Connect with us

    ಧರ್ಮದ ಬೋಧನೆ ಮಾಡುತ್ತಿದ್ದ ಬಿಷಪ್ ಬಾಯಲ್ಲಿ ಕೊರೊನಾ ಜಾಗೃತಿ ಪಾಠ

    Published

    on

    ಉಡುಪಿ ಚರ್ಚ್ ಗಳಾದ್ಯಂತ ಕೊರೊನಾ ವೈರಸ್ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ

    ಉಡುಪಿ: ಜಗತ್ತಿಗೆ ಕಂಟಕವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಬಗ್ಗೆ ಎಲ್ಲೆಲ್ಲೂ ಚರ್ಚೆ, ಅಭಿಯಾನ ನಡೆಯುತ್ತಿದೆ.

    ಇದೀಗ ಈ ಮಹಾಮಾರಿ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿರುವುದರಿಂದ ರಾಜ್ಯ ಸರಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಈಗಾಗಲೇ ಹೈ ಅಲರ್ಟ್ ಘೋಷಿಸಿದೆ.

    ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಕೇಂದ್ರಗಳಲ್ಲಿ ಕೂಡ ಕೊರೊನಾ ವೈರಸ್ ಬಗ್ಗೆ ಜಾಗೃತಿ, ಅಭಿಯಾನ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.

    ಅಂದಹಾಗೆ ಕರ್ನಾಟಕದಲ್ಲಿ ಕೊರೊನಾ ವೈರಸ್ ಕುರಿತಂತೆ ಹೆಚ್ಚು ಸುದ್ದಿಯಾಗುತ್ತಿರುವುದು ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ.

    ಈ ಹಿನ್ನಲೆಯಲ್ಲಿ ಉಡುಪಿ ಕ್ರೈಸ್ತ ಧರ್ಮ ಪ್ರಾಂತ್ಯದಲ್ಲಿ ಬರುವ ಎಲ್ಲಾ ಚರ್ಚ್ ಗಳಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕೆಂದು ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ.

    ಪ್ರತೀ ಶನಿವಾರ ಮತ್ತು ಭಾನುವಾರದ ವಿಶೇಷ ಪ್ರಾರ್ಥನೆಯ ವೇಳೆ ಧರ್ಮಗುರುಗಳು ಚರ್ಚ್ ನಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದ ಜೊತೆಗೆ ಜನ ಹೇಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದರ ಬಗ್ಗೆ ಬಗ್ಗೆ ಕಿವಿಮಾತು ಹೇಳಿದ್ದಾರೆ.

    ಚರ್ಚ್ ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮನೆಗಳಲ್ಲಿ ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಪಾಠ ಮಾಡಿದ್ದಾರೆ.

    ಗಲ್ಫ್ ರಾಷ್ಟ್ರಗಳಲ್ಲಿ ಇರುವ ಕ್ರೈಸ್ತ ಧರ್ಮೀಯರು ಕೆಲ ಕಾಲ ಅಲ್ಲೇ ಇದ್ದು, ವೈರಸ್ ಭೀತಿ ನಿವಾರಣೆಯಾದ ಮೇಲೆ ಭಾರತಕ್ಕೆ ವಾಪಸ್ ಬರುವಂತೆ ಕರೆ ಕೂಡ ನೀಡಿದ್ದಾರೆ.

    ಮಾತ್ರವಲ್ಲದೇ ಕೊರೊನಾ ವಿರುದ್ಧ ಮನುಷ್ಯರಿಗೆ ಹೋರಾಡಲು ವಿಶೇಷ ಶಕ್ತಿ ಬರುವಂತೆ ಬೈಬಲ್‍ನ ಕೆಲ ಅಧ್ಯಾಯಗಳ ಪಾಠವನ್ನು ಭಾನುವಾರದ ಪಾರ್ಥನೆಯ ಸಂದರ್ಭದಲ್ಲಿ ಮಾಡುತ್ತಿದ್ದಾರೆ.

    ಅಷ್ಟೇ ಅಲ್ಲದೇ ಸ್ವತಃ ಉಡುಪಿಯ ಬಿಷಪ್, ಕೆಲ ಚರ್ಚ್ ಗಳಿಗೆ ಭೇಟಿ ಕೊಟ್ಟು ಕೊರೊನಾ ವಿರುದ್ಧ ಜನಜಾಗೃತಿ ಮೂಡಿಸಿದ್ದಾರೆ.

    ಮುಂದಿನ ಶುಕ್ರವಾರ ಒಂದು ದಿನ ನಿರಂತರವಾಗಿ ಕೊರೊನಾ ವೈರಸ್‍ನ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಭಕ್ತರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಚರ್ಚ್ ಗಳಲ್ಲಿ ಕ್ರೈಸ್ತ ಸಂಸ್ಥೆಗಳಲ್ಲಿ ಕಾರ್ಯಾಗಾರವನ್ನು ನಡೆಸಲು ಧರ್ಮಪ್ರಾಂತ್ಯ ತೀರ್ಮಾನಿಸಿದೆ ಎನ್ನಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಕನ್ನಡಿಗ ಅಧಿಕಾರಿಯೇ ಮಹಾಕುಂಭ ಮೇಳದ ಸಾರಥಿ !

    Published

    on

    ಮಂಗಳೂರು/ಪ್ರಯಾಗ್ ರಾಜ್ : ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಮಹಾ ಕುಂಭಮೇಳ ಆರಂಭಗೊಂಡಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ.

    ಈ ಬಾರಿಯ ಪ್ರಯಾಗರಾಜ್ ಮಹಾಕುಂಭ ಮೇಳ ಕನ್ನಡಿಗನ ಸಾರಥ್ಯದಲ್ಲಿ ನಡೆಯುತ್ತಿದೆ. ಮಹಾಕುಂಭ ಮೇಳದ ಮೇಲಾಧಿಕಾರಿಯಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕನ್ನಡಿಗ ಐಎಎಸ್ ಅಧಿಕಾರಿಯನ್ನೇ ನೇಮಕ ಮಾಡಿದ್ದಾರೆ. ಬೆಂಗಳೂರು ಮೂಲದ ವಿಜಯ್ ಕಿರಣ್ ಆನಂದ್ ಅವರು ಮಹಾಕುಂಭಮೇಳದ ಸಾರಥ್ಯವಹಿಸಿದ್ದಾರೆ.

    ಇದನ್ನೂ ಓದಿ: ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?

    ವಿಜಯ್ ಕಿರಣ್ ಆನಂದ್ ಈ ಹಿಂದೆ ಗೋರಖ್ ಪುರ ಜಿಲ್ಲಾಧಿಕಾರಿಯಾಗಿದ್ದರು. ಈ ವೇಳೆ ವಿಜಯ್ ಕಿರಣ್ ದಕ್ಷತೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಹತ್ತಿರದಿಂದ ನೋಡಿದ್ದರು. ಹೀಗಾಗಿ ಈಗ ಪ್ರಯಾಗರಾಜ್ ಜಿಲ್ಲಾಧಿಕಾರಿಯಾಗಿ ಅವರನ್ನೇ ನೇಮಿಸಿ ಮಹಾಕುಂಭ ಮೇಳದ ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ವಿಜಯ್ ಕಿರಣ್ ಆನಂದ್ ಅವರನ್ನು ಮಹಾಕುಂಭಮೇಳದ ಮೇಲಾಧಿಕಾರಿಯಾಗಿ ನೇಮಕ ಮಾಡಿದ್ದಾರೆ.

    ಈ ಹಿಂದೆ 2021ರ ಹರಿದ್ವಾರದ ಕುಂಭ ಮೇಳಕ್ಕೆ ಮೇಲಾಧಿಕಾರಿಯಾಗಿ ಕನ್ನಡಿಗ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರನ್ನು ನೇಮಿಸಲಾಗಿತ್ತು. ಇದೀಗ ಮತ್ತೊಬ್ಬ ಕನ್ನಡಿಗರ ನೇತೃತ್ವದಲ್ಲಿ ಪ್ರಯಾಗರಾಜ್ ನ ಮಹಾ ಕುಂಭಮೇಳ ನಡೆಯುತ್ತಿದೆ.

     

    Continue Reading

    LATEST NEWS

    ರಾಮೇಶ್ವರಂ ಕೆಫೆ ರೀತಿ 6 ಗಣ್ಯರ ಮನೆ ಸ್ಫೋ*ಟಿಸುವುದಾಗಿ ಬೆದ*ರಿಕೆ ಕರೆ

    Published

    on

    ಮಂಗಳೂರು/ಬೆಂಗಳೂರು : ರಾಮೇಶ್ವರಂ ಕೆಫೆ ರೀತಿ ಬಾಂ*ಬ್ ಬ್ಲಾ*ಸ್ಟ್ ಮಾಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿರುವ ಬಗ್ಗೆ ವರದಿಯಾಗಿದೆ. ಗಣರಾಜ್ಯೋತ್ಸವದಂದು ಬೆಂಗಳೂರಿನ ಆರು ಜನ ಗಣ್ಯರ ಮನೆ ಸ್ಫೋ*ಟಿಸುವುದಾಗಿ ಬೆ*ದರಿಕೆ ಬಂದಿದೆ. ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಆಗಂತುಕ ಬೆ*ದರಿಕೆ ಹಾಕಿದ್ದಾನೆ.

    ಸದ್ಯ ಬಾಂ*ಬ್ ಬೆ*ದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜ.9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂ*ಬ್ ಬ್ಲಾ*ಸ್ಟ್ ಮಾಡುವುದಾಗಿ ಹುಸಿ ಬಾಂ*ಬ್ ಎಂದು ಬೆ*ದರಿಕೆ ಹಾಕಿದ್ದಾನೆ. ಈ ಬಗ್ಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪರಿಚಿತ  ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ 6 ಜನರ ಹೆಸರು, ವಿಳಾಸವನ್ನು ಆಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.  ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟ ಪೊಲೀಸರು ಶಂಕಿತ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ಬಿಗ್‌ ಬಾಸ್‌ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
    ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತರ ನಿಯಂತ್ರಣ ಕೊಠಡಿಗೆ ಬಂದ ಹುಸಿ ಬಾಂ*ಬ್ ಬೆದ*ರಿಕೆ ಕರೆ ಆತಂಕ ಹುಟ್ಟು ಹಾಕಿದೆ. ಬೆಂಗಳೂರಿನಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲು ಇಲಾಖೆ ಸಿದ್ಧತೆ ನಡೆಸಿದೆ.

    Continue Reading

    BIG BOSS

    ಬಿಗ್‌ ಬಾಸ್‌ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?

    Published

    on

    ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್‌ ಆಗಿರುವ ಚೈತ್ರಾ ಕುಂದಾಪುರ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾತಿನಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಚೈತ್ರಾ ಕುಂದಾಪುರ ಬಿಗ್‌ ಬಾಸ್‌ ನಿಂದ ಎಲಿಮಿನೇಟ್‌ ಆಗಿ ಹೊರ ಬಂದಿದ್ದಾರೆ.

    ಚೈತ್ರಾ ಕುಂದಾಪುರ ಅವರು ಟಾಸ್ಕ್‌ಗಳಲ್ಲಿ ಅಷ್ಟಾಗಿ ಮಿಂಚಿರಲಿಲ್ಲ. ಆದರೆ ಮಾತು, ವಾದ, ವಾಗ್ವಾದಗಳಿಂದಲೇ ಬಿಗ್‌ ಬಾಸ್‌ ವೀಕ್ಷಕರ ಗಮನಸೆಳೆದಿದ್ದರು. ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ಚೈತ್ರಾ ಕುಂದಾಪುರ ನೇರವಾಗಿ ಮಾತನಾಡುತ್ತಿದ್ದರು. ತಮ್ಮ ಮಾತಿನಿಂದಲೇ ಹಲವು ಬಾರಿ ಮನೆಯವರ ಕೆಂಗಣ್ಣಿಗೆ ಸಹ ಚೈತ್ರಾ ಗುರಿಯಾಗಿದ್ದರು.

    ಚೈತ್ರಾ ಕುಂದಾಪುರ ಎಲಿಮಿನೇಟ್‌ ಆದ ವಿಚಾರ ತಿಳಿಯುತ್ತಿದ್ದಂತೆ ಅವರು ಬಿಗ್‌ ಬಾಸ್‌ ನಿಂದ ಪಡೆದ ಸಂಭಾವನೆ ಸುದ್ದಿ ವೈರಲ್‌ ಆಗುತ್ತಿದೆ. ಚೈತ್ರಾ ಕುಂದಾಪುರ ವಾರಕ್ಕೆ 1 ಲಕ್ಷದವರೆಗೆ ಸಂಭಾವನೆ ಪಡೆಯುತ್ತಿದ್ದರು ಎಂದು ಕೆಲವು ವರದಿಗಳಲ್ಲಿ ಹೇಳಲಾಗಿದೆ. ಈ ಪ್ರಕಾರ 15 ವಾರಗಳಿಗೆ ಒಟ್ಟು 15,00,000 ರೂಪಾಯಿ ಸಂಭಾವನೆ ಪಡೆದಂತಾಗುತ್ತದೆ. ಇದಲ್ಲದೇ ಚೈತ್ರಾ ಕುಂದಾಪುರ ಅವರಿಗೆ 1,50,000 ರೂಪಾಯಿ ಸ್ಪಾನ್ಸರ್‌ ಕಡೆಯಿಂದ ಬಹುಮಾನದ ಮೊತ್ತ ಸಿಗಲಿದೆ. ಜೊತೆಗೆ 50,000 ದ ಗಿಫ್ಟ್‌ ವೋಚರ್‌ ಸಹ ಸಿಗಲಿದೆ.

    ಇದೆಲ್ಲವನ್ನೂ ಒಟ್ಟುಗೂಡಿಸಿದರೆ ಚೈತ್ರಾ ಕುಂದಾಪುರ ಬಿಗ್‌ಬಾಸ್‌ ನಿಂದ ಒಟ್ಟು 16,50,000 ರೂಪಾಯಿ ಹಣ ಪಡೆದಂತಾಗುವುದು. (ಇದು ವರದಿಗಳನ್ನು ಮತ್ತು ವೈರಲ್‌ ಸಂಗತಿಗಳನ್ನು ಆಧರಿಸಿ ಬರೆದ ಸುದ್ದಿಯಾಗಿದೆ. ನಿಖರ ಮಾಹಿತಿಯಲ್ಲ.)

    Continue Reading

    LATEST NEWS

    Trending