LATEST NEWS
Udupi: ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಪಂಪ್‌ವೆಲ್,ಮೆಂಡನ್ ಮೇಲೆ ಪ್ರಕರಣ ದಾಖಲು..!
ಪ್ರಚೋದನಕಾರಿ ಭಾಷಣ ಹಿನ್ನೆಲೆ ಇಬ್ಬರು ಹಿಂದೂ ಮುಖಂಡರ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಇಬ್ಬರು ಹಿಂದೂ ಮುಖಂಡರ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗುರುವಾರದಂದು ಉಡುಪಿ ನಗರದಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳ ಹಾಗೂ ವಿವಿಧ ಹಿಂದು ಸಂಘಟನೆಗಳಿಂದ ಉಡುಪಿಯ ನೇತ್ರಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಅವರು ಉಗ್ರ ಭಾಷಣ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಇದೀಗ ಇವರ ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶರಣ್ ಪಂಪ್ ವೆಲ್ ಮಾತನಾಡಿ, ಹಿಂದೂ ಮಹಿಳೆಯರು ಕೈಯಲ್ಲಿ ಶಸ್ತ್ರ ತಲವಾರು ಹಿಡಿಯುವಂತೆ ಕರೆ ನೀಡಿದ್ದರೆ, ದಿನೇಶ್ ಮೆಂಡನ್ ಮಾತನಾಡಿ ಆದಿ ಉಡುಪಿ ಬೆತ್ತಲೆ ಪ್ರಕರಣವನ್ನು ಉಲ್ಲೇಖಿಸಿ ಭಾಷಣ ಮಾಡಿದ್ದರು.
ಕೃಷ್ಣಮಠ ಸಮೀಪದ ಪಾರ್ಕಿಂಗ್ ಏರಿಯಾದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಗಿತ್ತು.
ಇದೀಗ ವಿವಾದಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣಾ ಎಸ್ ಐ ಪುನೀತ್ ಮೂಲಕ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ.
DAKSHINA KANNADA
ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!
ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಅಮೆಮಾರ್‌ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
DAKSHINA KANNADA
ಇಂದು ಕರ್ನಾಟಕ ಬಂದ್: ಕರಾವಳಿಗರಿಂದ ನೈತಿಕ ಬೆಂಬಲ-ಬಸ್, ಹೊಟೇಲ್, ಶಾಲೆಗಳು ಎಂದಿನಂತೆ
ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.
ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
ARUN
05/08/2023 at 10:17 AM
FIRST YOU TEACH THEM HOW TO SPEAK IN PUBLIC-ALLY, IF U HAVE MIKE IN FRONT OF YOU ITS NOT MEAN YOU CAN SPEAK ANYTHING , TRY TO STOP PROVOCATIVE SPEECHES, ALL HAVE RIGHT TO PROTEST BUT IN LEGAL MEANER, WHY YOU PEOPLE NOT PROTESTED FOR VITLA RAPE CASE , NOW IN MULKY NEW VIDEO CASE … TRY TO CONCERNED ALL RELIGION EQUAL ALL MAKE MISTAKE , IF ANY ONE DO PROTEST TO PUNISH WITH REGARDS ALL RELIGION AND CAST