Connect with us

LATEST NEWS

ಉಡುಪಿ: ಕಾರು, ಬಸ್ ಡಿಕ್ಕಿ- ಶಿಕ್ಷಕರಿಬ್ಬರು ಜೀವಾಂತ್ಯ..!

Published

on

ಕಾರು ಮತ್ತು ಬಸ್‌ ಢಿಕ್ಕಿ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಇಂದು ಸಂಭವಿಸಿದೆ.

ಉಡುಪಿ: ಕಾರು ಮತ್ತು ಬಸ್‌ ಢಿಕ್ಕಿ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಇಂದು ಸಂಭವಿಸಿದೆ.

ಮೃತಪಟ್ಟವರು ಉಡುಪಿ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಮತ್ತು ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮ ಶೇಖರ ಮೃತ ಪಟ್ಟವರು.

ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಮಧ್ಯಾಹ್ನ 1.30 ಕ್ಕೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು.

ಆ್ಯಂಬುಲೆನ್ಸ್ ಸಿಗದೆ ಯಾರೂ ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.

ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?

Published

on

ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.

ಮಳೆಯಾಗುವ ಸಾಧ್ಯತೆ :

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :

ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

Trending