಂದ ಐವರು ಯುವಕರಿದ್ದ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಪರಾರಿಯಾಗಿರುವ ಘಟನೆ ಉಡುಪಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್ ನಲ್ಲಿ ನಡೆದಿದೆ.
ಉಡುಪಿ : ಬಿಲ್ ವಿಚಾರದಲ್ಲಿ ಕ್ಯಾಂಟೀನ್ ವೊಂದರ ಕಾರ್ಮಿಕರೊರ್ವರಿಗೆ ಕಾರಿನಲ್ಲಿ ಬಂದ ಐವರು ಯುವಕರಿದ್ದ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಪರಾರಿಯಾಗಿರುವ ಘಟನೆ ಉಡುಪಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್ ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಕ್ಯಾಂಟೀನ್ ಗೆ ಆಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಡುಪಿ ಜಿಲ್ಲೆಯ ಎರ್ಮಾಳು ನಿವಾಸಿ ಸಂತೋಷ್ ಕುಮಾರ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ಕಳೆದ ಮೂರು ವರ್ಷಗಳಿಂದ ಅವರು ಇದೇ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ತಡರಾತ್ರಿ ಐವರು ಯುವಕರಿದ್ದ ತಂಡವೊಂದು ಬಿಯಾರ್ ಬಾಟಲಿಯನ್ನು ಕೈಯಲ್ಲಿ ಹಿಡಿದುಕೊಂಡು ಕ್ಯಾಂಟೀನ್ ಒಳಗಡೆ ಬಂದು ಉಪಹಾರ ಸೇವನೆ ಮಾಡಿದೆ.
ಬಳಿಕ ಬಿಲ್ ವಿಚಾರದಲ್ಲಿ ತಾಗದೆ ತೆಗೆದು ತಲವಾರು ಜಲಪಿಸುತ್ತಾ ಕ್ಯಾಂಟೀನ್ ನ ಒಳಕ್ಕೆ ಹೊಕ್ಕಿ ಕೆಲಸ ಮಾಡುತ್ತಿರುವ ಸಂತೋಷ್ ಅವರನ್ನು ಕೈಯಿಂದ ಥಳಿಸಿದೆ.
ಮಾತ್ರವಲ್ಲ ನೆಲಕ್ಕೆ ಬಿದ್ದ ಅವರಿಗೆ ಕಾಲಿನಿಂದ ಒದ್ದು ತಲವಾರು ಜಲಪಿಸುತ್ತಾ ಮಂಗಳೂರಿನತ್ತ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದ ಸಂತೋಷ್ ಕುಮಾರ್ ಅವರು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದು,ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬಿಲ್ ವಿಚಾರ-ಹೆಜಮಾಡಿ ಹೈವೇ ಕ್ಯಾಂಟೀನ್ ಕಾರ್ಮಿಕನಿಗೆ ಹಲ್ಲೆ#udupi #udupipolice #nammakudla #assult @DgpKarnataka @UdupiPolice @karnatakacm pic.twitter.com/b4uFQH9qfi
— Namma Kudla (@KudlaNamma) July 7, 2023
DAKSHINA KANNADA
Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.
ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.
ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.
ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
DAKSHINA KANNADA
Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.
ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.
ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.
ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.
ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.
ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
DAKSHINA KANNADA
ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ
ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.
ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
- DAKSHINA KANNADA7 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM6 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- FILM6 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!